
ಉಡುಪಿ : ಬಿಜೆಪಿ ರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಚಾಲಕ ಹಾಗೂ ಪ.ಬಂಗಾಲ ರಾಜ್ಯದ ಸಹ ಉಸ್ತುವಾರಿ ಅಮಿತ್ ಮಾಳವೀಯ ಅವರು ಬಿಜೆಪಿ ಉಡುಪಿ ಜಿಲ್ಲಾ ಕಛೇರಿಗೆ ಬೇಟಿ ನೀಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿಯವರು ಅಮಿತ್ ಮಾಳವೀಯ ಅವರನ್ನು ಶಾಲು ಹೊದೆಸಿ ಸನ್ಮಾನಿಸಿದರು.
ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಸರಲ್ ಆಪ್ ಪ್ರಮುಖ್ ಚಂದ್ರಶೇಖರ ಪ್ರಭು ಉಪಸ್ಥಿತರಿದ್ದರು.