‘ಆಪರೇಷನ್ ಸಿಂಧು’ ಯಶಸ್ವಿ ಆರಂಭ: ಇರಾನ್‌ನಿಂದ ಸ್ಥಳಾಂತರಗೊಂಡು ದೆಹಲಿ ತಲುಪಿದ 110 ಭಾರತೀಯ ವಿದ್ಯಾರ್ಥಿಗಳು

Date:

spot_img

ನವದೆಹಲಿ : ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಇರಾನ್‌ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಭಾರತೀಯ ವಿದ್ಯಾರ್ಥಿಗಳನ್ನು ತುರ್ತು ಸಹಾಯದಿಂದ ಸ್ಥಳಾಂತರಿಸುವ ಕಾರ್ಯವನ್ನು ಭಾರತ ಸರ್ಕಾರ ಯಶಸ್ವಿಯಾಗಿ ಆರಂಭಿಸಿದೆ. ಈ ಕಾರ್ಯಾಚರಣೆಗೆ ಭಾರತ ಸರ್ಕಾರ ‘ಆಪರೇಷನ್ ಸಿಂಧು’ ಎಂಬ ಹೆಸರನ್ನು ನೀಡಿದೆ.

ದೆಹಲಿ ತಲುಪಿದ ಮೊದಲ ವಿಮಾನ :
ಈ ರಕ್ಷಣಾತ್ಮಕ ಕಾರ್ಯಾಚರಣೆಯ ಮೊದಲ ಹಂತದಲ್ಲಿ, ಇರಾನ್ ರಾಜಧಾನಿ ಟೆಹ್ರಾನ್‌ನಿಂದ 110 ವಿದ್ಯಾರ್ಥಿಗಳನ್ನು ಸ್ಥಳಾಂತರಿಸಿ, ಅವರು ಅರ್ಮೇನಿಯಾದಿಂದ ವಿಶೇಷ ವಿಮಾನದ ಮೂಲಕ ತಡರಾತ್ರಿ ನವದೆಹಲಿಗೆ ಸುರಕ್ಷಿತವಾಗಿ ಬಂದಿಳಿದಿದ್ದಾರೆ.

ಸ್ಥಳಾಂತರದ ಹಿಂದಿನ ಹಂತಗಳು:
ಇಸ್ರೇಲ್-ಇರಾನ್ ಸಂಘರ್ಷದ ಭೀತಿ ಹಿನ್ನೆಲೆಯಲ್ಲಿ, ಟೆಹ್ರಾನ್‌ನಲ್ಲಿದ್ದ ಭಾರತೀಯ ವಿದ್ಯಾರ್ಥಿಗಳನ್ನು ಮೊದಲು ನಗರದಿಂದ ಹೊರಗೆ ಕಳುಹಿಸಲಾಗಿತ್ತು. ನಂತರ ಅವರು ಇರಾನ್ ಗಡಿ ದಾಟಿ ನೆರೆಯ ಅರ್ಮೇನಿಯಾ ದೇಶಕ್ಕೆ ತೆರಳಿದ ನಂತರ, ಅಲ್ಲಿಂದ ಭಾರತೀಯ ರಾಯಭಾರಿ ಕಚೇರಿ ಸಹಾಯದಿಂದ ಭಾರತಕ್ಕೆ ಕರೆತರಲಾಯಿತು.

ವಿದ್ಯಾರ್ಥಿಗಳ ಭದ್ರತೆಗೆ ಧನ್ಯವಾದ:
ಈ ಸಂದರ್ಭ ಜಮ್ಮು ಮತ್ತು ಕಾಶ್ಮೀರ ವಿದ್ಯಾರ್ಥಿ ಸಂಘ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರಿಗೆ ಧನ್ಯವಾದ ತಿಳಿಸಿದೆ. “ಇದು ಭಾರತೀಯ ವಿದ್ಯಾರ್ಥಿಗಳ ಭದ್ರತೆಗೆ ತಕ್ಷಣ ಸ್ಪಂದಿಸಿದ ಸಕಾರಾತ್ಮಕ ಹೆಜ್ಜೆ” ಎಂದು ಸಂಘದ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಲಾಗಿದೆ.

ಉಳಿದ ವಿದ್ಯಾರ್ಥಿಗಳ ಸ್ಥಳಾಂತರಕ್ಕೆ ಭರವಸೆ:
ಇರಾನ್‌ನಲ್ಲಿ ಇನ್ನೂ ಹಲವಾರು ವಿದ್ಯಾರ್ಥಿಗಳು ಉಳಿದಿದ್ದಾರೆ , ಅವರನ್ನು ಕೂಡ ಶೀಘ್ರದಲ್ಲೇ ದೇಶಕ್ಕೆ ಕರೆತರಲಾಗುವುದು ಎಂಬ ವಿಶ್ವಾಸವನ್ನು ಸರ್ಕಾರ ನೀಡಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಪರ್ಕಳ ಶಿಶು ಸ್ಪರ್ಧೆ ಮತ್ತು ತಾಯಿ ಮಗುವಿನ ಆರೋಗ್ಯ ಶಿಬಿರ 2026

ಪರ್ಕಳದಲ್ಲಿ ನಡೆದ ತಾಯಿ-ಮಗುವಿನ ಆರೋಗ್ಯ ಮಾಹಿತಿ ಕಾರ್ಯಕ್ರಮ ಹಾಗೂ ಮಕ್ಕಳ ಶಿಶು ಸ್ಪರ್ಧೆ 2026 ರ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕಾರ್ಕಳ ಮಾಳ ಬಳಿ ಸರಣಿ ಅಪಘಾತ: 3 ಕಾರು ಜಖಂ

ಕಾರ್ಕಳ ಮಾಳ ಚೆಕ್ ಪೋಸ್ಟ್ ಬಳಿ ಹೆದ್ದಾರಿಯಲ್ಲಿ ಆಯಿಲ್ ಲೀಕ್ ಆಗಿ 3 ಕಾರುಗಳ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.