ಮೂಡುಬಿದಿರೆ: ಯುವತಿಗೆ ಸ್ಪ್ರೇ ಹಾಕಿ ಪ್ರಜ್ಞೆ ತಪ್ಪಿಸಿ ಚಿನ್ನ-ನಗದು ದೋಚಿದ ಕಳ್ಳರು!

Date:

spot_img

ಮೂಡುಬಿದಿರೆ: ಮೂಡುಬಿದಿರೆಯ ಅಳಿಯೂರಿನ ಖ್ಯಾತ ಪಾಕ ತಜ್ಞ ಪ್ರಶಾಂತ್ ಜೈನ್ ಅವರ ಮನೆಯಲ್ಲಿ ಹಗಲು ಹೊತ್ತಿನಲ್ಲೇ ದರೋಡೆ ನಡೆದಿದ್ದು, ಕಳ್ಳರು ಮೂರೂವರೆ ಲಕ್ಷ ರೂಪಾಯಿ ನಗದು ಹಾಗೂ 20 ಪವನ್ ಚಿನ್ನಾಭರಣ ದೋಚಿಕೊಂಡು ಪರಾರಿಯಾಗಿದ್ದಾರೆ.

ಘಟನೆ ನಿನ್ನೆ ಬೆಳಿಗ್ಗೆ 10:30ರ ಸುಮಾರಿಗೆ ನಡೆದಿದ್ದು, ಆಗ ಮನೆಯಲ್ಲಿ ಪ್ರಶಾಂತ್ ಜೈನ್ ಅವರ ಮಗಳ ಹೊರತು ಬೇರಾರೂ ಇರಲಿಲ್ಲ. ಪ್ರಶಾಂತ್ ಮತ್ತು ಅವರ ಮಗ ಅಡುಗೆ ಕೆಲಸಕ್ಕಾಗಿ ಮುಲ್ಕಿಗೆ ತೆರಳಿದ್ದರೆ, ಅವರ ಪತ್ನಿ ಶಿರ್ತಾಡಿಯಲ್ಲಿ ನಡೆದ ಕಾರ್ಯಕ್ರಮಕ್ಕೆ ಹೋಗಿದ್ದರು.

ಈ ಸಂದರ್ಭದಲ್ಲಿ ಕಳ್ಳರು ಮನೆಯೊಳಗೆ ನುಗ್ಗಿದ್ದು, ಕಪಾಟು ತೆರೆಯುವ ಸದ್ದು ಕೇಳಿದ ಕಾರಣ ಯುವತಿ ನೋಡಲು ಬಂದಾಗ, ಕಳ್ಳರು ಬೊಬ್ಬೆ ಹೊಡೆಯದಂತೆ ಆಕೆಯ ಬಾಯಿಗೆ ಒತ್ತಿ ಹಿಡಿದಿದ್ದಾರೆ. ಬಳಿಕ ಆಕೆಗೆ ಸ್ಪ್ರೇ ಹಾಕಿ ಪ್ರಜ್ಞೆ ತಪ್ಪಿಸಿದ ಬಳಿಕ ನಗದು ಮತ್ತು ಚಿನ್ನವನ್ನು ದೋಚಿಕೊಂಡು ಪರಾರಿಯಾಗಿದ್ದಾರೆ.

ನೆರೆಮನೆಯಲ್ಲಿರುವ ಸಂಬಂಧಿಕ ಮಹಿಳೆ ಮಧ್ಯಾಹ್ನ 12:30ರ ಸುಮಾರಿಗೆ ಬಂದು ಯುವತಿಯನ್ನು ಎಚ್ಚರಗೊಳಿಸಿದ ನಂತರ ಈ ಘಟನೆ ಬೆಳಕಿಗೆ ಬಂದಿದೆ.

ಘಟನಾ ಸ್ಥಳಕ್ಕೆ ಪಣಂಬೂರು ಎಸಿಪಿ ಶ್ರೀಕಾಂತ್ ಮತ್ತು ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ವಾನದಳ ಮತ್ತು ಪ್ರಾಯೋಗಿಕ ವಿಧಿ ವಿಜ್ಞಾನ ತಂಡ ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸಿದ್ದು, ಕಳ್ಳತನದಲ್ಲಿ ಸ್ಥಳೀಯ ವ್ಯಕ್ತಿಗಳ ಕೈವಾಡ ಇರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬೆಂಗಳೂರು: ಗರ್ಲ್‌ಫ್ರೆಂಡ್ ಮಾತನಾಡದ ನೋವಿಗೆ 41 ವರ್ಷದ ವ್ಯಕ್ತಿ ಆತ್ಮಹತ್ಯೆ

ಬೆಂಗಳೂರುದಲ್ಲಿ ಗರ್ಲ್‌ಫ್ರೆಂಡ್ ಮಾತನಾಡುತ್ತಿಲ್ಲ ಎಂಬ ಬೇಸರದಲ್ಲಿ 41 ವರ್ಷದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕೋವಿಡ್ ಆತಂಕ ಬೇಡ, ಎಚ್ಚರವಿರಲಿ: ಆರೋಗ್ಯ ಸಚಿವ ಯು.ಟಿ. ಖಾದರ್

ನೆರೆ ರಾಜ್ಯದಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಜನತೆಗೆ ಆರೋಗ್ಯ ಸಚಿವರು ಪ್ರಮುಖ ಎಚ್ಚರಿಕೆ ನೀಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಡಾ. ಶಿವಪ್ರಸಾದ್ ಶೆಟ್ಟಿಗೆ ಎನ್‌ಸಿಸಿ ತರಬೇತಿಯಲ್ಲಿ ಪ್ರಥಮ ಸ್ಥಾನ

ನಿಟ್ಟೆ ಸಂಸ್ಥೆಯ ಎನ್‌ಸಿಸಿ ಅಧಿಕಾರಿ ಡಾ. ಶಿವಪ್ರಸಾದ್ ಶೆಟ್ಟಿ ಮಹಾರಾಷ್ಟ್ರದ ಕಾಮ್ಟೀ ತರಬೇತಿಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಉಡುಪಿ ಪ್ರವಾಸೋದ್ಯಮ ಮ್ಯಾಸ್ಕಾಟ್ ಸ್ಪರ್ಧೆ: ನಿಟ್ಟೆಯಲ್ಲಿ ಜುಲೈ 25ಕ್ಕೆ ಆಯೋಜನೆ

ಉಡುಪಿ ಪ್ರವಾಸೋದ್ಯಮದ ಅಧಿಕೃತ ಮ್ಯಾಸ್ಕಾಟ್ ವಿನ್ಯಾಸ ಸ್ಪರ್ಧೆ ಜುಲೈ 25ರಂದು ನಿಟ್ಟೆಯಲ್ಲಿ ನಡೆಯಲಿದೆ. ಭಾಗವಹಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.