
ನಂದಳಿಕೆ : ನಂದಳಿಕೆಯಲ್ಲಿರುವ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ತನ್ನ ರಜತ ಸಂಭ್ರಮದ ಸ್ಮರಣಾರ್ಥವಾಗಿ ಬಡ ಕುಟುಂಬವೊಂದಕ್ಕೆ ಮನೆ ನಿರ್ಮಿಸುವ ಮಹತ್ಕಾರ್ಯಕ್ಕೆ ಕೈಹಾಕಿದೆ. ಈ ಸಮಾಜಮುಖಿ ಕಾರ್ಯಕ್ಕೆ ಕಾರ್ಕಳದ ಕಾಂಗ್ರೆಸ್ ಮುಖಂಡ ಹಾಗೂ ಉದಯ ಕೃಷ್ಣಯ್ಯ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷರಾದ ಮುನಿಯಾಲು ಉದಯ ಶೆಟ್ಟಿ ಅವರು ಆರ್ಥಿಕವಾಗಿ ಬೆಂಬಲ ನೀಡುವ ಮೂಲಕ ಸಮಾಜದ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಇತ್ತೀಚೆಗೆ ಬೋಳ ಮೈಂದ್ಕಲ್ ಸಮೀಪದ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕುಟುಂಬದ ಮನೆಗೆ ಭೇಟಿ ನೀಡಿದ ಉದಯ ಶೆಟ್ಟಿ ಅವರು, ನಿರ್ಮಾಣ ಹಂತದಲ್ಲಿರುವ ಮನೆಯನ್ನು ಪರಿಶೀಲಿಸಿ, ಮನೆ ನಿರ್ಮಾಣಕ್ಕೆ ಅಗತ್ಯ ನೆರವು ನೀಡುವ ಭರವಸೆ ನೀಡಿದ್ದರು. ಅದರಂತೆಯೇ, ಅವರು ಸುಮಾರು 1.5 ಲಕ್ಷ ರೂಪಾಯಿ ಮೌಲ್ಯದ ಮೇಲ್ಛಾವಣಿ ಸಾಮಗ್ರಿಗಳನ್ನು ಉಚಿತವಾಗಿ ನೀಡಿದ್ದಾರೆ.