spot_img

ಮಗು ಹಠ ಮಾಡುತ್ತದೆ, ಮಾತು ಕೇಳುವುದಿಲ್ಲ ಎಂದು ಕಾದ ಕಬ್ಬಿಣದ ಸಲಾಕೆಯಿಂದ ಬರೆ ಹಾಕಿದ ತಾಯಿ

Date:

spot_img

ಹುಬ್ಬಳ್ಳಿ : ಮಗು ಹಠವಾಡುತ್ತದೆ, ಮಾತು ಕೇಳುವುದಿಲ್ಲ ಎಂಬ ಕಾರಣಕ್ಕೆ ತಾಯಿ ಮೂವರು ವರ್ಷದ ಗಂಡು ಮಗುವಿನ ಮೇಲೆ ಕಾದ ಕಬ್ಬಿಣದ ಸಲಾಕೆಯಿಂದ ಬರೆ ಹಾಕಿರುವ ಅಮಾನುಷ ಘಟನೆ ಹುಬ್ಬಳ್ಳಿಯ ಟಿಪ್ಪು ನಗರದಲ್ಲಿ ಬೆಳಕಿಗೆ ಬಂದಿದೆ.

ಆರೋಪಿಯಾಗಿರುವ ಅನುಷಾ ಎಂಬ ಮಹಿಳೆ, ಹುಬ್ಬಳ್ಳಿಯ ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಕಳೆದ ಕೆಲವು ದಿನಗಳಿಂದ ಮಗುವಿಗೆ ಹಿಂಸೆ ಮಾಡುತ್ತಿದ್ದಳು ಎನ್ನಲಾಗಿದೆ. ಮಗುವಿನ ಪಾದ, ಮುಖ, ಮೊಣಕಾಲು, ಕುತ್ತಿಗೆ ಸೇರಿ ಹಲವಾರು ಭಾಗಗಳಲ್ಲಿ ಗಾಯಗಳ ಗುರುತುಗಳು ಕಂಡುಬಂದಿವೆ.

ಅನುಷಾ ಪತಿಯಿಂದಲೂ ದೂರವಾಗಿದ್ದು, ಹೆತ್ತವರಿಂದಲೂ ಬೇರೆಯಾಗಿ ತನ್ನ ಒಬ್ಬನೇ ಮಗುವಿನೊಂದಿಗೆ ವಾಸವಾಗಿದ್ದಳು. ಈ ಮಹಿಳೆಯ ವಿರುದ್ಧ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಮಕ್ಕಳ ಹಕ್ಕುಗಳ ರಕ್ಷಣಾ ಸಮಿತಿಯ ಸದಸ್ಯರು ದೂರು ದಾಖಲಿಸಿದ್ದಾರೆ.

ಹಿಂಸೆಗೊಳಗಾದ ಮಗುವನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯಕೀಯ ಚಿಕಿತ್ಸೆಗೆ ಒಳಪಡಿಸಲಾಗಿದೆ. ಮಗುವಿನ ದೇಹದಲ್ಲಿ ಕೆಲವು ಕಡೆ ಸುಟ್ಟ ಗಾಯಗಳು ಕಂಡುಬಂದಿವೆ ಎಂದು ವೈದ್ಯರು ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕೋಸು ತರಕಾರಿಯಲ್ಲ, ಅದೊಂದು ಸೂಪರ್ ಫುಡ್! ದೇಹದ ರಕ್ಷಣೆಗೆ ಇದರ ಪಾತ್ರ ಅತ್ಯಗತ್ಯ ಏಕೆ?

ಸಾಮಾನ್ಯವಾಗಿ ಆಹಾರದಲ್ಲಿ ಹಿಂದುಳಿದಿರುವ ಕೋಸು, ವಾಸ್ತವವಾಗಿ ಆರೋಗ್ಯದ ಭಂಡಾರವೇ ಸರಿ

ಪರ್ಕಳ: ಅಗ್ರಹಾರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಾಳೆಯಿಂದ ಸಿಂಹಮಾಸದ ವಿಶೇಷ ಪೂಜೆ

ಹೆರ್ಗ ಗ್ರಾಮದ ಅಗ್ರಹಾರದಲ್ಲಿರುವ ಶ್ರೀ ಮಹಾವಿಷ್ಣುಮೂರ್ತಿ ಮುಖ್ಯಪ್ರಾಣ ದೇವಸ್ಥಾನದಲ್ಲಿ ಸಿಂಹಮಾಸದ ವಿಶೇಷ ಪೂಜೆಯಾದ ಸೋಣಾರತಿಯು ನಾಳೆಯಿಂದ ಆರಂಭಗೊಳ್ಳಲಿದೆ.

ದಿನ ವಿಶೇಷ – ರಾಷ್ಟ್ರೀಯ ಲಾಭರಹಿತ ಸಂಸ್ಥೆಗಳ ದಿನ

ಈ ದಿನದ ಮುಖ್ಯ ಗುರಿ, ಸಮಾಜಕ್ಕೆ ಸಹಾಯ ಮಾಡುವ ಅಸಂಖ್ಯಾತ ಸಂಸ್ಥೆಗಳ ಮಹತ್ವದ ಕೊಡುಗೆಗಳನ್ನು ಗುರುತಿಸುವುದು

ನಾಳೆ ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಾಲಯದಲ್ಲಿ ಸಿಂಹ ಸಂಕ್ರಮಣ ಆಚರಣೆ

ಪೆರ್ಡೂರು ಮಹತೋಭಾರ ಶ್ರೀ ಅನಂತಪದ್ಮನಾಭ ದೇವಾಲಯದಲ್ಲಿ 2025ರ ಆಗಸ್ಟ್ 17ರಂದು (ರವಿವಾರ) ಸಿಂಹ ಸಂಕ್ರಮಣ ಮಹೋತ್ಸವ ಭಕ್ತಿಭಾವದಿಂದ ಜರಗಲಿದೆ.