ಕರಾವಳಿ, ಮಲೆನಾಡು ಸೇರಿ 7 ಜಿಲ್ಲೆಗಳಿಗೆ ಜುಲೈ 20 ರಿಂದ 24ರವರೆಗೆ ‘ಆರೆಂಜ್ ಅಲರ್ಟ್’

Date:

spot_img

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿದ್ದು, ಹವಾಮಾನ ಇಲಾಖೆಯು ಮುನ್ನೆಚ್ಚರಿಕೆ ನೀಡಿದೆ. ಜುಲೈ 20 ರಿಂದ 24ರವರೆಗೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳ ಕೆಲವು ಕಡೆಗಳಲ್ಲಿ ಅತೀ ಭಾರಿ ಮಳೆಯಾಗುವ ಸಾಧ್ಯತೆಗಳಿರುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಇನ್ನು ಬೆಳಗಾವಿ, ಮಂಡ್ಯ, ಮೈಸೂರು, ಚಾಮರಾಜನಗರ, ಬೀದರ್ ಹಾಗೂ ಕಲಬುರಗಿ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಭಾರೀ ಮಳೆಯಾಗುವ ಸಂಭವವಿದ್ದು, ಈ ಜಿಲ್ಲೆಗಳಿಗೆ ಸೋಮವಾರ ಹಳದಿ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಜುಲೈ 24ರವರೆಗೆ ಹಗುರದಿಂದ ಸಾಧಾರಣ ಮಳೆಯಾಗುವ ಹೆಚ್ಚಿನ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆಯ ವಿಜ್ಞಾನಿ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ.

ಪೂರ್ವ ಅರಬ್ಬಿ ಸಮುದ್ರದ ಮಹಾರಾಷ್ಟ್ರ, ಕರ್ನಾಟಕ ಹಾಗೂ ಕೇರಳದ ಕರಾವಳಿ ತೀರದಲ್ಲಿ ಟ್ರಫ್ ಸಕ್ರಿಯವಾಗಿದ್ದು, ಸಿಯರ್‌ಝೀನ್ ಪೂರ್ವ-ಪಶ್ಚಿಮವಾಗಿ 17 ಡಿಗ್ರಿ ಉತ್ತರ ಅಕ್ಷಾಂಶದಲ್ಲಿ 5.8 ಕಿ.ಮೀ ಎತ್ತರದಲ್ಲಿದೆ. ಇದರ ಪ್ರಭಾವದಿಂದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲೂ ಜುಲೈ 24ರವರೆಗೆ ವ್ಯಾಪಕವಾಗಿ ಮಳೆಯಾಗುವ ಹೆಚ್ಚಿನ ಸಾಧ್ಯತೆಗಳಿವೆ. ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿಯೂ ಜುಲೈ 24ರವರೆಗೆ ಹಲವು ಕಡೆ ಮಳೆಯಾಗಲಿದೆ ಎಂದು ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.

ಮೀನುಗಾರರಿಗೆ ಎಚ್ಚರಿಕೆ

ಕರ್ನಾಟಕ ಕರಾವಳಿ ಮತ್ತು ಕರಾವಳಿ ತಟದ ಹತ್ತಿರ ಪ್ರತಿ ಗಂಟೆಗೆ 60 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಗಳಿರುವುದರಿಂದ, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಮಳೆ ಪ್ರಮಾಣ

ಭಾನುವಾರ ವರದಿಯಾದ ಮಳೆ ಪ್ರಮಾಣದ ಪ್ರಕಾರ, ಕಾರವಾರದಲ್ಲಿ 12 ಸೆಂ.ಮೀ., ಉಡುಪಿಯ ಸಿದ್ದಾಪುರದಲ್ಲಿ 9 ಸೆಂ.ಮೀ., ಆಗುಂಬೆಯಲ್ಲಿ 7 ಸೆಂ.ಮೀ., ದಕ್ಷಿಣ ಕನ್ನಡದ ಮೂಲ್ಕಿಯಲ್ಲಿ 6 ಸೆಂ.ಮೀ., ಮತ್ತು ಗದಗ ಜಿಲ್ಲೆಯಲ್ಲಿ 4 ಸೆಂ.ಮೀ. ಮಳೆಯಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಅಮೆರಿಕ-ಇರಾನ್ ಯುದ್ಧ: ಪಾಕಿಸ್ತಾನದಿಂದ ಶಾಂತಿ ಯತ್ನ

ಅಮೆರಿಕ ಮತ್ತು ಇರಾನ್ ನಡುವೆ ಯುದ್ಧ 10ನೇ ದಿನಕ್ಕೆ ಕಾಲಿಟ್ಟಿದ್ದು, ಶಾಂತಿ ಒಪ್ಪಂದಕ್ಕೆ ಪಾಕಿಸ್ತಾನದ ಮೂಲಕ ಪ್ರಯತ್ನ ಸಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ತೈಲ ಬೆಲೆ ಭಾರಿ ಏರಿಕೆ: ಇರಾನ್ ಅಮೆರಿಕ ಸಂಘರ್ಷದ ಪ್ರಭಾವ

ಮಧ್ಯಪ್ರಾಚ್ಯ ಯುದ್ಧದಿಂದಾಗಿ ಕಚ್ಚಾ ತೈಲ ದರದಲ್ಲಿ ಭಾರಿ ಏರಿಕೆ ಕಂಡಿದೆ. ಭಾರತಕ್ಕೆ ಇಂಧನ ಬಿಕ್ಕಟ್ಟಿನ ಭೀತಿ ಎದುರಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.