
ಉಡುಪಿ : ಭಾರತೀಯ ಜನಸಂಘದ ಸಂಸ್ಥಾಪಕರಲ್ಲೊಬ್ಬರಾದ ‘ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮ ದಿನಾಚರಣೆ’ ಹಾಗೂ ‘ಆತ್ಮನಿರ್ಭರ ಭಾರತ ಸಂಕಲ್ಪ ಅಭಿಯಾನ’ದ ಜಿಲ್ಲಾ ಕಾರ್ಯಾಗಾರವು ನಾಳೆ ಸೆ.25 ಗುರುವಾರ ಬೆಳಿಗ್ಗೆ ಗಂಟೆ 10.30ಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷರಾದ ಕುತ್ಯಾರು ನವೀನ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲೆಯ ಸಂಸದರು ಮತ್ತು ಶಾಸಕರುಗಳ ಉಪಸ್ಥಿತಿಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಲಿದೆ.
ಈ ಸಂದರ್ಭದಲ್ಲಿ ಬಿಜೆಪಿ ತೆಲಂಗಾಣ ರಾಜ್ಯಾಧ್ಯಕ್ಷರಾದ ಎನ್.ರಾಮಚಂದ್ರ ರಾವ್ ಮತ್ತು ಬಿಜೆಪಿ ಕೊಡಗು ಮಾಜಿ ಜಿಲ್ಲಾಧ್ಯಕ್ಷರಾದ ಭಾರತೇಶ್ ಅವರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳಲಿದ್ದಾರೆ.



































