ಹೆಬ್ರಿಯಲ್ಲಿ ಅದ್ಧೂರಿ ಶಾರದೋತ್ಸವಕ್ಕೆ ಮುಹೂರ್ತ: ಆಮಂತ್ರಣ ಪತ್ರಿಕೆ ಬಿಡುಗಡೆ

Date:

spot_img

ಹೆಬ್ರಿ: ಮುದ್ರಾಡಿಯ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಅದ್ದೂರಿಯಾಗಿ ಆಯೋಜಿಸಿರುವ 6ನೇ ವರ್ಷದ ಶಾರದೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಸಮಿತಿ ಅಧ್ಯಕ್ಷರಾದ ಮಂಜುನಾಥ ಪೂಜಾರಿ ಅವರು ಶನಿವಾರ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸೆಪ್ಟೆಂಬರ್ 29 ರಂದು ಮುದ್ರಾಡಿ ಗುರುರಕ್ಷಾ ಸೌಹಾರ್ದ ಸಹಕಾರಿ ಸೊಸೈಟಿಯ ಆವರಣದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಈ ಬಾರಿಯ ಶಾರದೋತ್ಸವವು ಶಾರದ ಮಾತೆಯ ಪ್ರತಿಷ್ಠಾಪನೆಯೊಂದಿಗೆ ಪ್ರಾರಂಭವಾಗಲಿದೆ. ನಂತರ ಅಕ್ಷರಾಭ್ಯಾಸ, ಮಹಾಪೂಜೆ ಮತ್ತು ರಸಪ್ರಶ್ನೆ ಕಾರ್ಯಕ್ರಮಗಳು ನಡೆಯಲಿವೆ. ಸಭಾ ಕಾರ್ಯಕ್ರಮದಲ್ಲಿ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗೌರವಿಸಲಾಗುವುದು. ಅದರ ಜೊತೆಗೆ, ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು.

ಬಳಿಕ, ಅನ್ನ ಸಂತರ್ಪಣೆ ಕಾರ್ಯಕ್ರಮ ನಡೆಯಲಿದೆ. ಸಂಜೆ ವೇಳೆಗೆ, ಮನರಂಜನೆಗಾಗಿ ಸ್ಥಳೀಯ ಕಲಾವಿದರಿಂದ ಹಾಗೂ ಮಸ್ಕಿರಿ ಕುಡ್ಲ ತಂಡದವರಿಂದ ‘ತೆಲಿಕೆ ಬಂಜಿ ನಿಲಿಕೆ’ ಎಂಬ ಹಾಸ್ಯ ಕಾರ್ಯಕ್ರಮ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜಿತಗೊಂಡಿವೆ. ಕಾರ್ಯಕ್ರಮದ ಕೊನೆಯಲ್ಲಿ ವಿಸರ್ಜನಾ ಪೂಜೆ ಮತ್ತು ವಿವಿಧ ಭಜನಾ ಮಂಡಳಿಗಳಿಂದ ಕುಣಿತ ಭಜನೆಯೊಂದಿಗೆ ಶಾರದಾ ಮಾತೆಯ ಶೋಭಾಯಾತ್ರೆ ನಡೆಯಲಿದ್ದು, ಜಲಸ್ತಂಭನದೊಂದಿಗೆ ಕಾರ್ಯಕ್ರಮ ಮುಕ್ತಾಯಗೊಳ್ಳಲಿದೆ.

ಈ ಎಲ್ಲಾ ಕಾರ್ಯಕ್ರಮಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ, ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಸಮಿತಿ ಪದಾಧಿಕಾರಿಗಳು ವಿನಂತಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಸಮಿತಿಯ ಉಪಾಧ್ಯಕ್ಷರಾದ ಚಂದ್ರಶೇಖರ ಬಾಯರಿ, ಗೌರವ ಸಲಹೆಗಾರರಾದ ಗಣಪತಿ ಎಂ., ಶಶಿಕಲಾ ಡಿ. ಪೂಜಾರಿ, ಸನತ್ ಕುಮಾರ್ ಮುದ್ರಾಡಿ, ಸಂತೋಷ್ ಪೂಜಾರಿ ನೆಕ್ಕಾರ್ ಬೆಟ್ಟು, ಗುರುಪ್ರಸಾದ್ ಹೆಗ್ಡೆ ಕೊಳಂಬೆ ಸೇರಿದಂತೆ ಸಮಿತಿಯ ಅನೇಕ ಸದಸ್ಯರು ಉಪಸ್ಥಿತರಿದ್ದರು. ಕೋಶಾಧಿಕಾರಿ ಬಲ್ಲಾಡಿ ಚಂದ್ರಶೇಖರ ಭಟ್ ಸ್ವಾಗತಿಸಿದರೆ, ಗೌರವ ಸಲಹೆಗಾರರಾದ ಸಂತೋಷ್ ಕುಮಾರ್ ಶೆಟ್ಟಿ ವಂದಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ