ಅಳಿಯನಿಂದಲೇ ಅತ್ತೆಯ ಭೀಕರ ಕೊಲೆ: ತುಮಕೂರಿನ ಶವದ ತುಂಡುಗಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

Date:

spot_img

ತುಮಕೂರು: ಕೊರಟಗೆರೆ ರಸ್ತೆಗಳಲ್ಲಿ ಶವದ ತುಂಡುಗಳು ಪತ್ತೆಯಾಗಿದ್ದ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಅಳಿಯನೇ ತನ್ನ ಅತ್ತೆಯನ್ನು ಕೊಲೆ ಮಾಡಿ, ದೇಹವನ್ನು ತುಂಡು ತುಂಡಾಗಿ ಬಿಸಾಡಿರುವುದು ಬೆಳಕಿಗೆ ಬಂದಿದೆ. ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ಕ್ಷೇತ್ರದಲ್ಲಿ ನಡೆದ ಈ ಘಟನೆ ತೀವ್ರ ಸಂಚಲನ ಮೂಡಿಸಿತ್ತು.

ಪೊಲೀಸರು ಶವದ ಜಾಡು ಹಿಡಿದು ತನಿಖೆ ನಡೆಸಿದಾಗ, ಕೊಲೆಯಾದ ಮಹಿಳೆ ಲಕ್ಷ್ಮೀದೇವಮ್ಮ ಎಂಬುವವರ ಅಳಿಯ ಡಾ. ರಾಮಚಂದ್ರನೇ ಈ ಕೃತ್ಯದ ರೂವಾರಿ ಎಂಬುದು ಬಯಲಾಗಿದೆ. ವೃತ್ತಿಯಲ್ಲಿ ದಂತವೈದ್ಯನಾಗಿರುವ ರಾಮಚಂದ್ರ, ತನ್ನ ಸ್ನೇಹಿತರಾದ ಸತೀಶ್ ಮತ್ತು ಕಿರಣ್ ಎಂಬುವವರ ಸಹಾಯದಿಂದ ಈ ಹತ್ಯೆ ಮಾಡಿದ್ದಾನೆ.

ಕೋಳಾಲದಲ್ಲಿರುವ ಸತೀಶ್‌ನ ಫಾರ್ಮ್ ಹೌಸ್‌ನಲ್ಲಿ ಕೊಲೆ ನಡೆಸಿ, ಬಳಿಕ ದೇಹದ ಭಾಗಗಳನ್ನು ತುಂಡು ಮಾಡಿ ರಸ್ತೆಯಲ್ಲಿ ಎಸೆದಿದ್ದಾರೆ. ಕೊಲೆ ನಡೆದ ನಂತರ ಆರೋಪಿಗಳು ತಮ್ಮ ಮೇಲಿನ ಅನುಮಾನ ತಪ್ಪಿಸಿಕೊಳ್ಳಲು ಧರ್ಮಸ್ಥಳ ಯಾತ್ರೆಗೆ ಹೋಗಿದ್ದರು. ಆದರೆ, ಅತ್ತೆಯ ಕೊಲೆಯಾದ ನಂತರ ಅಳಿಯ ಸ್ಥಳದಲ್ಲಿ ಇಲ್ಲದಿರುವುದು ಪೊಲೀಸರ ಅನುಮಾನಕ್ಕೆ ಕಾರಣವಾಗಿತ್ತು. ತನಿಖೆ ತೀವ್ರಗೊಂಡಾಗ ಕೃತ್ಯ ಬಯಲಿಗೆ ಬಂದಿದೆ. ಸದ್ಯ ಕೊರಟಗೆರೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.