ಡಿ.ಕೆ. ಶಿವಕುಮಾರ್ ಹೇಳಿಕೆಯಿಂದ ವಿವಾದ: ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿಯಲ್ಲ ಎಂಬ ಹೇಳಿಕೆ ಖಂಡಿಸಿದ ಯದುವೀರ್.

Date:

spot_img

ಮೈಸೂರು: ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿ ಮಾತ್ರವಲ್ಲ, ಎಲ್ಲರ ಆಸ್ತಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೀಡಿದ ಹೇಳಿಕೆಗೆ ಮೈಸೂರು ಸಂಸದ ಯದುವೀರ್ ಒಡೆಯರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಹೇಳಿಕೆ ಹಾಸ್ಯಾಸ್ಪದ ಮತ್ತು ಆಘಾತಕಾರಿಯಾಗಿದೆ ಎಂದು ಯದುವೀರ್ ವಾಗ್ದಾಳಿ ನಡೆಸಿದ್ದಾರೆ. ಗೌರಿ ವಿನಾಯಕನ ಪೂಜೆ ನಡೆಯುವ ಸಂದರ್ಭದಲ್ಲಿ ಇಂತಹ ಹೇಳಿಕೆಗಳು ಖಂಡನೀಯ ಎಂದು ಅವರು ಹೇಳಿದ್ದಾರೆ.

ಚಾಮುಂಡಿ ಬೆಟ್ಟಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದ್ದು, ಮಾರ್ಕಂಡೇಯರು ಇಲ್ಲಿ ತಪಸ್ಸು ಮಾಡಿದ್ದಾರೆ ಎಂದು ಯದುವೀರ್ ಸ್ಮರಿಸಿದರು. ಆ ಸಮಯದಲ್ಲಿ ಬೌದ್ಧ ಧರ್ಮವೊಂದನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಗಳು ಇರಲಿಲ್ಲ. ನಮ್ಮ ಧರ್ಮದ ಕುರಿತು ಇಂತಹ ಹೇಳಿಕೆ ನೀಡುವುದು ಸರಿಯಲ್ಲ ಎಂದು ಅವರು ಡಿಕೆ ಶಿವಕುಮಾರ್‌ಗೆ ತಿರುಗೇಟು ನೀಡಿದರು.

ಧಾರ್ಮಿಕ ಕೇಂದ್ರಗಳಿಗೆ ಎಲ್ಲರಿಗೂ ಪ್ರವೇಶವಿದೆ. ಆದರೆ ಪ್ರವೇಶ ಇದೆ ಎಂಬ ಕಾರಣಕ್ಕೆ ಅದು ಎಲ್ಲರಿಗೂ ಸೇರಿದ್ದು ಎನ್ನುವುದು ಸರಿಯಲ್ಲ. ಜಾತ್ಯಾತೀತ ದೃಷ್ಟಿಯಿಂದ ಇದನ್ನು ನೋಡಬಹುದೇ ಹೊರತು, ಧಾರ್ಮಿಕ ಕೇಂದ್ರದ ಮೇಲೆ ಹಕ್ಕು ಸಾಧಿಸುವುದು ಸರಿಯಲ್ಲ. ಇದು ಕೋಟ್ಯಾಂತರ ಜನರ ಭಾವನೆಗಳಿಗೆ ಧಕ್ಕೆ ತರುವಂತಹ ವಿಚಾರ. ಸರ್ಕಾರದ ಇಂತಹ ಬೇಜವಾಬ್ದಾರಿಯುತ ಹೇಳಿಕೆಗಳಿಂದ ಬೆಟ್ಟವನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಳ್ಳಲು ಪ್ರಯತ್ನಿಸುತ್ತಿದೆ. ಇದು ಕೇವಲ ಹಿಂದೂ ದೇವಾಲಯಗಳನ್ನು ಗುರಿಯಾಗಿಸಿಕೊಂಡು ಮಾಡುತ್ತಿರುವ ರಾಜಕೀಯ ಎಂದು ಯದುವೀರ್ ಆರೋಪಿಸಿದರು.

ಸರ್ಕಾರದ ವಿರುದ್ಧ ಹೋರಾಟದ ಎಚ್ಚರಿಕೆ:

ಈ ಹಿಂದೆಯೂ ಡಿ.ಕೆ. ಶಿವಕುಮಾರ್ ಅವರು ಆರ್.ಎಸ್.ಎಸ್ ಕುರಿತು ನೀಡಿದ ಹೇಳಿಕೆಗಳು ಮತ್ತು ನಂತರ ಕ್ಷಮೆ ಯಾಚಿಸಿದ ಘಟನೆಯನ್ನು ಯದುವೀರ್ ನೆನಪಿಸಿಕೊಂಡರು. ರಾಜ್ಯದಲ್ಲಿ ಅನೇಕ ಗಂಭೀರ ಸಮಸ್ಯೆಗಳಿರುವಾಗ ಸರ್ಕಾರ ಇಂತಹ ಹಾಸ್ಯಾಸ್ಪದ ಹೇಳಿಕೆಗಳನ್ನು ನೀಡುತ್ತಿದೆ ಎಂದು ಟೀಕಿಸಿದರು. ಇಂತಹ ನಿರ್ಧಾರಗಳು ಹಿಂದೆಯೂ ನಡೆದಿವೆ. ಆದರೆ ಧರ್ಮದ ವಿಚಾರ ಬಂದಾಗ ನಾವು ಯಾವುದೇ ಹೋರಾಟಕ್ಕೂ ಸಿದ್ಧರಿದ್ದೇವೆ. ಮುಂದಿನ ದಿನಗಳಲ್ಲಿ ಇದರ ವಿರುದ್ಧ ಹೋರಾಟ ನಡೆಸುವುದಾಗಿ ಯದುವೀರ್ ಎಚ್ಚರಿಕೆ ನೀಡಿದರು.

ಚಾಮುಂಡಿ ಬೆಟ್ಟವನ್ನು ಪ್ರಾಧಿಕಾರವಾಗಿ ಪರಿವರ್ತಿಸುವುದು ಸೂಕ್ತವಲ್ಲ. ಪ್ರಾಧಿಕಾರ ರಚಿಸಿದರೆ ಅದನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಪರಿವರ್ತಿಸಿ ಸರ್ಕಾರ ತನ್ನ ನಿಯಂತ್ರಣಕ್ಕೆ ತೆಗೆದುಕೊಳ್ಳುತ್ತದೆ. ಇದು ಸಂಭವಿಸಬಾರದು, ಚಾಮುಂಡಿ ಬೆಟ್ಟ ಧಾರ್ಮಿಕ ಕೇಂದ್ರವಾಗಿಯೇ ಉಳಿಯಬೇಕು ಎಂದು ಅವರು ಪ್ರತಿಪಾದಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಳೆಗಾಲದ ಜ್ವರ, ಸಾಂಕ್ರಾಮಿಕ ರೋಗ ತಡೆಗೆ ರಾಜ್ಯ ಸರ್ಕಾರ ಸನ್ನದ್ಧ

ಮಳೆಗಾಲದಲ್ಲಿ ವೈರಲ್ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಖರ್ಗೆ ವಾಗ್ದಾಳಿ: ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ತೀವ್ರ ಆಕ್ರೋಶ

ನೀಟ್ ಅಕ್ರಮ ಹಾಗೂ ಮಂದಿರದ ಟ್ರಸ್ಟ್ ವಿಚಾರವಾಗಿ ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಅನುಷ್ಠಾನಕ್ಕೆ ಸರ್ಕಾರ ಬದ್ಧ: ಸಿಎಂ ಡಿ.ಕೆ. ಶಿವಕುಮಾರ್

ವಿದ್ಯುತ್ ಯೋಜನೆಗಳ ಅನುಷ್ಠಾನಕ್ಕೆ ಸರ್ಕಾರ ಬದ್ಧವಾಗಿದೆ. ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಹಾಗೂ ಕೆಪಿಸಿಎಲ್ ಸಂಸ್ಥಾಪನಾ ದಿನದ ಪೂರ್ಣ ಮಾಹಿತಿ ಇಲ್ಲಿದೆ ಓದಿ.