
ಪತಂಜಲಿ ಆಯುರ್ವೇದ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಮತ್ತು ಯೋಗ ಗುರು ಬಾಬಾ ರಾಮದೇವ್ ವಿರುದ್ಧ ಕೇರಳದ ನ್ಯಾಯಾಲಯವು ಜಾಮೀನು ರಹಿತ ವಾರಂಟ್ ಹೊರಡಿಸಿದೆ. ಸಾರ್ವಜನಿಕರನ್ನು ದಾರಿ ತಪ್ಪಿಸುಲು ಪ್ರೇರೇಪಿಸುವ ಜಾಹೀರಾತು ನೀಡಿದ ಆರೋಪದಲ್ಲಿ ಇವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿತ್ತು. ವಿಚಾರಣೆಗೆ ಹಾಜರಾಗದ ಕಾರಣ, ನ್ಯಾಯಾಲಯವು ಈ ನಿರ್ಧಾರ ಕೈಗೊಂಡಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿದೆ.