ಕಾರ್ಕಳ-ಉಡುಪಿ (ಬೈಲೂರು-ಕಣಂಜಾರ್-ಪಳ್ಳಿ-ಮೂಡುಬೆಳ್ಳೆ ಮೂಲಕ) ಬಸ್ ಸಂಚಾರ ಪುನರಾರಂಭಕ್ಕೆ ಪಳ್ಳಿ-ನಿಂಜೂರು ಗ್ರಾಮೀಣ ಕಾಂಗ್ರೆಸ್ ಸಮಿತಿಯಿಂದ ಸಚಿವರಿಗೆ ಮನವಿ

Date:

spot_img

ಪಳ್ಳಿ : ಕಾರ್ಕಳ – ಬೈಲೂರು – ಕಣಂಜಾರ್ – ಪಳ್ಳಿ – ಮೂಡುಬೆಳ್ಳೆ – ಉಡುಪಿ ಮಾರ್ಗವಾಗಿ ಸಂಚರಿಸುತಿದ್ದ ಸರಕಾರಿ ಬಸ್ಸು ನಾಲ್ಕೈದು ತಿಂಗಳಿನಿಂದ ಸ್ಥಗಿತಗೊಂಡಿದ್ದು ಪುನರಾರಂಬಿಸಲು ಪಳ್ಳಿ – ನಿಂಜೂರು ಗ್ರಾಮೀಣ ಕಾಂಗ್ರೆಸ್ ಸಮಿತಿ ವತಿಯಿಂದ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಮಾಡಲಾಯಿತು. ಸಾರಿಗೆ ಇಲಾಖೆ ಸರಕಾರಿ ಬಸ್ಸು ನಿಲ್ಲಿಸಿದ ಕಾರಣ, ದಿನ ಕೆಲಸಕ್ಕೆ, ತಾಲೂಕು ಹಾಗೂ ಜಿಲ್ಲಾ ಕಚೇರಿಗೆ, ಆಸ್ಪತ್ರೆಗೆ, ದೇವಸ್ಥಾನಕ್ಕೆ, ಇನ್ನಿತರ ಖಾಸಗಿ ಕೆಲಸಕ್ಕೆ ಹೋಗುವ ಮಹಿಳೆಯರಿಗೆ, ಶಾಲಾ, ಕಾಲೇಜ್ ವಿದ್ಯಾರ್ಥಿಗಳಿಗೆ, ಇತರ ಪ್ರಯಾಣಿಕರಿಗೆ ತುಂಬಾ ತೊಂದರೆಯಾಗುತ್ತಿದೆ. ಇದರ ಬಗ್ಗೆ ತಾವು ಸಂಬಂಧಪಟ್ಟ ಇಲಾಖೆಗೆ ಬಸ್ಸು ಪುನರಾರಂಭಿಸಲು ಸೂಚನೆ ನೀಡಬೇಕು ಎಂದು ಮನವಿ ಮಾಡಲಾಯಿತು.

ಸಚಿವರು ಮನವಿಗೆ ತಕ್ಷಣ ಸ್ಪಂದಿಸಿ ಸಮಸ್ಯೆಯನ್ನು ಅರ್ಥಮಾಡಿಕೊಂಡು ಆದಷ್ಟು ಬೇಗ ಪರಿಹರಿಸುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ಹಾಗೂ ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಸನ್ಮಾನ್ಯ ಉದಯ ಕುಮಾರ್ ಶೆಟ್ಟಿ ಮುನಿಯಾಲು, ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಉಪಾಧ್ಯಕ್ಷ ದಿನಕರ ಶೆಟ್ಟಿ, ಕಾರ್ಕಳ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ವಿಶ್ವನಾಥ ಭಂಡಾರಿ ನಿಂಜೂರು, ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ವಿಲ್ಸನ್ ಲೋಬೊ ಪಳ್ಳಿ, ಗ್ರಾಮೀಣ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಜಯಂತಿ ಆಚಾರ್ಯ ಪಳ್ಳಿ, ಕಾರ್ಕಳ ತಾಲೂಕು ಗ್ಯಾರಂಟಿ ಸಮಿತಿ ಸದಸ್ಯರು ಸಂತೋಷ್ ಶೆಟ್ಟಿ ನಿಂಜೂರು, ಪಳ್ಳಿ ಗ್ರಾಮ ಪಂಚಾಯತ್ ಸದಸ್ಯ ವಿಜಯ ಎಮ್ ಶೆಟ್ಟಿ ಪಳ್ಳಿ, ಬೂತ್ ಕಮಿಟಿ ಅಧ್ಯಕ್ಷರಾದ ಪ್ರಶಾಂತ್ ಶೆಟ್ಟಿ ಪಳ್ಳಿ ಇನ್ನಿತರ ಗ್ರಾಮೀಣ ಕಾಂಗ್ರೆಸ್ ಮುಖಂಡರು, ಗ್ರಾಮೀಣ ಸಮಿತಿ ಸದಸ್ಯರು, ಪಳ್ಳಿ- ನಿಂಜೂರು ಗ್ರಾಮದ ಮಹಿಳೆಯರು ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.