
ಉಡುಪಿ : ನರೇಗಾ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಿಲ್ಲ ಎಂಬ ಕರ್ನಾಟಕ ವಸತಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಆರೋಪಕ್ಕೆ ಬಿಜೆಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿರುಗೇಟು ನೀಡಿದ್ದಾರೆ.
ಅವರು ಮಾಧ್ಯಮದ ಮುಖಾಂತರ ಪ್ರತಿಕ್ರಿಯೆ ನೀಡುತ್ತಾ, “ಯುಪಿಎ ಸರಕಾರದ ಅವಧಿಯಲ್ಲಿ ನರೇಗಾ ಬಜೆಟ್ ₹33 ಸಾವಿರ ಕೋಟಿ ಆಗಿತ್ತು. ಆದರೆ ಇದೀಗ ₹86 ಸಾವಿರ ಕೋಟಿಗೆ ಏರಿಕೆಯಾಗಿದೆ. ಕೂಲಿಗೂ ಸಹ ಬದಲಾವಣೆ ಆಗಿದ್ದು, ದಿನಕ್ಕೆ ₹150ರೂ.ಗಳಿಂದ ₹370ರ ಮಟ್ಟಿಗೆ ಹೆಚ್ಚಿಸಲಾಗಿದೆ,” ಎಂದು ಸ್ಪಷ್ಟಪಡಿಸಿದರು.
ಉಡುಪಿಗೆ ಈಗಾಗಲೇ 7.90 ಸಾವಿರ ಮಾನವ ದಿನಗಳ ಕೂಲಿ ನೀಡಿದೆ ಮತ್ತು ₹50.51 ಕೋಟಿ ಬಿಡುಗಡೆ ಮಾಡಲಾಗಿದೆ. ಹೀಗಾಗಿ ‘ಕೇಂದ್ರದಿಂದ ಹಣ ಬಂದಿಲ್ಲ’ ಎಂಬ ಆರೋಪಕ್ಕೆ ನೂತನ ಸರ್ಕಾರದ ಆಡಳಿತ ವೈಫಲ್ಯವನ್ನೇ ತೋರಿಸುತ್ತದೆ ಎಂದು ಹೇಳಿದರು.
ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಬಿ.ಆರ್. ಪಾಟೀಲ್ ಅವರ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಕೋಟ, “ರಾಜೀವ್ ಗಾಂಧಿ ವಸತಿ ನಿಗಮದಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂಬ ಮಾತುಗಳು ಬಹುಮಾನ್ಯವಾಗಿದೆ. ಉಪ ಮುಖ್ಯಮಂತ್ರಿಗಳು ತಿಳಿಸಿದಂತೆ ನಮ್ಮ ಸರಕಾರದಲ್ಲಿ ಭ್ರಷ್ಟಾಚಾರ ಇಲ್ಲ. ಆದರೆ ಈಗ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರೇ ಆರೋಪಗಳಿಗೆ ಗುರಿಯಾಗುತ್ತಿದ್ದಾರೆ. ಮುಖ್ಯಮಂತ್ರಿ ವಸತಿ ಸಚಿವರ ರಾಜೀನಾಮೆ ಪಡೆಯಬೇಕು” ಎಂದು ಒತ್ತಾಯಿಸಿದರು.