ಕಾರ್ಕಳ ರೋಟರಿ ಕ್ಲಬ್ ನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ ;ಸಂಸ್ಕಾರಯುತ ಶಿಕ್ಷಣದಿಂದ ಬದುಕು ಸುಂದರ – ಕೆ. ನವೀನ್ ಚಂದ್ರ ಶೆಟ್ಟಿ

Date:

spot_img

ಹೆಬ್ರಿ : ಶಿಕ್ಷಣವೆಂದರೆ ಕೇವಲ ಅಂಕ ಗಳಿಕೆ ಒಂದೇ ಆಗಿರದೆ ಸಂಸ್ಕಾರಯುತ ಬದುಕನ್ನು ರೂಪಿಸುವಂತಿರಬೇಕು. ಈ ನಿಟ್ಟಿನಲ್ಲಿ ಚಾಣಕ್ಯ ಸಂಸ್ಥೆ ಕಳೆದ 11 ವರ್ಷಗಳಿಂದ ಗುಣಮಟ್ಟದ ಸಂಸ್ಕಾರಯುತ ಶಿಕ್ಷಣ ಜೊತೆಗೆ ನಮ್ಮ ಸಂಸ್ಕೃತಿ, ಸಂಸ್ಕಾರವನ್ನು ಬಿಂಬಿಸುವ ಕಲಾ ಪ್ರಕಾರಗಳನ್ನು ಒಂದೇ ಸೂರಿನಡಿ ತರಬೇತಿ ನೀಡುತ್ತಿರುವುದು ಶ್ಲಾಘನೀಯ ಎಂದು ಕಾರ್ಕಳ ರೋಟರಿ ಕ್ಲಬ್ ನ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ ಹೇಳಿದರು.

ಅವರು ಹೆಬ್ರಿ ಚಾಣಕ್ಯ ಶಿಕ್ಷಣ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನದಲ್ಲಿ ರೋಟರಿ ಕ್ಲಬ್ ಕಾರ್ಕಳ ನೇತೃತ್ವದಲ್ಲಿ ನಡೆದ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಚಾಣಕ್ಯ ಸಂಸ್ಥೆ ವತಿಯಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಸಮಾಜಮುಖಿ ಚಟುವಟಿಕೆಗೆ ಇನ್ನೊಂದು ಹೆಸರು ಕಾರ್ಕಳ ರೋಟರಿ :

ಕಾರ್ಕಳ ರೋಟರಿ ಕ್ಲಬ್ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ ಅವರ ನೇತೃತ್ವದ ತಂಡ ಕಳೆದ ಒಂದು ವರ್ಷಗಳಿಂದ ಕಾರ್ಕಳ ಸುತ್ತಮುತ್ತ ಪ್ರದೇಶದಲ್ಲಿ ವಿವಿಧ ಸಮಾಜಮುಖಿ ಚಟುವಟಿಕೆಗಳ ಮೂಲಕ ರಾಜ್ಯದ ಗಮನ ಸೆಳೆದಿದೆ. ಕೇವಲ ವಾರ್ಷಿಕೋತ್ಸವಕ್ಕೆ ಸೀಮಿತವಾಗುತ್ತಿರುವ ಸಂಘಟನೆಗಳ ನಡುವೆ ಇಂದು ಕಾರ್ಕಳ ರೋಟರಿ ಕ್ಲಬ್ ನಿರಂತರ ಕಾರ್ಯಕ್ರಮಗಳ ಆಯೋಜನೆ ಮಾಡುವ ಮೂಲಕ ಮಾದರಿ ಸಂಘಟನೆಯಾಗಿ ಗುರುತಿಸಿಕೊಂಡಿದೆ ಎಂದು ಚಾಣಕ್ಯ ಶಿಕ್ಷಣ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಹೆಬ್ರಿ ಉದಯಕುಮಾರ್ ಶೆಟ್ಟಿ ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಾಣಕ್ಯ ಸಮೂಹ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲೆ ವೀಣಾ ಯು ಶೆಟ್ಟಿ ವಹಿಸಿದ್ದರು. ಕಾರ್ಕಳ ರೋಟರಿ ಕ್ಲಬ್ ನ ಮಾಜಿ ಅಧ್ಯಕ್ಷ ಜಗದೀಶ್, ಕಾರ್ಕಳ ರೋಟರಿ ಕ್ಲಬ್ ನ ಕಾರ್ಯದರ್ಶಿ ಚೇತನ್ ನಾಯಕ್, ಹೆಬ್ರಿ ಜೇಸಿಐ ಸದಸ್ಯೆ ಶೀಲಾ ಪ್ರವೀಣ್, ಮಾನ್ಯ ಯು ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಧನ್ಯ ಯು. ಶೆಟ್ಟಿ ಪ್ರಾರ್ಥಿಸಿದರು. ಉದಯ್ ಕುಮಾರ್ ಶೆಟ್ಟಿ ಸ್ವಾಗತಿಸಿ , ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ