ಮೈಸೂರು ದಸರಾ ಉದ್ಘಾಟಕಿ ಆಯ್ಕೆ ವಿವಾದ ಸುಪ್ರೀಂ ಕೋರ್ಟ್‌ನಲ್ಲಿ: ಶುಕ್ರವಾರ ತುರ್ತು ವಿಚಾರಣೆ

Date:

spot_img
suprime court11

ಮೈಸೂರು: ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಖ್ಯಾತ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿದ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಈ ಕುರಿತು ಹೈಕೋರ್ಟ್ ನೀಡಿದ ಆದೇಶವನ್ನು ಪ್ರಶ್ನಿಸಿ ಹೆಚ್‌.ಎಸ್. ಗೌರವ್ ಎಂಬುವವರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ದಸರಾ ಮಹೋತ್ಸವವು ಸೆಪ್ಟೆಂಬರ್ 22ರಂದು ಆರಂಭವಾಗಲಿರುವುದರಿಂದ ಅರ್ಜಿದಾರರು, ಮುಖ್ಯ ನ್ಯಾಯಮೂರ್ತಿ ಗವಾಯಿ ಅವರ ಮುಂದೆ ತುರ್ತು ವಿಚಾರಣೆ ನಡೆಸುವಂತೆ ಮನವಿ ಮಾಡಿದ್ದಾರೆ. ಮನವಿಗೆ ಸಮ್ಮತಿಸಿದ ಸುಪ್ರೀಂ ಕೋರ್ಟ್, ಶುಕ್ರವಾರ (ಸೆಪ್ಟೆಂಬರ್ 19) ಈ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳುವುದಾಗಿ ತಿಳಿಸಿದೆ.

ಈ ವಿವಾದವು ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದು, ಹೈಕೋರ್ಟ್ ಆದೇಶದ ಬಳಿಕ ಸುಪ್ರೀಂ ಕೋರ್ಟ್ ಯಾವ ತೀರ್ಪು ನೀಡಲಿದೆ ಎಂಬುದು ಕುತೂಹಲ ಮೂಡಿಸಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ವಿಪ್ರ ಸ್ವಉದ್ಯಮ ಯೋಜನೆ: 2 ಲಕ್ಷ ಸಾಲಕ್ಕೆ ಅರ್ಜಿ ಆಹ್ವಾನ!

ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಸ್ವಉದ್ಯೋಗಕ್ಕೆ ಬಡ್ಡಿ ರಹಿತ/ಕಡಿಮೆ ಬಡ್ಡಿಯಲ್ಲಿ ಸಾಲ ಸೌಲಭ್ಯ. ಅರ್ಜಿ ಸಲ್ಲಿಸಲು 31-08-2026 ಕೊನೆ ದಿನ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬೆಂಗಳೂರು ಇಡಿ ದಾಳಿ: ಐಸಿಸ್ ಫಂಡಿಂಗ್ ಆರೋಪದ ಮೇಲೆ 8 ಕಡೆ ಶೋಧ

ಬೆಂಗಳೂರಿನಲ್ಲಿ ಐಸಿಸ್ ಉಗ್ರ ಸಂಘಟನೆಗೆ ಹಣಕಾಸು ನೆರವು ನೀಡಿದ ಆರೋಪದ ಮೇಲೆ ಇಡಿ ಅಧಿಕಾರಿಗಳು 8 ಕಡೆ ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕರ್ನೂಲು ಬಳಿ ಭೀಕರ ಕಾರು ಅಪಘಾತ: ರವಿಚಂದ್ರ ಶೆಟ್ಟಿ ದುರ್ಮರಣ

ಆಂಧ್ರದ ಕರ್ನೂಲು ಬಳಿ ನಡೆದ ಕಾರು ಅಪಘಾತದಲ್ಲಿ ಮಂಗಳೂರಿನ ರವಿಚಂದ್ರ ಶೆಟ್ಟಿ ನಿಧನರಾಗಿದ್ದಾರೆ. ಮೂವರಿಗೆ ಗಾಯಗಳಾಗಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.