spot_img

ನೈಸರ್ಗಿಕ ಔಷಧಿ ನುಗ್ಗೆಕಾಯಿ – ಆರೋಗ್ಯಕ್ಕೆ ಏಳು ಮಹತ್ವದ ಪ್ರಯೋಜನಗಳು!

Date:

ನುಗ್ಗೆಕಾಯಿ ತಿನ್ನೋದ್ರಿಂದ ಆಗುವ ಪ್ರಯೋಜನಗಳು

ರಕ್ತದ ಸಕ್ಕರೆಯನ್ನು ನಿಯಂತ್ರಿಸುತ್ತದೆ – ಮಧುಮೇಹ ಇರುವವರಿಗೆ ನುಗ್ಗೆಕಾಯಿ ಸೇವನೆ ಅತ್ಯುತ್ತಮ ಪ್ರಯೋಜನ ನೀಡಬಹುದು. ಇದು ಪಿತ್ತಕೋಶದ ಕಾರ್ಯವನ್ನು ಉತ್ತೇಜಿಸಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸಮತೋಲನಗೊಳಿಸುತ್ತದೆ.

ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ – ನುಗ್ಗೆಕಾಯಿಯಲ್ಲಿ ಇರುವ ವಿಟಮಿನ್ B12, ನಿಯಾಸಿನ್, ರೈಬೋಫ್ಲೇವಿನ್ ಜೀರ್ಣಕ್ರಿಯೆ ಸುಗಮಗೊಳಿಸುತ್ತವೆ. ಗ್ಯಾಸ್ಟ್ರಿಕ್ ಸಮಸ್ಯೆ ಕಡಿಮೆ ಮಾಡಿ, ಕರುಳಿನ ಚಲನೆಯನ್ನು ನಿಯಂತ್ರಿಸುತ್ತದೆ.

ಉಸಿರಾಟದ ಕಾಯಿಲೆಗಳಿಗೆ ತಡೆ – ಉರಿಯೂತ ನಿವಾರಕ ಗುಣಲಕ್ಷಣಗಳಿರುವ ನುಗ್ಗೆಕಾಯಿ ಉಸಿರಾಟ ಸಮಸ್ಯೆ, ಅಸ್ತಮಾ, ಮತ್ತು ಶೀತ-ಕೆಮ್ಮು ತಡೆಯಲು ಸಹಾಯ ಮಾಡುತ್ತದೆ.

ಮೂಳೆಗಳನ್ನು ಬಲಪಡಿಸುತ್ತದೆ – ಕ್ಯಾಲ್ಸಿಯಂ ಮತ್ತು ಕಬ್ಬಿಣದಿಂದ ಸಮೃದ್ಧವಾದ ನುಗ್ಗೆಕಾಯಿ, ಮೂಳೆಯ ಆರೋಗ್ಯವನ್ನು ಉತ್ತೇಜಿಸಿ, ಅವುಗಳನ್ನು ಬಲಪಡಿಸುತ್ತದೆ.

ರಕ್ತ ಶುದ್ಧೀಕರಣೆ – ನುಗ್ಗೆಕಾಯಿ ಪ್ರತಿಜೀವಕ ಗುಣ ಹೊಂದಿದ್ದು, ರಕ್ತದಲ್ಲಿನ ಆಮ್ಲಜನಕದ ಮಟ್ಟ ಹೆಚ್ಚಿಸಿ, ಶುದ್ಧೀಕರಣ ಮಾಡುತ್ತದೆ.

ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ – ನುಗ್ಗೆಕಾಯಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ವಿಟಮಿನ್ C ಇರುತ್ತದೆ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ, ಶೀತ-ಕೆಮ್ಮು, ವೈರಲ್ ಇನ್‌ಫೆಕ್ಷನ್ ತಡೆಯಲು ಸಹಕಾರಿ.

ಮೊಡವೆಗಳು ದೂರ! – ನುಗ್ಗೆಕಾಯಿ ಶಿಲೀಂಧ್ರ ವಿರೋಧಿ ಗುಣ ಹೊಂದಿರುವುದರಿಂದ ಚರ್ಮದ ಆರೋಗ್ಯಕ್ಕಾಗಿ ಉತ್ತಮ. ನುಗ್ಗೆ ಎಲೆಗಳ ಫೇಸ್ ಮಾಸ್ಕ್ ಬಳಸಿ ಚರ್ಮವನ್ನು ತಕ್ಷಣ ಶುದ್ಧಗೊಳಿಸಬಹುದು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ರಿಯಲ್‌ಮಿ ನಿಯೋ 7 ಟರ್ಬೋ AI ಬಿಡುಗಡೆ: ಗೇಮರ್‌ಗಳಿಗಾಗಿ ಮೀಡಿಯಾಟೆಕ್ ಡೈಮನ್ಸಿಟಿ 9400e ಪ್ರೊಸೆಸರ್‌ನ ಫೋನ್

ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ತನ್ನ ಗೇಮಿಂಗ್ ಮತ್ತು ಬ್ಯಾಟರಿ-ಕೇಂದ್ರಿತ ಫೋನ್‌ಗಳಿಂದ ಹೆಸರುವಾಸಿಯಾಗಿರುವ ರಿಯಲ್ಮಿ, ಈಗ ತನ್ನ ನಿಯೋ ಸರಣಿಗೆ ಹೊಸ ಸೇರ್ಪಡೆಯನ್ನು ಮಾಡಿದೆ.

ಪೆರ್ಡೂರು: ಶಾಲಾ ಬಸ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ – ಮತ್ತೊಬ್ಬನಿಗೆ ಗಂಭೀರ ಗಾಯ

ಪೆರ್ಡೂರು ಗ್ರಾಮದ ಕೊಳಂಬೆ ಕ್ರಾಸ್ ಬಳಿ ಶಾಲಾ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು, ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ನಡೆದಿದೆ.

ಉಡುಪಿ ರಸ್ತೆ ಅಪಘಾತ: ಬೈಕ್ ಸ್ಕಿಡ್ ಆಗಿ ಯುವಕನ ದುರ್ಮರಣ, ಸಹಸವಾರ ಗಂಭೀರ

ಬೈಕ್ ಸ್ಕಿಡ್ ಆಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸಹಸವಾರ ಸಾವನ್ನಪ್ಪಿದ್ದು, ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ.

ಮಧುಮೇಹ ಮತ್ತು ಬೊಜ್ಜು ನಿಯಂತ್ರಣಕ್ಕೆ ದಾಸವಾಳ: ಪ್ರಕೃತಿಯ ವರದಾನ

ದಾಸವಾಳದ ಎಲೆಗಳು, ಹೂವುಗಳು ಮತ್ತು ಬೇರುಗಳು ವೈವಿಧ್ಯಮಯ ಪೋಷಕಾಂಶಗಳು ಮತ್ತು ಜೈವಿಕ ಸಕ್ರಿಯ ಸಂಯುಕ್ತಗಳಿಂದ ಸಮೃದ್ಧವಾಗಿವೆ.