
ಕಾರ್ಕಳ: ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿಗೆ ಸ್ವಾತಂತ್ರ್ಯ ದಿನಾಚರಣೆಯ ದಿನದಂದು ಮುಖ್ಯ ಅತಿಥಿಗಳಾಗಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ಭಾರತೀಯ ಬಾಹ್ಯಾಕಾಶ ವಿಜ್ಞಾನಿ ಮತ್ತು ಇಸ್ರೋ ಮಾಜಿ ಅಧ್ಯಕ್ಷರಾದ ಎ.ಎಸ್ ಕಿರಣ್ ಕುಮಾರ್ ರವರು ಆಗಮಿಸಿ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಲಿದ್ದಾರೆ.
15 ಆಗಸ್ಟ್ 2025ರ ಶುಕ್ರವಾರದಂದು ಪೂರ್ವಾಹ್ನ 10. 00 ಗಂಟೆಗೆ ಸರಿಯಾಗಿ ಕಾಲೇಜಿನ ಸಪ್ತಗಿರಿ ಕ್ಯಾಂಪಸ್ ನಲ್ಲಿ ಧ್ವಜಾರೋಹಣ ಕಾರ್ಯಕ್ರಮ ಜರುಗಲಿರುವುದು. ಬಳಿಕ 11.00 ಗಂಟೆಗೆ ಎ.ಎಸ್ ಕಿರಣ್ ಕುಮಾರ್ ರವರಿಂದ ” From Class Room to Cosmos : Science, Youth and Nation Building ” ಎಂಬ ವಿಚಾರದ ಕುರಿತು ವಿದ್ಯಾರ್ಥಿಗಳಿಗೆ CEF inspiro ಎಂಬ ಶೀರ್ಷಿಕೆಯಲ್ಲಿ ಸ್ಪೂರ್ತಿ ಮಾತು ಕಾರ್ಯಕ್ರಮ ನಡೆಯಲಿರುವುದು. ನಂತರ ಜೀ ಸರಿಗಮಪ ಮತ್ತು ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಖ್ಯಾತಿಯ ಶ್ರೀ ಯಶವಂತ ಎಂ.ಜಿ ಹಾಗೂ ತಂಡದವರಿಂದ ದೇಶಭಕ್ತಿ ಗೀತೆಗಳ ಗಾಯನ ಕಾರ್ಯಕ್ರಮ ನಡೆಯಲಿರುವುದು.