ಕಾರ್ಕಳ ತಾಲೂಕಿನ ಎರ್ಲಪಾಡಿಯ ಕೆಳಗಿನ ಮನೆಯ ಶ್ರೀ ಆಧಿಶಕ್ತಿ ಕಾಳಿಕಾಂಭ ಭಜನಾ ಮಂಡಳಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಿಕೊಂಡಿದೆ. ಮುಂದಿನ ಒಂದು ವರ್ಷದ ಅವಧಿಗೆ ವಿಶ್ವಾಸ್ ಕೋಟ್ಯಾನ್ ಅಧ್ಯಕ್ಷರಾಗಿ ಹಾಗೂ ನಿಖಿಲ್ ಶೆಟ್ಟಿ ಕಾರ್ಯದರ್ಶಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಹಳ್ಳಿಗಾಡಿನ ಜೋಳದ ರೊಟ್ಟಿಗಳು ನಿಮ್ಮ ಆರೋಗ್ಯಕ್ಕೆ ಉತ್ತಮ ಆಯ್ಕೆಯಾಗಿರಬಹುದು. ಒಂದೇ ರೀತಿಯ ಆಹಾರ ಸೇವನೆಯಿಂದ ಬೇಸರಗೊಂಡಿದ್ದರೆ, ಜೋಳವನ್ನು ನಿಮ್ಮ ಆಹಾರದಲ್ಲಿ ಸೇರಿಸುವ ಮೂಲಕ ಆರೋಗ್ಯಕರ ಬದಲಾವಣೆಯನ್ನು ಮಾಡಿಕೊಳ್ಳಿ.
ಶಾಲಾ ಮಕ್ಕಳಿಗೆ ವಿತರಿಸಲಾಗುತ್ತಿರುವ ಹಾಲು ಕಾಳಸಂತೆಯಲ್ಲಿ ಮಾರಾಟವಾಗುವುದನ್ನು ತಡೆಯಲು ಮತ್ತು ಪೌಷ್ಟಿಕಾಂಶ ಹೆಚ್ಚಿಸಲು, ಬಮೂಲ್ ನೂತನ ನಿರ್ದೇಶಕ ಡಿ.ಕೆ. ಸುರೇಶ್ ಅವರು ಶಾಲಾ ಮಕ್ಕಳಿಗೆ 'ಫ್ಲೇವರ್ಡ್' ನಂದಿನಿ ಹಾಲು ಪೂರೈಸುವ ಮಹತ್ವದ ಪ್ರಸ್ತಾಪವನ್ನು ಶಾಲಾ ಶಿಕ್ಷಣ ಇಲಾಖೆಯ ಮುಂದಿಟ್ಟಿದ್ದಾರೆ.
ಅವೈಜ್ಙಾನಿಕ ನೋಟಿಸ್ ಜಾರಿಗೊಳಿಸಿದ ಕೇಂದ್ರ ಸರ್ಕಾರದ ತೆರಿಗೆ ಇಲಾಖೆಯ ಕ್ರಮದಿಂದ ಆತಂಕ ಹಾಗೂ ಗೊಂದಲಕ್ಕೊಳಗಾಗಿದ್ದ ರಾಜ್ಯದ ವರ್ತಕ ವಲಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ವಿಶೇಷ ಕಾಳಜಿಯಿಂದ ರಕ್ಷಿಸಿದ್ದಾರೆಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ್ ರಾವ್ ಹರ್ಷ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಮುಖಂಡ ಪ್ರಸಾದ್ ಕಾಂಚನ್ ರವರು ಕೀಳು ಮಟ್ಟದ ಹೇಳಿಕೆಯನ್ನು ಮುಂದುವರಿಸಿದಲ್ಲಿ ಜಿಲ್ಲಾ ಯುವ ಮೋರ್ಚಾ ತಕ್ಕ ಉತ್ತರ ನೀಡಲಿದೆ ಎಂದು ಪ್ರದೀಪ್ ಕುಂದರ್ ಹೊನ್ನಾಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.