ಮೂಡಬಿದ್ರೆಯ ಬಸ್ಸಿನಲ್ಲಿ ಕಾಮುಕನಿಂದ ಹೆಣ್ಣು ಮಕ್ಕಳಿಗೆ ಕಿರುಕುಳ ಸುಮೋಟ ಕೇಸು ದಾಖಲಿಸುವಂತೆ ಆಗ್ರಹ : ಶ್ರೀಮತಿ ರಮಿತಾ ಶೈಲೇಂದ್ರ

Date:

spot_img
ramita11

ಮೂಡಬಿದ್ರೆ ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಓರ್ವ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದರೂ ಪೊಲೀಸ್ ಇಲಾಖೆ ಮೌನ ವಹಿಸಿದೆ , ಸದ್ರಿ ವಿಡಿಯೋದಲ್ಲಿ ಯುವತಿಯ ಮುಖ ಚಹರೆ ಸರಿಯಾಗಿ ಕಂಡು ಬರದ ಕಾರಣ ಗುರುತಿಸಲು ಅಸಾಧ್ಯವಾಗಿರುತ್ತದೆ. ಈ ಬಗ್ಗೆ ಆತನನ್ನು ಠಾಣೆಗೆ ಕರೆಯಿಸಿ ವಿಚಾರಿಸಲಾಗಿದ್ದು , ಆತನಿಗೂ ಸಹ ಸಂತ್ರಸ್ತ ಯುವತಿಯ ಬಗ್ಗೆ ಮಾಹಿತಿ ಇರುವುದಿಲ್ಲ. ಆದುದರಿಂದ ಸಂತ್ರಸ್ತ ಯುವತಿ ಅಥವಾ ಈ ವ್ಯಕ್ತಿಯಿಂದ ತೊಂದರೆಗೊಳಗಾದ ಯಾರಾದರೂ ನೇರವಾಗಿ ಪೊಲೀಸ್ ಠಾಣೆಗೆ ಬಂದು ದೂರನ್ನು ನೀಡಿದರೆ ಈ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮೂಡಬಿದ್ರೆ ಪೊಲೀಸ್ ಠಾಣೆ ಪೊಲೀಸ್ ನಿರೀಕ್ಷಕ ಸಂದೇಶ್ P G ಹೇಳಿಕೆ ನೀಡಿದ್ದಾರೆಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಇದನ್ನು ತೀವ್ರವಾಗಿ ಹಿಂದೂ ಸಮಾಜದ ಮಾತೃ ಶಕ್ತಿ ವಿರೋಧಿಸುತ್ತದೆ. ಆಕೆ ಯಾರೇ ಆಗಿರಲಿ ಹೆಣ್ಣು ಎಂಬುವಂತಹ ಪರಿಜ್ಞಾನ ನಮಗಿದೆ. ಅವಳಿಗೆ ಕಿರುಕುಳ ನೀಡುವುದು ಕಂಡುಬಂದರೂ ಕೂಡ ನಿಮಗೆ ಸುಮೋಟ ಕೇಸು ದಾಖಲಿಸಲು ಯಾವ ದೂರಿನ ಅಗತ್ಯವಿಲ್ಲವೆಂದು ಭಾವಿಸುತ್ತೇನೆ, ಸಮಾಜದಲ್ಲಿ ಇಂಥ ಅನೈತಿಕತೆ ಎದ್ದು ಕಂಡಾಗ ಸಮಾಜವನ್ನು ಕಾಪಾಡುವಂತಹ ಜವಾಬ್ದಾರಿ ಪೊಲೀಸ್ ಇಲಾಖೆಗೆ ಇರುತ್ತದೆ. ಹಾಗಾಗಿ ಇದನ್ನು ತಳ್ಳಿ ಹಾಕದೆ ಸುಮೋಟ ಕೇಸು ದಾಖಲಿಸಬೇಕೆಂದು ತಮ್ಮಲ್ಲಿ ಮಹಿಳೆಯರ ಪರವಾಗಿ ಆಗ್ರಹ ಪಡಿಸುತ್ತೇನೆ . ಜವಾಬ್ದಾರಿಯುತವಾಗಿ ನೀವು ನಡೆದುಕೊಳ್ಳದೆ ಇದ್ದಲ್ಲಿ ಮಹಿಳಾ ಆಯೋಗದ ಮುಂದೆ ದೂರನ್ನು ನೀಡುತ್ತೇವೆ ಮತ್ತು ಸುಮೋಟ ದೂರನ್ನು ದಾಖಲಿಸದಿದ್ದರೆ ಘಟನೆಯನ್ನು ಖಂಡಿಸಿ ಪ್ರತಿಭಟಿಸಿ ಮಾತೃಶಕ್ತಿಯ ಸಾಮರ್ಥ್ಯವನ್ನು ತೋರಿಸಬೇಕಾಗಬಹುದು ಎಂದು ಸಾಮಾಜಿಕ ಚಿಂತಕಿ ರಮಿತಾ ಶೈಲೇಂದ್ರ ರವರು ಪೊಲೀಸ್ ಇಲಾಖೆಯನ್ನು ಎಚ್ಚರಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಅಮೆರಿಕ-ಇರಾನ್ ಯುದ್ಧ: ಪಾಕಿಸ್ತಾನದಿಂದ ಶಾಂತಿ ಯತ್ನ

ಅಮೆರಿಕ ಮತ್ತು ಇರಾನ್ ನಡುವೆ ಯುದ್ಧ 10ನೇ ದಿನಕ್ಕೆ ಕಾಲಿಟ್ಟಿದ್ದು, ಶಾಂತಿ ಒಪ್ಪಂದಕ್ಕೆ ಪಾಕಿಸ್ತಾನದ ಮೂಲಕ ಪ್ರಯತ್ನ ಸಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ತೈಲ ಬೆಲೆ ಭಾರಿ ಏರಿಕೆ: ಇರಾನ್ ಅಮೆರಿಕ ಸಂಘರ್ಷದ ಪ್ರಭಾವ

ಮಧ್ಯಪ್ರಾಚ್ಯ ಯುದ್ಧದಿಂದಾಗಿ ಕಚ್ಚಾ ತೈಲ ದರದಲ್ಲಿ ಭಾರಿ ಏರಿಕೆ ಕಂಡಿದೆ. ಭಾರತಕ್ಕೆ ಇಂಧನ ಬಿಕ್ಕಟ್ಟಿನ ಭೀತಿ ಎದುರಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.