
ಕಾರ್ಕಳ: ನೀರೆ ಬೈಲೂರು ವ್ಯವಸಾಯ ಸೇವಾ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ನೀರೆ ರವೀಂದ್ರ ನಾಯಕ್ ಹಾಗೂ ಉಪಾಧ್ಯಕ್ಷರಾಗಿ ಎನ್. ವಿವೇಕಾನಂದ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ರವೀಂದ್ರ ನಾಯಕ್ ಅವರು ಕಳೆದ ಸಾಲಿನಲ್ಲಿ ಸಂಘದ ಅಧ್ಯಕ್ಷರಾಗಿ ಹಾಗೂ ವಿವೇಕಾನಂದ ಶೆಟ್ಟಿ ಆಡಳಿತ ಮಂಡಳಿಯ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು.
ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ
ಜ. 23ರಂದು ಸಂಘದ ಆವರಣದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.
ಹಾಜರಾತಿ:
ಈ ಸಂದರ್ಭ ಆಡಳಿತ ಮಂಡಳಿಯ ನಿರ್ದೇಶಕರಾದ ಉದಯ್ ಕುಮಾರ್ ಹೆಗ್ಡೆ, ಸುರೇಶ್ ಶೆಟ್ಟಿ, ವಿನಯ್ ಕುಮಾರ್ ಶೆಟ್ಟಿ, ಶಾಂತರಾಮ್ ಶೆಟ್ಟಿ, ಕಿಶನ್, ದೇವೇಂದ್ರ ನಾಯಕ್, ಎನ್.ಬಿ.ಬಾಬು, ವಿನೋದ ಪೂಜಾರ್ತಿ, ಶಾಂತ, ಶಂಕರ ನಾಯ್ಕ್ ಹಾಗೂ ಎಸ್‌ಡಿಸಿಸಿ ಬ್ಯಾಂಕ್ ಪ್ರತಿನಿಧಿ ಸಿ. ಜಯಂತ್ ಕುಮಾರ್ ಉಪಸ್ಥಿತರಿದ್ದರು.