
ತೀರ್ಥಹಳ್ಳಿ: ತೀರ್ಥಹಳ್ಳಿ ತಾಲ್ಲೂಕಿನ ಬೆಟ್ಟಮಕ್ಕಿ ಗ್ರಾಮದಲ್ಲಿ ನವವಿವಾಹಿತೆ ಶ್ರೀನಿಧಿ (24) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಗುರುವಾರ ಬೆಳಕಿಗೆ ಬಂದಿದೆ.
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕುಕ್ಕುಂದೂರು ಮೂಲದ ಶ್ರೀನಿಧಿ, ಒಂದು ವರ್ಷ ಒಂದು ತಿಂಗಳ ಹಿಂದೆ ಬೆಟ್ಟಮಕ್ಕಿಯ ಸುದೀಪ್ ಶೆಟ್ಟಿಯೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಆದರೆ, ಗುರುವಾರ ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿದೆ.
ಮರಣೋತ್ತರ ಪರೀಕ್ಷೆಗೆ ಒಳಪಡಿಸಿದ ವೇಳೆ, “ಆರೋಗ್ಯ ಸಮಸ್ಯೆಯಿಂದಾಗಿ ಕುಟುಂಬಕ್ಕೆ ತೊಂದರೆಯಾಗುತ್ತಿದೆ, ಅದಕ್ಕಾಗಿ ನಾನು ಈ ನಿರ್ಧಾರಕ್ಕೆ ಬಂದಿದ್ದೇನೆ” ಎಂಬುದಾಗಿ ಡೆತ್ ನೋಟ್‌ನಲ್ಲಿ ಬರೆದಿರುವುದು ವರದಿಯಾಗಿದೆ.
ಮರಣೋತ್ತರ ಪರೀಕ್ಷಾ ಸ್ಥಳಕ್ಕೆ ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.