ಸ್ಲಾಬ್ ಪರಿಶೀಲನೆ ವೇಳೆ ಕ್ರೇನ್ ತೊಟ್ಟಿಲಿನಿಂದ ಆಯ ತಪ್ಪಿ ಬಿದ್ದು ಓರ್ವನ ಸಾವು, ಮಹಿಳೆ ಗಂಭೀರ

Date:

spot_img

ಉಡುಪಿ : ಉಡುಪಿಯ ಕೋರ್ಟ್ ಹಿಂಭಾಗದ ಲೋಕೋಪಯೋಗಿ ಇಲಾಖೆ (PWD) ಕಚೇರಿ ಬಳಿ ನಡೆದ ಕ್ರೇನ್ ದುರ್ಘಟನೆ ಒಂದರಲ್ಲಿ ಹಿರಿಯ ನಾಗರಿಕರು ಸಾವಿಗೀಡಾಗಿದ್ದು, ಜೊತೆಗೆ ಮಹಿಳೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಫ್ರಾನ್ಸಿಸ್ ಫುರ್ಟಾಡೊ (65) ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ಶಾರದಾ (35) ಎಂಬ ಕೆಲಸದಾಕೆಯನ್ನು ತಕ್ಷಣವೇ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ವಿವರಗಳ ಪ್ರಕಾರ, ಫ್ರಾನ್ಸಿಸ್ ಫುರ್ಟಾಡೊ ಅವರು ತಮ್ಮ ಸಹೋದರನ ಮನೆಯಲ್ಲಿ ಸ್ಲ್ಯಾಬ್ ಸೋರಿಕೆಯನ್ನು ಪರಿಶೀಲಿಸಲು ಕ್ರೇನ್ ಅನ್ನು ಕರೆಸಿದ್ದರು. ಅವರು ಕೆಲಸದಾಕೆ ಶಾರದಾ ಅವರೊಂದಿಗೆ ಕ್ರೇನ್ ತೊಟ್ಟಿಲಿಗೆ ಏರಿ ಮೇಲ್ಮಹಡಿಗೆ ಹೋಗಿದ್ದಾಗ, ತೊಟ್ಟಿಲಿನ ಬೆಲ್ಟ್ ತುಂಡಾಗಿ ವಾಲಿಕೊಂಡು , ಇಬ್ಬರೂ ಆಕಸ್ಮಿಕವಾಗಿ ನೆಲಕ್ಕುರುಳಿದರು.

ಘಟನೆ ಕುರಿತು ಮಾಹಿತಿ ತಿಳಿದ ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ತಕ್ಷಣವೇ ತಮ್ಮ ಅಂಬುಲೆನ್ಸ್‌ನಲ್ಲಿ ಗಾಯಾಳುಗಳನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಕರೆದೊಯ್ದರು. ಆದರೆ ದಾರಿ ಮಧ್ಯೆ ಫ್ರಾನ್ಸಿಸ್ ಫುರ್ಟಾಡೊ ಅವರು ಮೃತರಾದರೆಂದು ವೈದ್ಯರು ದೃಢಪಡಿಸಿದರು. ಶಾರದಾ ಅವರ ಸ್ಥಿತಿಯು ಗಂಭೀರವಾಗಿದ್ದು ಚಿಕಿತ್ಸೆ ಮುಂದುವರಿದಿದೆ.

ಘಟನೆಯ ನಂತರ ಕ್ರೇನ್ ಚಾಲಕ ಸ್ಥಳದಿಂದ ಪರಾರಿಯಾದ ಘಟನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದು, ಆತನು ಗಾಯಾಳುಗಳಿಗೆ ಸಹಾಯ ಮಾಡದೆ ಓಡಿ ಹೋಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಘಟನೆ ಸಂಬಂಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಳೆಗಾಲದ ಜ್ವರ, ಸಾಂಕ್ರಾಮಿಕ ರೋಗ ತಡೆಗೆ ರಾಜ್ಯ ಸರ್ಕಾರ ಸನ್ನದ್ಧ

ಮಳೆಗಾಲದಲ್ಲಿ ವೈರಲ್ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಖರ್ಗೆ ವಾಗ್ದಾಳಿ: ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ತೀವ್ರ ಆಕ್ರೋಶ

ನೀಟ್ ಅಕ್ರಮ ಹಾಗೂ ಮಂದಿರದ ಟ್ರಸ್ಟ್ ವಿಚಾರವಾಗಿ ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಅನುಷ್ಠಾನಕ್ಕೆ ಸರ್ಕಾರ ಬದ್ಧ: ಸಿಎಂ ಡಿ.ಕೆ. ಶಿವಕುಮಾರ್

ವಿದ್ಯುತ್ ಯೋಜನೆಗಳ ಅನುಷ್ಠಾನಕ್ಕೆ ಸರ್ಕಾರ ಬದ್ಧವಾಗಿದೆ. ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಹಾಗೂ ಕೆಪಿಸಿಎಲ್ ಸಂಸ್ಥಾಪನಾ ದಿನದ ಪೂರ್ಣ ಮಾಹಿತಿ ಇಲ್ಲಿದೆ ಓದಿ.