
ಪಳ್ಳಿ: ಗ್ರಾಮೀಣ ಕಾಂಗ್ರೆಸ್ ಸಮಿತಿ, ಪಳ್ಳಿ-ನಿಂಜೂರು ಆಯೋಜಿಸಿದ್ದ ಪಳ್ಳಿ ಗ್ರಾಮದ ಬೂತ್ ಸಂಖ್ಯೆ 122ರ ಬೂತ್ ಸಮಿತಿ ಸಭೆಯು ಜುಲೈ 20, 2025ರ ಭಾನುವಾರ ಸಂಜೆ 5:00 ಗಂಟೆಗೆ ನಡೆಯಿತು. ಪಳ್ಳಿ ಮಾರುತಿ ನಗರದಲ್ಲಿರುವ ಸತ್ಯನಾರಾಯಣ ಭಟ್ ಅವರ ನಿವಾಸದಲ್ಲಿ ನಡೆದ ಈ ಸಭೆಯ ಅಧ್ಯಕ್ಷತೆಯನ್ನು ಗ್ರಾಮೀಣ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಶ್ರೀ ವಿಲ್ಸನ್ ಲೋಬೊ ವಹಿಸಿದ್ದರು.
ಪಕ್ಷ ಸಂಘಟನೆ ಹಾಗೂ ಕಾರ್ಯಕರ್ತರ ಜವಾಬ್ದಾರಿಗಳ ಕುರಿತು ಬೈಲೂರು ಜಿಲ್ಲಾ ಪಂಚಾಯತ್ ಕಾಂಗ್ರೆಸ್ ಪಕ್ಷದ ಉಸ್ತುವಾರಿ, ರಾಜ್ಯ ಕೃಷಿ ಘಟಕದ ಕಾರ್ಯದರ್ಶಿ ಹಾಗೂ ಕುಕ್ಕುಂದೂರು ಗ್ರಾಮ ಪಂಚಾಯತ್ ಸದಸ್ಯರಾದ ಉದಯ್ ಶೆಟ್ಟಿ ಕುಕ್ಕುಂದೂರು ಅವರು ಬೂತ್ ಸಮಿತಿಯ ಅಧ್ಯಕ್ಷರು ಹಾಗೂ ವಿವಿಧ ಘಟಕಗಳ ಅಧ್ಯಕ್ಷರಿಗೆ ಮಾರ್ಗದರ್ಶನ ನೀಡಿದರು.
ಬಳಿಕ, ಕಾರ್ಯಕರ್ತರು ಮತ್ತು ಸ್ಥಳೀಯರ ಸಮಸ್ಯೆಗಳನ್ನು ಆಲಿಸಿದ ಉದಯ್ ಶೆಟ್ಟಿ ಕುಕ್ಕುಂದೂರು, ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಕುಮಾರ್ ಶೆಟ್ಟಿ ಮುನಿಯಾಲು ಹಾಗೂ ಬ್ಲಾಕ್ ಕಾಂಗ್ರೆಸ್‌ನ ನೂತನ ಅಧ್ಯಕ್ಷ ಶುಭದ್ ರಾವ್ ಅವರ ಗಮನಕ್ಕೆ ತಂದು, ಆದಷ್ಟು ಬೇಗ ಸಮಸ್ಯೆಗಳನ್ನು ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು. ಕಾರ್ಕಳ ಬ್ಲಾಕ್ ಹಿಂದುಳಿದ ವರ್ಗ ಘಟಕದ ಅಧ್ಯಕ್ಷ ಅನಿಲ್ ಪೂಜಾರಿ ಹಾಗೂ ಕಾರ್ಕಳ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷ ರೆಹಮತುಲ್ಲಾ ಅವರು ಪಕ್ಷ ಸಂಘಟನೆಗೆ ಸಂಬಂಧಿಸಿದಂತೆ ಅಮೂಲ್ಯ ಸಲಹೆ ಸೂಚನೆಗಳನ್ನು ನೀಡಿದರು.
ಸಭೆಯಲ್ಲಿ ಕಾರ್ಕಳ ಗ್ಯಾರಂಟಿ ಸಮಿತಿ ಸದಸ್ಯರಾದ ಸಂತೋಷ್ ಶೆಟ್ಟಿ ನಿಂಜೂರು, ಮಾಜಿ ಮಂಡಲ ಪ್ರಧಾನರಾದ ಚಂದ್ರಶೇಖರ ಶೆಟ್ಟಿ ನಿಂಜೂರು, ಕಾಂಗ್ರೆಸ್ ಪ್ರಚಾರ ಸಮಿತಿಯ ಜಿಲ್ಲಾ ಉಪಾಧ್ಯಕ್ಷ ದಿನಕರ ಶೆಟ್ಟಿ, ಮಹಿಳಾ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷೆ ಜಯಂತಿ ಆಚಾರ್ಯ, ಬೂತ್ ಅಧ್ಯಕ್ಷ ಸಂತೋಷ್ ಶೆಟ್ಟಿ, ಗ್ರಾಮೀಣ ಯುವ ಕಾಂಗ್ರೆಸ್ ಅಧ್ಯಕ್ಷ ಸುಜೀತ್ ಪೂಜಾರಿ, ಪಳ್ಳಿ ಬೂತ್ ಸಂಖ್ಯೆ 124ರ ನೂತನ ಅಧ್ಯಕ್ಷ ಸುನಿಲ್ ಶೆಟ್ಟಿ, ನಿಕಟ ಪೂರ್ವ ಅಧ್ಯಕ್ಷ ಶೇಖರ ಶೆಟ್ಟಿ, ಪಳ್ಳಿ ಬೂತ್ ಸಂಖ್ಯೆ 123ರ ಅಧ್ಯಕ್ಷ ಪ್ರಶಾಂತ್ ಶೆಟ್ಟಿ, ಬೂತ್ 122ರ ಎನ್‌ಎಸ್‌ಯುಐ ಅಧ್ಯಕ್ಷರು, ಪರಿಶಿಷ್ಟ ಜಾತಿ ಬೂತ್ ಅಧ್ಯಕ್ಷ ವಿಠಲ, ಬೂತ್ ಸಮಿತಿಯ ವಿವಿಧ ಘಟಕಗಳ ಅಧ್ಯಕ್ಷರು ಮತ್ತು ಸದಸ್ಯರು, ಹಾಗೂ ಸ್ಥಳೀಯ ಕಾಂಗ್ರೆಸ್‌ನ ಹಿರಿಯ ಮತ್ತು ಕಿರಿಯ ನಾಯಕರು ಹಾಗೂ ಸಕ್ರಿಯ ಕಾರ್ಯಕರ್ತರು ಉಪಸ್ಥಿತರಿದ್ದರು.
ಪಳ್ಳಿ ಗ್ರಾಮ ಪಂಚಾಯತ್ ಸದಸ್ಯರಾದ ವಿಜಯ ಎಂ. ಶೆಟ್ಟಿ ಪಳ್ಳಿ ಅವರು ಸಭೆಯನ್ನು ಸ್ವಾಗತಿಸಿ, ನಿರೂಪಿಸಿದರು. ಕಾರ್ಕಳ ಬ್ಲಾಕ್ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷರಾದ ವಿಶ್ವನಾಥ ಭಂಡಾರಿ ಅವರು ಧನ್ಯವಾದ ಸಮರ್ಪಿಸಿದರು.