ಸದೃಢ ಆರೋಗ್ಯಕ್ಕೆ ಪೌಷ್ಠಿಕ ಆಹಾರ ಅಗತ್ಯ : ಪ್ರೊ.ದಯಾನಂದ ಅಗಸರ್

Date:

spot_img

ಕಲಬುರಗಿ : ನಾವು ಸದೃಢ ಆರೋಗ್ಯವನ್ನು ಹೊಂದಬೇಕಾದರೆ ಪೌಷ್ಠಿಕ ಆಹಾರ ಅಗತ್ಯ ಎಂದು ಗುಲಬರ್ಗಾ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಪ್ರೊ ದಯಾನಂದ ಅಗಸರ್ ಅವರು ಹೇಳಿದರು. ನಗರದ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ಸಿ.ಎನ್.ಡಿ.ವಿಭಾಗದ ವತಿಯಿಂದ ರಾಷ್ರ್ಟೀಯ ಪೋಷಣಾ ಸಪ್ತಾಹದ ಅಂಗವಾಗಿ ಹಮ್ಮಿಕೊಂಡಿದ್ದ ” ದೇಹದ ದ್ರವ್ಯರಾಶಿ ಸೂಚ್ಯಂಕ ( Body mass Index) , ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು .ಮುಂದುವರೆದು ಮಾತನಾಡಿದ ಅವರು ಇಂದಿನ ಒತ್ತಡದ ಬದುಕಿನಲ್ಲಿ ನಾವುಗಳು ನಮ್ಮ ಆರೋಗ್ಯ ಕಾಪಾಡಿಕೊಳ್ಳುವತ್ತ ಗಮನ ಹರಿಸುವುದು ಬಹಳ ಮುಖ್ಯವಾಗಿದೆ, ಎಂದು ವಿದ್ಯಾರ್ಥಿಗಳು ಪೌಷ್ಠಿಕ ಆಹಾರ ಸೇವಿಸುವಂತೆ ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಚತೆಯನ್ನು ವಹಿಸಿಕೊಂಡು ಮಾತನಾಡಿದ ಹೈದ್ರಾಬಾದ್ ಕರ್ನಾಟಕ ಶಿಕ್ಚಣ ಸಂಸ್ಥೆಯ ಆಡಳಿತಾಧಿಕಾರಿಗಳಾದ ಡಾ.ಸಿ.ಸಿ‌. ಪಾಟೀಲ ಸರ್ ಅವರು ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಿ ವಿದ್ಯಾರ್ಥಿಗಳಲ್ಲಿ ಆಹಾರದ ಮಹತ್ವ ಕುರಿತು ಅರಿವು ಮೂಡಿಸುತ್ತಿರುವುದು ನಿಜಕ್ಕೂ ಈ ವಿಭಾಗದವರ ಶ್ಲಾಘನೀಯ ಕೆಲಸ ಎಂದು ಹೇಳಿ ಇದರ ಬಗ್ಗೆ ಸಾಮಾನ್ಯ ಜನರಿಗೂ ತಿಳುವಳಿಕೆ ಮೂಡಿಸುವಂತೆ ಕರೆಕೊಟ್ಟರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಿದ್ದಭಾರತಿ ವಿದ್ಯಾಮಂದಿರದ ಕಾರ್ಯದರ್ಶಿಗಳಾದ ಕಲ್ಯಾಣರಾವ್ ಬುಜುರ್ಕೆ,ನಿರ್ದೇಶಕರಾದ ಸುಶೀಲಕುಮಾರ ಮಾಮಡೆ, ಸಂಯೋಜಕರಾದ ಶ್ರೀಮತಿ.ಅರುಣಾ ಹಳ್ಳಿಖೇಡ ಉಪಸ್ತಿತರಿದ್ದರು.

ವಿಭಾಗದ ಮುಖ್ಯಸ್ತರಾದ ಶ್ರೀಮತಿ ರೇಖಾ ಪಾಟೀಲ ಪ್ರಾಸ್ತಾವಿಕ ಮಾತುಗಳನ್ನಾಡಿದರು, ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ಮಹೇಶ ಗಂವ್ಹಾರ ಗಣ್ಯರನ್ನು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.ಅಂತಿಮ ವರ್ಷದ ವಿದ್ಯಾರ್ಥಿನಿ ಕುಮಾರಿ ರಂಶಾ ವಂದಿಸಿದರು. ಕಾರ್ಯಕ್ರಮದಲ್ಲಿ ವಿಭಾಗದ ಉಪನ್ತ್ಯಾಸಕಿ ವೈಷ್ಣವಿ ತಿವಾರಿ ಹಿಂದಿ ವಿಭಾಗದ ಮುಖ್ಯಸ್ಥರಾದ ಡಾ.ಪ್ರೇಮಚಂದ್ ಚವ್ಹಾಣ ಬೋಧಕ-ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿನಿಯರು ಭಾಗವಹಿಸಿದ್ದರು ಎಂದು ಕಾಲೇಜಿನ ಮಾಧ್ಯಮ ವಿಭಾಗದ ಡಾ ಮಹೇಶ್ ಗಂವ್ಹಾರ ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಡಾ. ಶಿವಪ್ರಸಾದ್ ಶೆಟ್ಟಿಗೆ ಎನ್‌ಸಿಸಿ ತರಬೇತಿಯಲ್ಲಿ ಪ್ರಥಮ ಸ್ಥಾನ

ನಿಟ್ಟೆ ಸಂಸ್ಥೆಯ ಎನ್‌ಸಿಸಿ ಅಧಿಕಾರಿ ಡಾ. ಶಿವಪ್ರಸಾದ್ ಶೆಟ್ಟಿ ಮಹಾರಾಷ್ಟ್ರದ ಕಾಮ್ಟೀ ತರಬೇತಿಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಉಡುಪಿ ಪ್ರವಾಸೋದ್ಯಮ ಮ್ಯಾಸ್ಕಾಟ್ ಸ್ಪರ್ಧೆ: ನಿಟ್ಟೆಯಲ್ಲಿ ಜುಲೈ 25ಕ್ಕೆ ಆಯೋಜನೆ

ಉಡುಪಿ ಪ್ರವಾಸೋದ್ಯಮದ ಅಧಿಕೃತ ಮ್ಯಾಸ್ಕಾಟ್ ವಿನ್ಯಾಸ ಸ್ಪರ್ಧೆ ಜುಲೈ 25ರಂದು ನಿಟ್ಟೆಯಲ್ಲಿ ನಡೆಯಲಿದೆ. ಭಾಗವಹಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಳೆಗಾಲದ ಜ್ವರ, ಸಾಂಕ್ರಾಮಿಕ ರೋಗ ತಡೆಗೆ ರಾಜ್ಯ ಸರ್ಕಾರ ಸನ್ನದ್ಧ

ಮಳೆಗಾಲದಲ್ಲಿ ವೈರಲ್ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.