ತಮಿಳುನಾಡು ಬಿಜೆಪಿ ಅಧ್ಯಕ್ಷರಾಗಿ ನೈನಾರ್ ನಾಗೇಂದ್ರನ್ ಆಯ್ಕೆ – ಅಣ್ಣಾಮಲೈ ನಂತರದ ನೂತನ ನಾಯಕನಿಗೆ ಅಧಿಕೃತ ಮುದ್ರೆ

Date:

spot_img

ತಮಿಳುನಾಡು : ತಮಿಳುನಾಡಿನ ಮಾಜಿ ಐಪಿಎಸ್ ಅಧಿಕಾರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಕೆ. ಅಣ್ಣಾಮಲೈ ಅವರು ಸ್ವಯಂ ಪ್ರೇರಿತವಾಗಿ ಹುದ್ದೆಯಿಂದ ಕೆಳಗಿಳಿದ ಹಿನ್ನೆಲೆಯಲ್ಲಿ, ತಿರುನಲ್ವೇಲಿ ಶಾಸಕ ನೈನಾರ್ ನಾಗೇಂದ್ರನ್ ಅವರನ್ನು ಹೊಸ ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.

ತಮಿಳುನಾಡು ಬಿಜೆಪಿ ಅಧ್ಯಕ್ಷರ ಸ್ಥಾನಕ್ಕೆ ಚುನಾವಣೆಯು ಏಪ್ರಿಲ್ 12 ರಂದು ನಡೆಯಬೇಕಾಗಿತ್ತು. ಆದರೆ ನೈನಾರ್ ನಾಗೇಂದ್ರನ್ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವರು ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ನಾಮಪತ್ರ ಸಲ್ಲಿಕೆ ವೇಳೆ, ಅವರ ಹೆಸರು ಖುದ್ದಾಗಿ ಅಣ್ಣಾಮಲೈ ಅವರಿಂದ ನಾಮನಿರ್ದೇಶನಗೊಂಡಿತ್ತು, ಇದನ್ನು ಇತರ ನಾಯಕರು ಸಹ ಒಮ್ಮತದಿಂದ ಅಂಗೀಕರಿಸಿದರು.

ಬಿಜೆಪಿ ಪ್ರಧಾನ ಕಚೇರಿಯಿಂದ ಈ ಬಗ್ಗೆ ಅಧಿಕೃತ ಘೋಷಣೆ ಹೊರ ಬೀಳುವ ಸಾಧ್ಯತೆ ಇದೆ. ತಮಿಳುನಾಡಿನ ತೇವರ್ ಸಮುದಾಯದ ಪ್ರಮುಖ ನಾಯಕನಾಗಿ ನೈನಾರ್ ನಾಗೇಂದ್ರನ್ ಬಿಜೆಪಿ ಬೆಂಬಲಿಗರ ನಡುವೆ ಖಚಿತ ಸ್ಥಾನ ಪಡೆದುಕೊಂಡಿದ್ದಾರೆ. ಈ ಹುದ್ದೆಗೆ ವನತಿ ಶ್ರೀನಿವಾಸನ್ ಮತ್ತು ತಮಿಳಿಸೈ ಸೌಂದರರಾಜನ್ ಅವರ ಹೆಸರುಗಳು ಚರ್ಚೆಗೆ ಬಂದಿದ್ದರೂ ಅಂತಿಮವಾಗಿ ಹೈಕಮಾಂಡ್ ನಾಗೇಂದ್ರನ್ ಪರ ನಿರ್ಧಾರ ಕೈಗೊಂಡಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ