
ಕುಂದಾಪುರದಲ್ಲಿ ಕಾಲೇಜು ವಿದ್ಯಾರ್ಥಿಗಳ ಮೇಲಿನ ನೈತಿಕ ಪೊಲೀಸ್‌ಗಿರಿ ಪ್ರಕರಣದಲ್ಲಿ ತೀವ್ರ ದೌರ್ಜನ್ಯ ನಡೆಯುತ್ತಿದ್ದು, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ. ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಎಸ್‌ಪಿ, “ಕಾಲೇಜು ವಿದ್ಯಾರ್ಥಿಗಳು ಒಂದೇ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು, ಈ ಸಮಯದಲ್ಲಿ, ಕೆಲವರು ವಿದ್ಯಾರ್ಥಿಯ ಧರ್ಮವನ್ನು ವಿರೋಧಿಸಿ ಅವರ ಮೇಲೆ ಹಲ್ಲೆ ನಡೆಸಿರುವುದು ದೃಢಪಟ್ಟಿದೆ, ಹಲ್ಲೆಗೊಳಗಾದವರು ಅಪ್ರಾಪ್ತರು,” ಎಂದು ಅವರು ಮಾಹಿತಿ ನೀಡಿದರು.
ಈ ಬಗ್ಗೆ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ಕೆಲವರು ಕುಂದಾಪುರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿ ಬಸ್‌ನಲ್ಲಿದ್ದ ಯುವಕನ ವಿರುದ್ಧ ದೂರು ದಾಖಲಿಸುವಂತೆ ಒತ್ತಾಯಿಸಿದರು. ಆದರೆ, ಯುವಕರು ಅಪ್ರಾಪ್ತರಾಗಿರುವ ಕಾರಣ ಅವರ ವಿರುದ್ಧ ಯಾವುದೇ ಪ್ರಕರಣ ದಾಖಲಾಗಿಲ್ಲ.
“ಈ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ಮಾರ್ಗಸೂಚಿಗಳನ್ನು ಆಧರಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು. ಯಾವುದೇ ರೀತಿಯ ಹಿಂಸಾತ್ಮಕ ಅಥವಾ ಧಾರ್ಮಿಕ ಆಧಾರಿತ ದ್ವೇಷದ ಚಟುವಟಿಕೆಗಳನ್ನು ಅನುಮತಿಸಲಾಗುವುದಿಲ್ಲ,” ಎಂದು ಎಸ್ಪಿ ಡಾ. ಅರುಣ್ ಕೆ. ಸ್ಪಷ್ಟಪಡಿಸಿದರು.