ಪ.ಪೂ. ಕಾಲೇಜು ಪ್ರಾಂಶುಪಾಲರ ಸಂಘದ ವಾರ್ಷಿಕ ಸಭೆ ಶೈಕ್ಷಣಿಕ ಸಾಧಕರಿಗೆ ಗೌರವ

Date:

spot_img

ಉಡುಪಿ : ವಿದ್ಯಾರ್ಥಿಗಳ ಏಳಿಗೆಗೆ ಶ್ರಮಿಸಿದ ಶಿಕ್ಷಕರ ಶ್ರಮ ಎಂದೂ ವ್ಯರ್ಥವಾಗದು. ಅಂತಹ ಕಾರ್ಯದಲ್ಲಿ ತೊಡಗಿಸಿಕೊಂಡ ಉಡುಪಿ ಜಿಲ್ಲಾ ಅನುದಾನಿತ ಮತ್ತು ಅನುದಾನ ರಹಿತ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರ ಸಂಘದ ಕಾರ್ಯ ಶ್ಲಾಘನೀಯ ಎಂದು ಮಾಹೆಯ ಪ್ರಿನ್ಸಿಪಾಲ್ ಆಫಿಸರ್ ಡಾ. ಆದಿತ್ಯ ಮೋಹನ್ ಜಾಧವ್‌ ಹೇಳಿದರು. ಮಾಹೆ ಮಣಿಪಾಲದಲ್ಲಿ ಆಗಸ್ಟ್ 5, 2025ರಂದು ಜರುಗಿದ ಉಡುಪಿ ಜಿಲ್ಲಾ ಅನುದಾನಿತ ಮತ್ತು ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ವಾರ್ಷಿಕ ಸಭೆ ಹಾಗೂ ಸಾಧಕ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರವನ್ನು ಉದ್ಘಾಟಿಸಿ ಮಾತನಾಡಿದರು. ಜಿಲ್ಲೆಯ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಮಾಹ ಮಣಿಪಾಲದಲ್ಲಿ ಕೇವಲ ವೈದ್ಯಕೀಯ, ಇಂಜಿನಿಯರಿಂಗ್ ಮಾತ್ರವಲ್ಲದೇ ಇತರ ನೂರಾರು ಪದವಿ-ವೃತ್ತಿಪರ ಕೋರ್ಸುಗಳಿಗೆ ಅವಕಾಶವಿದೆ ಎಂದರು.

ಸಭೆಯಲ್ಲಿ ಉಪಸ್ಥಿತರಿದ್ದ ಮಾಹೆಯ ಡಬ್ಲ್ಯು.ಜಿ.ಎಸ್.ಎಚ್.ಎ ಸಂಸ್ಥೆಯ ಪ್ರಾಂಶುಪಾಲರಾದ ಪ್ರೊ. ಸತೀಶ್ ಜಯರಾಮ್ ಇವರು ವಿದ್ಯಾರ್ಥಿಗಳಿಗೆ ಹೋಟೆಲ್ ಮ್ಯಾನೇಜ್ ಮೆಂಟ್ ಕೋರ್ಸ್‌ನ ಅವಕಾಶಗಳ ಬಗ್ಗೆ ವಿಸ್ತ್ರತ ಮಾಹಿತಿ ನೀಡಿದರು.

ಮುಖ್ಯ ಅತಿಥಿಯಾಗಿ ಆಗಮಿಸಿದ ಜಿಲ್ಲಾ ಉಪನಿರ್ದೇಶಕರಾದ ಶ್ರೀ ಮಾರುತಿ ಇವರು 2024-25ನೇ ಸಾಲಿನ ಜಿಲ್ಲೆಯ ಶೈಕ್ಷಣಿಕ ವರ್ಷದ ಸಾಧನೆಗೆ ಕೊಡುಗೆಯಿತ್ತ ಉಪಸ್ಥಿತರಿದ್ದ ಖಾಸಗಿ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರನ್ನು ಗೌರವಿಸಿದರು.

ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ಶ್ರೀ ದಿನೇಶ್ ಎಂ ಕೊಡವೂರ್, ಸತತ ಎರಡು ವರ್ಷದ ಸಂಘದ ವಾರ್ಷಿಕ ಸಭೆಯನ್ನು ನಡೆಸಿಕೊಟ್ಟ ಮಾಹೆಯ ಟಾಜ್ಯ ಹಾಗೂ ಡಬ್ಲ್ಯು.ಜಿ.ಎಸ್.ಎಚ್.ಎ ಸಂಸ್ಥೆಗಳಿಗೆ ಸಂಘದ ಪರವಾಗಿ ಕೃತಜ್ಞತೆಯನ್ನು ಸಲ್ಲಿಸಿದರು. ಜಿಲ್ಲೆಯು ಕಳೆದ ಶೈಕ್ಷಣಿಕ ವರ್ಷದಲ್ಲಿ ರಾಜ್ಯಕ್ಕೆ ಪಿಯುಸಿ ಫಲಿತಾಂಶದಲ್ಲಿ ಪ್ರಥಮ ಸ್ಥಾನಿಯಾಗಿ ಮೂಡಿಬರಲು ಶ್ರಮಿಸಿದ ಎಲ್ಲಾ ಪ್ರಾಂಶುಪಾಲರನ್ನು ಅಭಿನಂದಿಸಿ, ಜಿಲ್ಲಾಡಳಿತ ಮತ್ತು ಉಪನಿರ್ದೇಶಕರ ಮಾರ್ಗದರ್ಶನವನ್ನು ಸ್ಮರಿಸಿದರು. ಪ್ರಾಂಶುಪಾಲರ ಸಂಘವು ಪ್ರತೀ ವರ್ಷದಂತೆ ಶೈಕ್ಷಣಿಕವಾಗಿ ಮಾತ್ರವಲ್ಲದೆ ಸಾಮಾಜಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳಲಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲೆಯ ಪಿಯುಸಿ ಸಾಧಕ ವಿದ್ಯಾರ್ಥಿಗಳನ್ನು, ಸಭೆಯಲ್ಲಿ ಉಪಸ್ಥಿತರಿದ್ದ ಪ್ರಾಂಶುಪಾಲರನ್ನು ಸಂಘ ಹಾಗೂ ಮಾಹೆ ಮಣಿಪಾಲದ ವತಿಯಿಂದ ಗೌರವಿಸಲಾಯಿತು. ಆನಂದತೀರ್ಥ ಪ.ಪೂ.ಕಾಲೇಜಿನ ಪ್ರಾಂಶುಪಾಲರಾದ ಶ್ರೀ ವಿಜಯ್‌ರಾವ್ ಸ್ವಾಗತಿಸಿ, ಜ್ಞಾನಸುಧಾ ಪ.ಪೂ.ಕಾಲೇಜಿನ ಆಂಗ್ಲಭಾಷಾ ಉಪನ್ಯಾಸಕಿ ಕು. ದರ್ಶಿನಿ ಕೆ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ