
ಬೈಲೂರು: ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ, ಜಾರ್ಕಳ ಗಣಪತಿ ಆಚಾರ್ಯ ಹಾಗೂ ರತ್ನಾವತಿ ಆಚಾರ್ಯ ದಂಪತಿಗಳ ಪುತ್ರ ನಾಗಪ್ರಸಾದ್ ಅವರು ಕ್ರೀಡಾ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ.
ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಜಾವಲಿನ್ ಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಮುಡಿಗೇರಿಸಿಕೊಂಡಿದ್ದ ಇವರು, ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಜಿಲ್ಲೆಯನ್ನು ಪ್ರತಿನಿಧಿಸಿ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಇವರ ಈ ಸಾಧನೆಯನ್ನು ಗುರುತಿಸಿ ಶ್ರೀ ವಿಶ್ವಕರ್ಮ ಬ್ರಾಹ್ಮಣ ಸಮಾಜ ಸೇವಾ ಸಂಘ (ರಿ) ನೀರೆ ಬೈಲೂರು ಇವರ ವತಿಯಿಂದ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಲಾಗಿದೆ.



































