spot_img

ರಾಷ್ಟ್ರೀಯ ಸ್ಕೂಲ್ ಗೇಮ್ಸ್ , ಬಾಲಕಿಯರ ವಾಲಿಬಾಲ್ : ಕಾರ್ಕಳದ ಶಗುನ್ ಎಸ್. ವರ್ಮ ಹೆಗ್ಡೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Date:

spot_img

ಕಾರ್ಕಳ : ರಾಷ್ಟ್ರೀಯ ಸ್ಕೂಲ್ ಗೇಮ್ಸ್ ಫೆಡರೇಶನ್ ಇವರು ಆಯೋಜಿಸುವ 15 ವರ್ಷ ವಯೋಮಿತಿಯ ಒಳಗಿನ ಶಾಲಾ ಮಕ್ಕಳ ಬಾಲಕಿಯರ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಕರ್ನಾಟಕದ ವಾಲಿಬಾಲ್ ತಂಡದಲ್ಲಿ ಕಾರ್ಕಳ ಕ್ರೈಸ್ತಕಿಂಗ್ ಆಂಗ್ಲ ಮಾದ್ಯಮ ಶಾಲೆಯ 9ನೇ ತರಗತಿಯ ಶಗುನ್ ಎಸ್. ವರ್ಮ ಹೆಗ್ಡೆ ಸ್ಥಾನವನ್ನು ಪಡೆದಿದ್ದಾರೆ.

ಆಗಸ್ಟ್ ‌20 ರಂದು ಬೆಂಗಳೂರಿನಲ್ಲಿ‌ ನಡೆದ ಆಯ್ಕೆ ಶಿಬಿರದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳ ಆಟಗಾರು ಭಾಗವಹಿಸಿದ್ದು ಕರ್ನಾಟಕದಿಂದ ಆಯ್ಕೆಯಾದ ಒಟ್ಟು ಎಂಟು ಆಟಗಾರರಲ್ಲಿ ಶಗುನ್ ಎಸ್ ವರ್ಮ ಹೆಗ್ಡೆ ಉಡುಪಿ ಜಿಲ್ಲೆಯ ಏಕೈಕ ಆಟಗಾರ್ತಿಯಾಗಿದ್ದಾರೆ.

ಈ ತಿಂಗಳ 28 ರಿಂದ ಮೂರು ದಿನಗಳ ಕಾಲ ಪುಣೆಯಲ್ಲಿ ನಡೆಯುವ ರಾಷ್ಟ್ರಮಟ್ಟದ ಶಿಬಿರದಲ್ಲಿ ವಿಶ್ವ ತಂಡದ ಆಯ್ಕೆ ನಡೆಯಲಿದ್ದು ಅಲ್ಲಿ ಆಯ್ಕೆಯಾದ ಆಟಗಾರ್ತಿಯರು ಡಿಸೆಂಬರ್ 4 ರಿಂದ 13 ವರೆಗೆ ಚೀನಾದ ಶಾಂಗ್ಲೋದಲ್ಲಿ ನಡೆಯುವ ವಿಶ್ವ ಶಾಲಾ‌ ಮಕ್ಕಳ ವಾಲಿಬಾಲ್ ಪಂದ್ಯಾಟದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಲಿದ್ದಾರೆ.

ಕುಮಾರಿ ಶಗುನ್ ಎಸ್, ವರ್ಮ ಹೆಗ್ಡೆ ಶ್ರೀಮತಿ ಶುತಿ ಮತ್ತು ಸಂದೇಶ್ ವರ್ಮ ದಂಪತಿಗಳ ಪುತ್ರಿಯಾಗಿದ್ದು ಇವರು ಜೋಡುರಸ್ತೆ ಕೊರಚೊಟ್ಟು ಕ್ರೀಡಾಂಗಣದಲ್ಲಿ ಸಂತೋಷ್ ಡಿ’ಸೋಜಾ, ಜೀವನ್ ಡಿ’ ಸಿಲ್ವಾ, ಹಾಗೂ ಜೈರಾಜ್ ಪೂಜಾರಿ ಇವರಿಂದ ಕ್ರೀಡಾ ತರಬೇತಿಯನ್ನು ಪಡೆದಿರುತ್ತಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತಕ್ಕೆ ಮರಳಿ ಬರುತ್ತಿದೆಯೇ ಟಿಕ್‌ಟಾಕ್‌?

ಐದು ವರ್ಷಗಳ ಹಿಂದೆ ಭಾರತದಲ್ಲಿ ನಿಷೇಧಗೊಂಡಿದ್ದ ಜನಪ್ರಿಯ ಸೋಶಿಯಲ್ ಮೀಡಿಯಾ ಅಪ್ಲಿಕೇಶನ್ ಟಿಕ್‌ಟಾಕ್ (TikTok) ಮತ್ತೆ ದೇಶಕ್ಕೆ ಮರಳಲಿದೆಯೇ ಎಂಬ ಪ್ರಶ್ನೆ ಈಗ ಇಂಟರ್‌ನೆಟ್‌ ಲೋಕದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ಧರ್ಮಸ್ಥಳ ಬುರುಡೆ ಕೇಸ್ ಸೂತ್ರಧಾರ ಬಂಧನ: ನಾವು ನ್ಯಾಯದ ಪರ, ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದ ದೂರುದಾರನ ಬಂಧನದ ಬಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. "ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ" ಎಂದು ಅವರು ಸ್ಪಷ್ಟಪಡಿಸಿದರು.

ಮಹೇಶ್ ಶೆಟ್ಟಿ ತಿಮರೋಡಿ ಜಾಮೀನು ಅರ್ಜಿ ವಿಚಾರಣೆ ಮಧ್ಯಾಹ್ನ 3 ಗಂಟೆಗೆ ಮುಂದೂಡಿಕೆ

ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿ ಹಿರಿಯಡ್ಕ ಜೈಲಿನಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಮಧ್ಯಾಹ್ನ 3 ಗಂಟೆಗೆ ಮುಂದೂಡಲಾಗಿದೆ.

ಯಶ್ ತಾಯಿ ಪುಷ್ಪ ಹೇಳಿಕೆಗೆ ಇನ್ಸ್ಟಾ ಸ್ಟೋರಿಯಲ್ಲಿ ದೀಪಿಕಾ ದಾಸ್ ಖಡಕ್ ಉತ್ತರ

ಪುಷ್ಪ ಅವರ ಈ ಹೇಳಿಕೆಗಳಿಗೆ ದೀಪಿಕಾ ದಾಸ್ ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. "ಹೊಸ ಕಲಾವಿದರನ್ನು ಬೆಳೆಸುವವರು ಮೊದಲು ಅವರಿಗೆ ಬೆಲೆ ಕೊಡುವುದನ್ನು ಕಲಿಯಬೇಕು" ಎಂದು ಅವರು ಹೇಳಿದರು.