
ಹೈದರಾಬಾದ್: ನಟ ಅಲ್ಲು ಅರ್ಜುನ್ ಮತ್ತು ನಿರ್ದೇಶಕ ಅಟ್ಲಿ ಕಾಂಬಿನೇಷನ್‌ನಲ್ಲಿ ಸಿದ್ಧವಾಗುತ್ತಿರುವ ಹೊಸ ಚಿತ್ರ ಟಾಲಿವುಡ್‌ನಲ್ಲಿ ಭಾರಿ ನಿರೀಕ್ಷೆ ಹುಟ್ಟುಹಾಕಿದೆ.
‘ಪುಷ್ಪ-2’ ಬಳಿಕ ಅಲ್ಲು ಅರ್ಜುನ್ ಹೊಸ ಚಿತ್ರಕ್ಕೆ 175 ಕೋಟಿ ರೂ. ಸಂಭಾವನೆ ಹಾಗೂ ಲಾಭದಲ್ಲಿ 15% ಪಾಲು ಪಡೆಯಲಿದ್ದಾರೆ ಎಂದು ಮೂಲಗಳು ತಿಳಿಸುತ್ತಿವೆ. ಸನ್ ಪಿಕ್ಚರ್ಸ್ ಈ ಚಿತ್ರಕ್ಕೆ ಬಂಡವಾಳ ಹಾಕಲಿದ್ದು, ಇದು ದಕ್ಷಿಣ ಭಾರತದ ನಟರ ಪೈಕಿ ಅತ್ಯಧಿಕ ಸಂಭಾವನೆ ಎನ್ನಲಾಗಿದೆ.

ಪೊಲಿಟಿಕಲ್ ಥ್ರಿಲ್ಲರ್ ಆಗಿರುವ ಈ ಚಿತ್ರದಲ್ಲಿ ಜಾಹ್ನವಿ ಕಪೂರ್ ನಾಯಕಿಯಾಗಿ, ಇನ್ನೊಬ್ಬ ಬಿಗ್ ಸ್ಟಾರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದಲ್ಲಿ ಅಮೆರಿಕನ್, ಕೊರಿಯನ್ ಸೇರಿದಂತೆ ಮೂರು ವಿದೇಶಿ ನಟಿಯರು ಭಾಗಿಯಾಗಲಿದ್ದಾರೆ ಎಂದು ವರದಿಯಾಗಿದೆ.
ಅಕ್ಟೋಬರ್‌ನಲ್ಲಿ ಚಿತ್ರದ ಶೂಟಿಂಗ್ ಆರಂಭವಾಗಲಿದ್ದು, ಅಟ್ಲಿ ಚಿತ್ರದ ನಂತರ ತ್ರಿವಿಕ್ರಮ್ ಶ್ರೀನಿವಾಸ್ ಜತೆ ಅಲ್ಲು ಅರ್ಜುನ್ ಮತ್ತೊಂದು ಸಿನಿಮಾ ಕೈಗೆತ್ತಿಕೊಳ್ಳಲಿದ್ದಾರೆ.