spot_img

ಶೈಕ್ಷಣಿಕ ಜಿಲ್ಲೆ ಶಿರಸಿಯಲ್ಲಿ ಪ್ರೇರಣಾ ಶಿಬಿರ 2025-ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಕಾರ್ಕಳ

Date:

spot_img

ಕ್ರಿಯೇಟಿವ್‌ ಶಿಕ್ಷಣ ಪ್ರತಿಷ್ಠಾನ ಕಾರ್ಕಳದ ಆಶ್ರಯದಲ್ಲಿ ಶೈಕ್ಷಣಿಕ ಜಿಲ್ಲೆ ಶಿರಸಿಯಲ್ಲಿ ಪ್ರೇರಣಾ ಶಿಬಿರ 2025
ಉಪ ನಿರ್ದೇಶಕರ ಕಾರ್ಯಾಲಯ, ಶಾಲಾ ಶಿಕ್ಷಣ ಇಲಾಖೆ ಶಿರಸಿ ಹಾಗೂ ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಕಾರ್ಕಳ ಇದರ ಸಂಯುಕ್ತ ಆಶ್ರಯದಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗಾಗಿ ವಸತಿಯುತ ಪ್ರೇರಣಾ ಶಿಬಿರದ ಉದ್ಘಾಟನಾ ಸಮಾರಂಭ 27.01.2025 ರಂದು ಲಯನ್ಸ್ ಪ್ರೌಢಶಾಲಾ ಸಭಾಂಗಣ, ಶಿರಸಿ (ಉ. ಕ )ಯಲ್ಲಿ ಉದ್ಘಾಟನೆಗೊಂಡಿತು.
ಉದ್ಘಾಟಕರಾಗಿ ಆಗಮಿಸಿದ ಶಿರಸಿ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆಯ ನಿವೃತ್ತ ನಿರ್ದೇಶಕರಾದ ಎಂ.ಎಸ್ ಪ್ರಸನ್ನಕುಮಾರ್ ರವರು ಪ್ರೇರಣಾ ಶಿಬಿರ ಸಾಗಿ ಬಂದ ಹಾದಿಯ ಕುರಿತು ಮಾತನಾಡಿದರು. ಕಳೆದ ಬಾರಿಯ ವಾರ್ಷಿಕ ಫಲಿತಾಂಶದಲ್ಲಿ ಶಿರಸಿ ಶೈಕ್ಷಣಿಕ ಜಿಲ್ಲೆಯ 39 ವಿದ್ಯಾರ್ಥಿಗಳು ರಾಜ್ಯದ ಮೊದಲ 10 ಅತ್ಯುತ್ತಮ ಅಂಕಗಳೊಂದಿಗೆ ಗುರುತಿಸಿಕೊಂಡಿದ್ದು, ಈ ಪ್ರೇರಣಾ ಶಿಬಿರಕ್ಕೆ ಸಹಕರಿಸುತ್ತಿರುವ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ, ಕಾರ್ಕಳದ ಸಹಕಾರವನ್ನು ಸ್ಮರಿಸಿದರು.
ಕ್ರಿಯೇಟಿವ್‌ ಶಿಕ್ಷಣ ಪ್ರತಿಷ್ಠಾನ ಕಾರ್ಕಳದ ಸಹ ಸಂಸ್ಥಾಪಕರಾದ ಗಣಪತಿ ಭಟ್ ಕೆ.ಎಸ್ ರವರು ಎಸ್.ಎಸ್.ಎಲ್.ಸಿ ಯ ಪ್ರತಿಭಾನ್ವಿತ ವಿದ್ಯಾರ್ಥಿಗಳು ಹೆಚ್ಚು ಅಂಕಗಳನ್ನು ಪಡೆಯುವ ಸಲುವಾಗಿ ವಿಶೇಷ ತರಬೇತಿ ನೀಡುವ ಈ ಪ್ರೇರಣಾ ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳುವಂತಾಗಲಿ ಎಂದು ಶುಭ ಹಾರೈಸಿದರು. ವಿದ್ಯಾರ್ಜನೆಯು ಪ್ರಾಮಾಣಿಕ ಪ್ರಯತ್ನ, ನಿರಂತರ ಶ್ರಮದ ನೆಲೆಯಲ್ಲಿ ಪ್ರಾಪ್ತ ವಾಗುವುದು
ಎಂದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀ ಎಂ.ಎಸ್ ಹೆಗಡೆ, ಪ್ರಾಚಾರ್ಯರು, ಡಯಟ್ ಶಿರಸಿ ಇವರು ಮಾತನಾಡಿ ಸ್ಪರ್ಧಾತ್ಮಕ ಜಗತ್ತಿನಲ್ಲಿ ಗುರುತಿಸಿಕೊಳ್ಳಲು ಇಂತಹ ಪ್ರೇರಣಾ ಶಿಬಿರಗಳು ಪ್ರೇರಣೆಯಾಗಲಿ ಎಂದರು. ಶ್ರೀ ಸದಾನಂದ ಸ್ವಾಮಿ, ಶಿಕ್ಷಣಾಧಿಕಾರಿಗಳು, ಉಪನಿರ್ದೇಶಕರ ಕಛೇರಿ, ಶಿರಸಿ ಇವರು ವಿದ್ಯಾರ್ಥಿಗಳ ಪ್ರಯತ್ನ, ಶಿಕ್ಷಕರ ಪ್ರಯತ್ನದ ಜೊತೆ ಜೊತೆಗೆ ಪ್ರೇರಣ ಶಿಬಿರವು ವಿದ್ಯಾರ್ಥಿಗಳ ಉತ್ತಮ ಫಲಿತಾಂಶಕ್ಕೆ ಸಹಕಾರಿಯಾಗಲಿದೆ ಎಂದರು. ಲಯನ್ಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಲಯನ್ ಲೋಕೇಶ್ ಹೆಗಡೆಯವರು ಪ್ರೇರಣಾ ಶಿಬಿರದಲ್ಲಿ ಸಂಸ್ಕಾರಯುತ ಶಿಕ್ಷಣ ಪಡೆಯಲಿರುವ ವಿದ್ಯಾರ್ಥಿಗಳು ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳುವಂತಾಗಲಿ ಎಂದು ಶುಭ ಹಾರೈಸಿದರು.
ವೇದಿಕೆಯಲ್ಲಿ ಶ್ರೀ ಮುರಾರಿ ಭಟ್, ವ್ಯವಸ್ಥಾಪಕರು, ರಾಮಕೃಷ್ಣ ಸ್ಟುಡೆಂಟ್ ಹೋಮ್, ಶಿರಸಿ, ಲಯನ್ಸ್ ಪ್ರೌಢಶಾಲಾ ಮುಖ್ಯ ಶಿಕ್ಷಕರಾದ ಶಶಾಂಕ್ ಹೆಗಡೆ ರವರು ಉಪಸ್ಥಿತರಿದ್ದರು.
ಸಮಾರಂಭದಲ್ಲಿ ಶಿರಸಿ ಶೈಕ್ಷಣಿಕ ಜಿಲ್ಲಾ 6 ತಾಲೂಕಿನ ಕನ್ನಡ ಮತ್ತು ಆಂಗ್ಲ ಮಾಧ್ಯಮದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು, ಸಿಬ್ಬಂದಿ ವರ್ಗದವರು, ಪಾಲಕ ಪೋಷಕರು, ಕ್ರಿಯೇಟಿವ್‌ ಶಿಕ್ಷಣ ಸಂಸ್ಥೆ ಕಾರ್ಕಳದ ಪಿ ಆರ್ ಓ ಲಿಶಾನ್ ಗೌಡ ಮತ್ತಿತರರು ಪಾಲ್ಗೊಂಡಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಇಂಡೋನೇಷ್ಯಾದಲ್ಲಿ ಭಯಾನಕ ಹಡಗು ಅಗ್ನಿ ಅವಘಡ: 280 ಪ್ರಯಾಣಿಕರ ಪೈಕಿ ಹಲವರು ನಾಪತ್ತೆ

ಇಂಡೋನೇಷ್ಯಾದ ಉತ್ತರ ಸುಲವೇಸಿಯಲ್ಲಿರುವ ತಾಲಿಸ್ ದ್ವೀಪದ ಸಮೀಪ 280 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಕೆಎಂ ಬಾರ್ಸಿಲೋನಾ ವಿಎ (KM Barcelona VA) ಹಡಗಿನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ.

“ಬನ್ನಂಜೆ 90 ಉಡುಪಿ ನಮನ”: ಪುತ್ತಿಗೆ ಶ್ರೀಗಳಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

ಉಡುಪಿಯ ಅಭಿಮಾನಿಗಳ ವತಿಯಿಂದ ಆಗಸ್ಟ್ 3ರಂದು ಎಂಜಿಎಂ ಕಾಲೇಜಿನಲ್ಲಿ ನಡೆಯಲಿರುವ "ಬನ್ನಂಜೆ 90 ಉಡುಪಿ ನಮನ" ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಪರ್ಯಾಯ ಪುತ್ತಿಗೆ ಮಠದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಭಾನುವಾರ ಬಿಡುಗಡೆಗೊಳಿಸಿದರು.

ಎಸ್‌ಐಟಿಯಿಂದ ಹಿಂದೆ ಸರಿದ ಇಬ್ಬರು ಐಪಿಎಸ್‌ ಅಧಿಕಾರಿಗಳು: ಧರ್ಮಸ್ಥಳ ಪ್ರಕರಣಕ್ಕೆ ಹೊಸ ತಿರುವು

ಧರ್ಮಸ್ಥಳ ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ದಳ (ಎಸ್‌ಐಟಿ) ದಿಂದ ಇಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳು ಹೊರಗುಳಿಯಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.

ಬಿಗ್ ಬಾಸ್ ವಿನ್ನರ್ ರಾಹುಲ್ ಸಿಪ್ಲಿಗಂಜ್‌ಗೆ 1 ಕೋಟಿ ಬಹುಮಾನ ಘೋಷಿಸಿದ ತೆಲಂಗಾಣ ಸಿಎಂ

ಜನಪ್ರಿಯ ರಿಯಾಲಿಟಿ ಶೋ 'ಬಿಗ್ ಬಾಸ್' ವಿಜೇತ ಮತ್ತು ಆಸ್ಕರ್ ಪ್ರಶಸ್ತಿ ವಿಜೇತ 'ಆರ್‌ಆರ್‌ಆರ್‌' ಚಿತ್ರದ 'ನಾಟು ನಾಟು' ಹಾಡಿಗೆ ಧ್ವನಿಯಾಗಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಿರುವ ತೆಲಂಗಾಣದ ಗಾಯಕ ರಾಹುಲ್ ಸಿಪ್ಲಿಗಂಜ್‌ಗೆ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಒಂದು ಕೋಟಿ ರೂಪಾಯಿ ಬಹುಮಾನ ಘೋಷಿಸಿದ್ದಾರೆ.