ಮಣಿಪಾಲದಲ್ಲಿ ಮಾದಕ ವಸ್ತು ಪತ್ತೆ: ಮೂವರು ಆರೋಪಿಗಳ ಬಂಧನ

Date:

spot_img

ಉಡುಪಿ : ಉಡುಪಿ ಜಿಲ್ಲೆ 80 ಬಡಗಬೆಟ್ಟು ಗ್ರಾಮದ ದಶರಥ ನಗರದಲ್ಲಿರುವ ಡೌನ್ ಟೌನ್ ಲಾಡ್ಜ್‌ನಲ್ಲಿ ಮಾದಕ ವಸ್ತುಗಳನ್ನು ಸಾಗಿಸುತ್ತಿದ್ದ ಮೂವರು ಆರೋಪಿಗಳನ್ನು ಮಣಿಪಾಲ ಪೊಲೀಸರು ಎಪ್ರಿಲ್ 22ರಂದು ಮಧ್ಯಾಹ್ನ ಬಂಧಿಸಿದ್ದಾರೆ. ಈ ಸಂಬಂಧ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಬಂಧಿತರಾದವರು ಕಾಪು ಮೂಲದ ಮುಹಮ್ಮದ್ ಅಝರುದ್ದೀನ್, ಮಹಾರಾಷ್ಟ್ರದ ಪುಣೆಯಿಂದ ಬಂದ ರಾಜೇಶ್ ಪ್ರಕಾಶ್ ಜಾದವ್ ಮತ್ತು ಮಲ್ಪೆ ಮೂಲದ ನಾಝಿಲ್ ಅಲಿಯಾಸ್ ಆಸೀಫ್ ಎಂಬವರಾಗಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಮಣಿಪಾಲ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ಅವರ ನೇತೃತ್ವದಲ್ಲಿ ಪೋಲಿಸರು ದಾಳಿ ನಡೆಸಿ ಆರೋಪಿಗಳನ್ನು ಡೌನ್ ಟೌನ್ ಲಾಡ್ಜ್‌ನಲ್ಲಿದ್ದ ರೂಮಿನಲ್ಲಿ ಬಂಧಿಸಿದ್ದಾರೆ.

ಆರೋಪಿಗಳಿಂದ ಪೊಲೀಸರು ರೂ. 40,000 ಮೌಲ್ಯದ 13.70 ಗ್ರಾಂ ಎಂಡಿಎಂಎ (MDMA) ಮತ್ತು ರೂ. 10,500 ಮೌಲ್ಯದ 225 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ. ಜೊತೆಗೆ 15 ಪ್ಲಾಸ್ಟಿಕ್ ಕವರ್‌ಗಳು, ಐದು ಸಿರಿಂಜ್‌ಗಳು, ಮೂರು 5 ಎಂಎಲ್ ಸ್ಟಿರೈಲ್ ವಾಟರ್‌ನ ಪ್ಲಾಸ್ಟಿಕ್ ಸೀಸೆಗಳು ಹಾಗೂ ರೂ. 5,500 ಮೌಲ್ಯದ ಎರಡು ಮೊಬೈಲ್‌ಫೋನ್‌ಗಳನ್ನೂ ವಶಪಡಿಸಿಕೊಂಡಿದ್ದಾರೆ.

ಈ ದಾಳಿಯು ಮಾದಕ ವಸ್ತುಗಳ ಅಕ್ರಮ ಸಾಗಣೆ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯ ಕಠಿಣ ನಿಗಾವನ್ನು ಮತ್ತೊಮ್ಮೆ ತೋರಿಸಿಕೊಟ್ಟಿದೆ. ಪ್ರಕರಣವನ್ನು ತನಿಖೆ ನಡೆಸಲಾಗುತ್ತಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.