
ಪರ್ಯಾಯ ಶ್ರೀ ಪುತ್ತಿಗೆ ಮಠ , ಶ್ರೀ ಕೃಷ್ಣ ಮಠ , ಉಡುಪಿ
ವಿಶ್ವಗೀತಾ ಪರ್ಯಾಯ 2024-2026

ಉಡುಪಿ, ಜುಲೈ 29, 2025: ಇಂದು ನಾಗರಪಂಚಮಿಯ ಶುಭದಿನದಂದು ಉಡುಪಿ ಶ್ರೀಕೃಷ್ಣ ಮಠದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದವು. ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಶ್ರೀ ಪುತ್ತಿಗೆ ಕಿರಿಯ ಶ್ರೀಪಾದರಾದ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರು ಶ್ರೀಕೃಷ್ಣ ಮಠದ ಶ್ರೀ ಸುಬ್ರಹ್ಮಣ್ಯ ಗುಡಿಯಲ್ಲಿರುವ ಶ್ರೀ ನಾಗದೇವರಿಗೆ ಅಭಿಷೇಕ ನೆರವೇರಿಸಿ ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಆಶ್ಲೇಷಾಬಲಿ ಸೇವೆಯೂ ವಿಧಿವಿಧಾನಗಳೊಂದಿಗೆ ನಡೆಯಿತು. ನಾಗರಪಂಚಮಿಯ ಪವಿತ್ರ ದಿನದಂದು ನಾಗದೇವರ ಆರಾಧನೆಗೆ ಹೆಚ್ಚಿನ ಮಹತ್ವ ನೀಡಲಾಗುತ್ತದೆ.


