ಕೇಸರಿ ಶಾಲು ಧರಿಸಿದ ನಯನಾ ಮೋಟಮ್ಮ: “ಧರ್ಮಕ್ಕಾಗಿ ಬಂದಿದ್ದೇನೆ, ಪಕ್ಷ ಆನಂತರ”

Date:

spot_img

ಚಿಕ್ಕಮಗಳೂರು: ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರ ಜೊತೆ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ಕೇಸರಿ ಶಾಲು ಧರಿಸಿ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿರುವುದು ಹಲವರ ಹುಬ್ಬೇರಿಸಿದೆ. ಈ ಕುರಿತು ಮಾತನಾಡಿದ ಶಾಸಕಿ, “ನಾನು ಧರ್ಮಕ್ಕಾಗಿ ಕೇಸರಿ ಶಾಲು ಧರಿಸಿದ್ದೇನೆ; ಕಾಂಗ್ರೆಸ್ಸೋ-ಬಿಜೆಪಿಯೋ ಎಂಬುದಕ್ಕೆ 3 ವರ್ಷ ಕಾಯೋಣ” ಎಂದು ಹೇಳಿದರು.

ಧಾರ್ಮಿಕ ಕಾರ್ಯಕ್ರಮದಲ್ಲಿ ರಾಜಕೀಯ ಸ್ಪಷ್ಟೀಕರಣ

ಮೂಡಿಗೆರೆಯಲ್ಲಿ ನಡೆದ ಹಿಂದೂ ಮಹಾಸಭಾ ಗಣಪತಿ ಲಾಂಛನ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ನಯನಾ ಮೋಟಮ್ಮ, “ಹಿಂದೂವಾಗಿ, ದಲಿತೆಯಾಗಿ ಮೂಡಿಗೆರೆಯಲ್ಲಿ ಜನಿಸಿದ್ದೇನೆ. ಮುಂದೆ ಬಿಜೆಪಿಗೆ ಹೋಗ್ತಿನೋ, ಕಾಂಗ್ರೆಸ್ಸಿನಲ್ಲೇ ಉಳಿತಿನೋ, ಬಿಎಸ್‌ಪಿ ಅಥವಾ ಎಸ್‌ಡಿಪಿಐ ಸೇರುತ್ತೇನೋ ಎಂಬ ಪ್ರಶ್ನೆಗೆ ಮೂರು ವರ್ಷ ಕಾಯೋಣ” ಎಂದರು.

“ಇಂದು ಕೇಸರಿ ಶಾಲು ಹಾಕಿ ಬಂದಿದ್ದೇನೆ. ಪಕ್ಷದ ಕಾರ್ಯಕರ್ತರೂ ಬಂದಿದ್ದಾರೆ. ಈ ಬಗ್ಗೆ ಹಲವರಿಗೆ ಪ್ರಶ್ನೆಗಳಿವೆ. ನದಿ ಎಂದರೆ ಕಾಂಗ್ರೆಸ್ಸಾ, ದಡ ಎಂದರೆ ಬಿಜೆಪಿಯಾ ಎಂಬ ಶಂಕೆ ಬೇಡ” ಎಂದು ಅವರು ಸ್ಪಷ್ಟಪಡಿಸಿದರು.

“ನಾನು ಗಣಪತಿಗಾಗಿ, ಧರ್ಮಕ್ಕಾಗಿ ಬಂದಿದ್ದೇನೆ. ಶಾಸಕಿಯಾಗಿ ಪಕ್ಷ ಪ್ರತಿನಿಧಿಸುವುದು ಆನಂತರ. ಈಗ ಗಣಪತಿ ಸಮಿತಿಯ ಕಾರ್ಯಾಧ್ಯಕ್ಷೆಯಾಗಿ ಇಲ್ಲಿಗೆ ಬಂದಿದ್ದೇನೆ. ಆದ್ದರಿಂದ ಯಾವ ಪಕ್ಷದವರಿಗೂ ಪ್ರಶ್ನೆಗಳು ಉಳಿಯಬಾರದು” ಎಂದು ನಯನಾ ಮೋಟಮ್ಮ ಹೇಳಿದರು.

“ಕಾಂಗ್ರೆಸ್ ಶಾಸಕಿಯಾಗಿಯೂ ನಿಂತಿದ್ದೇನೆ. ಅದನ್ನು ಗುರುತಿಸಿಕೊಳ್ಳಲೇಬೇಕು. ಅದರ ಜೊತೆಗೆ ಸಾಕಷ್ಟು ಅಸ್ತಿತ್ವಗಳು ಇವೆ. ಅದನ್ನೆಲ್ಲಾ ಸೇರಿಸಿಕೊಂಡು ನಯನಾ ಮೋಟಮ್ಮ ಆಗಿದ್ದೇನೆ. ಯಾರೂ ಕೂಡ ಹುಟ್ಟುವಾಗಲೇ ಇಂತಹ ಜಾತಿ-ಧರ್ಮ, ಹೆಣ್ಣು-ಗಂಡು ಎಂದು ಹುಟ್ಟಿರುವುದಿಲ್ಲ” ಎಂದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬಾಲಕೃಷ್ಣಗೆ ಶೂಟಿಂಗ್ ವೇಳೆ ಅಪಘಾತ: ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

ತೆಲುಗು ನಟ ಬಾಲಕೃಷ್ಣ ಶೂಟಿಂಗ್ ವೇಳೆ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಜನ ನಾಯಗನ್ ಅಡ್ವಾನ್ಸ್ ಬುಕಿಂಗ್ ದಾಖಲೆ: ವಿಜಯ್ ಚಿತ್ರ ಜುಲೈ 23ಕ್ಕೆ ಬಿಡುಗಡೆ

ವಿಜಯ್ ಅಭಿನಯದ ಕೊನೆಯ ಚಿತ್ರ 'ಜನ ನಾಯಗನ್' ಜುಲೈ 23ರಂದು ಬಿಡುಗಡೆಯಾಗಲಿದ್ದು, ಅಡ್ವಾನ್ಸ್ ಬುಕಿಂಗ್‌ನಲ್ಲಿ ಭಾರಿ ದಾಖಲೆ ಬರೆದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ನೀಟ್ ಪ್ರತಿಭಟನೆ ಮೇಲಿನ ಪೊಲೀಸ್ ಕ್ರಮ: ತುರ್ತು ವಿಚಾರಣೆಗೆ ಸುಪ್ರೀಂ ನಿರಾಕರಣೆ

ದೆಹಲಿಯಲ್ಲಿ ನೀಟ್ ವಿದ್ಯಾರ್ಥಿಗಳ ಪ್ರತಿಭಟನೆ ಮೇಲಿನ ಪೊಲೀಸ್ ದೌರ್ಜನ್ಯ ತನಿಖೆ ಕೋರಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಳ್ಳಿಹಾಕಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಸಂಗಾತಿ ಮೇಲೆ ಆಸಕ್ತಿ ಇಲ್ಲವೆಂದು ಡಿವೋರ್ಸ್ ಸಿಗಲ್ಲ: ಹೈಕೋರ್ಟ್ ಆದೇಶ

ಮದುವೆ ಒಪ್ಪಂದವಲ್ಲ, ಸಂಸ್ಕಾರ. ಹೆಂಡತಿ ಮೇಲೆ ಆಸಕ್ತಿ ಇಲ್ಲವೆಂದು ವಿಚ್ಛೇದನ ಕೇಳಿದ ಪತಿಯ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.