ಮುದ್ರಾಡಿ ಪ್ರೌಢಶಾಲೆಯಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮ

Date:

spot_img

ಹೆಬ್ರಿ : ಇತ್ತೀಚಿನ ದಿನಗಳಲ್ಲಿ ಹದಿಹರೆಯದ ಮಕ್ಕಳು ಮೊಬೈಲ್ ಗೀಳಿನಿಂದ ಹಾದಿ ತಪ್ಪುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಪರಿಚಿತರು, ಸಂಶಯಾಸ್ಪದ ವ್ಯಕ್ತಿಗಳು ತೊಂದರೆ ಕೊಟ್ಟಲ್ಲಿ ತಮ್ಮನ್ನು ರಕ್ಷಣೆ ಮಾಡಿಕೊಳ್ಳುವ ಜಾಣ್ಮೆಯನ್ನು ಮಕ್ಕಳು ಬಾಲ್ಯದಲ್ಲಿಯೇ ಅರಿತುಕೊಳ್ಳಬೇಕು.ದೇಶದ ಕಾನೂನುಗಳನ್ನು ಸದಾ ಪಾಲಿಸಬೇಕು. ಸುರಕ್ಷತೆಯ ನಿಯಮಗಳನ್ನು ಅನುಸರಿಸಬೇಕು ಪೋಕ್ಸೋ ಕಾಯಿದೆ, ಮಕ್ಕಳ ಹಕ್ಕುಗಳ ಬಗ್ಗೆ ತಿಳಿದುಕೊಂಡು ನಿಮ್ಮ ರಕ್ಷಣೆಯ ಜೊತೆಗೆ ಒಳ್ಳೆಯ ವಿದ್ಯಾಭ್ಯಾಸ ಪಡೆದು, ಹೆತ್ತವರ ಮತ್ತು ಶಿಕ್ಷಕರ ಮಾರ್ಗದರ್ಶನವನ್ನು ಸದಾ ಪಾಲಿಸಿಕೊಂಡು, ಪ್ರಜಾಪ್ರಭುತ್ವದ ಆಶಯಗಳನ್ನು ಈಡೇರಿಸುವ ಮೂಲಕ ದೇಶದ ಪ್ರಜ್ಞಾವಂತ ನಾಗರಿಕರಾಗಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಿ ಎಂದು ವರಂಗದ ನ್ಯಾಯವಾದಿ ವಿ. ಸುರೇಶ್ ಪೂಜಾರಿ ಹೇಳಿದರು.

ಅವರು ಮುದ್ರಾಡಿ ಎಂ. ಎನ್. ಡಿ. ಎಸ್. ಎಂ. ಅನುದಾನಿತ ಪ್ರೌಢಶಾಲೆಯಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ಕಾರ್ಕಳ ಹಾಗೂ ನ್ಯಾಯವಾದಿಗಳ ಸಂಘ (ರಿ.) ಕಾರ್ಕಳ ಇದರ ಆಶ್ರಯದಲ್ಲಿ ನಡೆದ ಉಚಿತ ಕಾನೂನು ಅರಿವು ಮಾಹಿತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ವೇದಿಕೆಯಲ್ಲಿ ವಕೀಲೆ ಸುಪ್ರೀತಾ, ಶಾಲಾ ವಿದ್ಯಾರ್ಥಿ ನಾಯಕ ಕಾರ್ತಿಕ್ ಉಪಸ್ಥಿತರಿದ್ದರು. ಶಾಲೆಯ ಮುಖ್ಯ ಶಿಕ್ಷಕ ಬಲ್ಲಾಡಿ ಚಂದ್ರಶೇಖರ ಭಟ್ ಅಧ್ಯಕ್ಷತೆ ವಹಿಸಿ, ಸ್ವಾಗತಿಸಿದರು. ಪಿ.ವಿ ಆನಂದ ಸಾಲಿಗ್ರಾಮ ಕಾರ್ಯಕ್ರಮ ನಿರೂಪಿಸಿ, ರಘುಪತಿ ಹೆಬ್ಬಾರ್ ವಂದಿಸಿದರು. ಶಿಕ್ಷಕರಾದ ಶ್ಯಾಮಲಾ, ಚಂದ್ರಕಾಂತಿ ಹೆಗ್ಡೆ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕರ್ನಾಟಕದಲ್ಲಿ ಇನ್‌ಫ್ಲುಯೆಂಜಾ ಜ್ವರದ ಭೀತಿ: ಆರೋಗ್ಯ ಇಲಾಖೆ ಅಲರ್ಟ್

ರಾಜ್ಯದಲ್ಲಿ ಹವಾಮಾನ ಬದಲಾವಣೆಯಿಂದಾಗಿ ಸಾಂಕ್ರಾಮಿಕ ಇನ್‌ಫ್ಲುಯೆಂಜಾ ಜ್ವರ ಹೆಚ್ಚಾಗುವ ಸಾಧ್ಯತೆಯಿದ್ದು, ಸಾರ್ವಜನಿಕರು ಎಚ್ಚರದಿಂದಿರಲು ಸೂಚನೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ರೋಹಿತ್ ಶರ್ಮಾ ನಿವೃತ್ತಿ ವದಂತಿಗೆ ಬ್ರೇಕ್, ಲಾರ್ಡ್ಸ್‌ನಲ್ಲಿ ಶತಕದ ದಾಖಲೆ

ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಶತಕ ಸಿಡಿಸಿ ನಿವೃತ್ತಿ ವದಂತಿಗಳನ್ನು ತಳ್ಳಿಹಾಕಿದ ರೋಹಿತ್ ಶರ್ಮಾ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಹಾಸನ ಬಸ್‌ನಲ್ಲಿ ಮಹಿಳಾ ಕಂಡಕ್ಟರ್-ಪ್ರಯಾಣಿಕಳ ಫೈಟ್ ವೈರಲ್

ಹಾಸನದಲ್ಲಿ ಮಹಿಳಾ ಕಂಡಕ್ಟರ್ ಹಾಗೂ ಪ್ರಯಾಣಿಕಳ ನಡುವೆ ಸೀಟಿಗಾಗಿ ನಡೆದ ಭೀಕರ ಜಗಳದ ವಿಡಿಯೋ ವೈರಲ್ ಆಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನಾರಾಯಣ ಗುರು ಜಯಂತಿ ಭಾಷಣ ಸ್ಪರ್ಧೆ 2026: ಉಡುಪಿಯಲ್ಲಿ ರಾಜ್ಯ ಮಟ್ಟದ ಸ್ಪರ್ಧೆ

ಉಡುಪಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಪ್ರಯುಕ್ತ ರಾಜ್ಯ ಮಟ್ಟದ ಆನ್‌ಲೈನ್ ಭಾಷಣ ಸ್ಪರ್ಧೆ ಆಯೋಜಿಸಲಾಗಿದೆ. ವಿಜೇತರಿಗೆ ಭಾರಿ ನಗದು ಬಹುಮಾನವಿದೆ, ಪೂರ್ಣ ಮಾಹಿತಿ ಇಲ್ಲಿದೆ ಓದಿ.