
ದೆಹಲಿಯ ಮುಂದಿನ ಮುಖ್ಯಮಂತ್ರಿ ಯಾರೆಂಬ ಕುತೂಹಲಕ್ಕೆ ಕೊನೆಗೂ ಉತ್ತರ ಸಿಕ್ಕಿದೆ. ರಾಜ್ಯದ ಹೊಸ ಸಿಎಂ ಆಗಿ ಬಿಜೆಪಿ ಶಾಸಕಿ ರೇಖಾ ಗುಪ್ತ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಅವರ ಹೆಸರನ್ನು ಶಿಫಾರಸು ಮಾಡಿದ್ದು, ಬಿಜೆಪಿಯೂ ಇದಕ್ಕೆ ಒಪ್ಪಿಗೆ ನೀಡಿದೆ.
ಇದೆಲ್ಲದರ ಫಲಿತಾಂಶವಾಗಿ,ಇಂದು (ಫೆಬ್ರವರಿ.20) ದೆಹಲಿ ತನ್ನ ಹೊಸ ಮುಖ್ಯಮಂತ್ರಿಯನ್ನು ಪಡೆಯಲಿದೆ. ಮಧ್ಯಾಹ್ನ 12:35ಕ್ಕೆ ರಾಮಲೀಲಾ ಮೈದಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ರೇಖಾ ಗುಪ್ತ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ದೆಹಲಿಯ ಮುಖ್ಯ ಕಾರ್ಯದರ್ಶಿ ಕಳುಹಿಸಿರುವ ಆಹ್ವಾನ ಪತ್ರಿಕೆಯ ಪ್ರಕಾರ, ಈ ಸಮಾರಂಭದಲ್ಲಿ ನೂತನ ಸಚಿವರಿಗೂ ಪ್ರಮಾಣವಚನ ಸ್ವೀಕಾರ ನಡೆಯಲಿದೆ ಎಂದು ವರದಿಯಾಗಿದೆ.