ಪಹಲ್ಗಾಮ್ ಉಗ್ರ ದಾಳಿ: ಪತ್ನಿ ಮತ್ತು ಮಗುವಿನ ಎದುರೇ ಭರತ್ ಭೂಷಣ್ ಹತ್ಯೆ, ಶಿವಮೊಗ್ಗದ ಮಂಜುನಾಥ್ ಸಹಿತ ಇಬ್ಬರು ಬಲಿ

Date:

spot_img

ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಮಂಗಳವಾರ ನಡೆದ ಭೀಕರ ಉಗ್ರದಾಳಿಯಲ್ಲಿ ಬೆಂಗಳೂರಿನ ಜೆ.ಪಿ. ಪಾರ್ಕ್ ನಿವಾಸಿ ಹಾಗೂ ಹಾವೇರಿ ಜಿಲ್ಲೆ ರಾಣೆಬೆನ್ನೂರಿನ ಮೂಲದ ಭರತ್ ಭೂಷಣ್ (41) ಮತ್ತು ಶಿವಮೊಗ್ಗದ ಮಂಜುನಾಥ್ ದುರ್ಮರಣಕ್ಕೀಡಾಗಿದ್ದಾರೆ.

ಭರತ್ ಭೂಷಣ್ , ಪತ್ನಿ ಸುಜಾತಾ (37) ಹಾಗೂ ಮೂರು ವರ್ಷದ ಮಗುವಿನೊಂದಿಗೆ ಕಾಶ್ಮೀರ ಪ್ರವಾಸದಲ್ಲಿದ್ದರು. ಭರತ್ ಭೂಷಣ್ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗಿ ಆಗಿದ್ದು, ತನ್ನ ಕುಟುಂಬ ಸಮೇತ ಯಶವಂತಪುರದ ಮತ್ತಿಕೇರೆಯ ಜೆ.ಪಿ. ಪಾರ್ಕ್‌ನಲ್ಲಿ ವಾಸವಾಗಿದ್ದರು. ಪತ್ನಿ ಮತ್ತು ಮಗುವಿನ ಎದುರೇ ಉಗ್ರರು ಗುಂಡು ಹಾರಿಸಿ ಭರತ್ ಅವರನ್ನು ಹತ್ಯೆಗೈದರು ಎಂಬ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ.

ಸಂಜೆ ಪ್ರವಾಸದ ವೇಳೆ ಉಗ್ರನೊಬ್ಬ ನೇರವಾಗಿ ಸಮೀಪಿಸಿ, “ನಿನ್ನ ಹೆಸರು ಏನು? ಯಾವ ಧರ್ಮದವರು?” ಎಂದು ಪ್ರಶ್ನಿಸಿ, “ಹಿಂದೂ” ಎಂದು ಉತ್ತರಿಸಿದ ಕೂಡಲೇ ಭರತ್ ಅವರ ತಲೆಗೆ ಗುಂಡು ಹಾರಿಸಿದ್ದಾನೆ. ಪತ್ನಿ ಸುಜಾತಾ ಈ ಘಟನೆಗೆ ಸಾಕ್ಷಿಯಾಗಿದ್ದು, ಮಗುವನ್ನು ಎತ್ತಿಕೊಂಡು ಸ್ಥಳದಿಂದ ಓಡಿದ್ದಾರೆ.

ಈ ಘಟನೆ ಸಂಬಂಧ ಸಂಸದ ತೇಜಸ್ವಿ ಸೂರ್ಯ ತಕ್ಷಣವೇ ಭರತ್ ಅವರ ಪತ್ನಿ ಸುಜಾತಾರನ್ನು ಸಂಪರ್ಕಿಸಿ, ಸ್ಥಳೀಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಅವರನ್ನು ಸುರಕ್ಷಿತವಾಗಿ ಅನಂತನಾಗ್‌ನ ಶಿಬಿರವೊಂದಕ್ಕೆ ಸ್ಥಳಾಂತರಿಸುವಲ್ಲಿ ನೆರವಾಗಿ ಮಾನವೀಯತೆ ಮೆರೆದಿದ್ದಾರೆ.

ಭರತ್ ಭೂಷಣ್ ರಾಣೆಬೆನ್ನೂರು ಶಾಸಕ ಪ್ರಕಾಶ್ ಕೋಳಿವಾಡ ಅವರ ಸಹೋದರಿಯ ಗಂಡನ ಸ್ನೇಹಿತರಾಗಿದ್ದವರಂತೆ ಸ್ಥಳೀಯ ಮೂಲಗಳು ತಿಳಿಸಿವೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ