
ಮಜೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆದ ಮಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಇಲಾಖೆಯ ಸವಲತ್ತು ವಿತರಣಾ ಕಾರ್ಯಕ್ರಮದಲ್ಲಿ ಗುರ್ಮೆ ಸುರೇಶ್ ಶೆಟ್ಟಿಯವರು ಭಾಗವಹಿಸಿ ವಿವಿಧ ಸವಲತ್ತುಗಳನ್ನು ವಿತರಿಸಿದರು.
ಮಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯ 92 ಹೇರೂರು ದರಖಾಸ್ತು ಪೋಡಿ ದುರಸ್ಥಿ ಸರಳೀಕೃತ ಕಾರ್ಯದ ಹೊಸ ಪಹಣಿ (RTC) ಮತ್ತು ಪೋಡಿ ನಕ್ಷೆ ಹಾಗೂ ಪಂಚಾಯತ್ ಶೇಕಡಾ 5 ನಿಧಿಯಡಡಿ ಮಂಜೂರಾದ ವೀಲ್ ಚೇರ್ ಮತ್ತು ಭಾಗ್ಯಲಕ್ಷ್ಮಿ ಯೋಜನೆಯ ಬಾಂಡ್ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಕಾಪು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ,ಮಜೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೆಟ್ಟಿ, ಉಪಾಧ್ಯಕ್ಷರಾದ ಮಂಜುಳಾ ಆಚಾರ್ಯ, ಸ್ಥಾಯಿ ಸಮಿತಿ ಅಧ್ಯಕ್ಷರಾದ ವನಿತಾ, ಕಾಪು ತಹಶೀಲ್ದಾರರಾದ ಪ್ರತೀಭಾ ಆರ್, ಕಾಪು ತಾಲೂಕು ಕಾರ್ಯನಿರ್ವಹಣಾಧಿಕಾರಿಗಳಾದ ಜೇಮ್ಸ್ ಡಿಸಿಲ್ವ, ಸರ್ವೆ ಸೂಪರ್ಡೆಂಟ್ ನಾರಾಯಣ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ವಿಲಾಸಿನಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪೂರ್ಣಿಮಾ ಹಾಗೂ ಮಜೂರು ಗ್ರಾಮ ಪಂಚಾಯತ್ ಸದಸ್ಯರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.