
ನೀರೆ : ಇಲ್ಲಿನ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಸಚ್ಚಿದಾನಂದ ಪ್ರಭು ಹಾಗೂ ಅವರ ಧರ್ಮಪತ್ನಿ ಶ್ರೀಮತಿ ಆಶಾ ನಾಯಕ್ ದಂಪತಿಗಳನ್ನು ಇವರ ಅಧ್ಯಕ್ಷೀಯ ಅವಧಿಯಲ್ಲಿ ಸಂಜೀವಿನಿ ಸಂಘಕ್ಕೆ ನೀಡಿದ ಸಹಕಾರಕ್ಕಾಗಿ ಸಂಜೀವಿನಿ ಒಕ್ಕೂಟದ ಎಲ್ಲಾ ಸದಸ್ಯರು ಹಾಗೂ ಪಂಚಾಯತ್ ಸಿಬ್ಬಂದಿಗಳ ಭಾಗವಿಸುವಿಕೆಯೊಂದಿಗೆ ಗೌರವ ಪೂರ್ವಕವಾಗಿ ಸನ್ಮಾನಿಸಲಾಯಿತು
ಈ ಸಮಾರಂಭದಲ್ಲಿ ಪ್ರಮುಖ ಗಣ್ಯರಾದ ವಿಕ್ರಂ ಹೆಗ್ಡೆ ಹಾಗೂ ಮಾಲಿನಿ ಜೆ. ಶೆಟ್ಟಿ ಅವರು ಉಪಸ್ಥಿತರಿದ್ದು, ದಂಪತಿಗಳ ಕಾರ್ಯವೈಖರಿಯನ್ನು ಶ್ಲಾಘಿಸಿದರು. ಕಾರ್ಯಕ್ರಮದಲ್ಲಿ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಸುಪ್ರೀತಾ, ಮರ್ಣೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿ.ಡಿ.ಒ.) ಅಂಕಿತಾ ನಾಯಕ್ ಹಾಗೂ ನೀರೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾಗರಾಜ್ ಅವರು ಭಾಗವಹಿಸಿ ಕಾರ್ಯಕ್ರಮಕ್ಕೆ ಶೋಭೆ ತಂದರು.
ಕಾರ್ಯಕ್ರಮದ ವಿವರ: ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಸುಪ್ರೀತಾ ಅವರು ಆಗಮಿಸಿದ ಸರ್ವರನ್ನು ಸ್ವಾಗತಿಸಿದರು. ಕಾರ್ಯಕ್ರಮದ ಅಚ್ಚುಕಟ್ಟಾದ ನಿರೂಪಣೆಯನ್ನು ರಮೇಶ್ ಕಲ್ಲೊಟ್ಟೆ ಅವರು ನಿರ್ವಹಿಸಿದರು. ಕೊನೆಯಲ್ಲಿ ವಾಣಿ ಶೆಟ್ಟಿ ಅವರು ವಂದನಾರ್ಪಣೆ ಮಾಡುವುದರೊಂದಿಗೆ ಕಾರ್ಯಕ್ರಮವು ಯಶಸ್ವಿಯಾಗಿ ಮುಕ್ತಾಯಗೊಂಡಿತು.
ಸ್ಥಳೀಯ ಜನಪ್ರತಿನಿಧಿಗಳು ಮತ್ತು ಪಂಚಾಯತ್ ಸಿಬ್ಬಂದಿಗಳ ಉಪಸ್ಥಿತಿಯಲ್ಲಿ ನಡೆದ ಈ ಸನ್ಮಾನ ಕಾರ್ಯಕ್ರಮವು ಗ್ರಾಮದ ಅಭಿವೃದ್ಧಿಯಲ್ಲಿ ದಂಪತಿಗಳ ಪಾತ್ರವನ್ನು ಎತ್ತಿ ತೋರಿಸುವಂತಿತ್ತು.














