ಪರಶುರಾಮ ಪ್ರತಿಮೆ ಮರುಸ್ಥಾಪನೆ ಪಿಐಎಲ್‌: ಅರ್ಜಿದಾರ 5 ಲಕ್ಷ ರೂ. ಠೇವಣಿ ಇಡಲು ಹೈಕೋರ್ಟ್ ಸೂಚನೆ

Date:

spot_img
Parashurama_Theme_Park11

ಬೆಂಗಳೂರು : ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿರುವ ಪರಶುರಾಮ ಥೀಮ್ ಪಾರ್ಕ್‌ನ ಪ್ರತಿಮೆಯನ್ನು ಮರು ಸ್ಥಾಪಿಸಲು ಸರ್ಕಾರದ ನಿರ್ದೇಶನ ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಸಲ್ಲಿಸಿದ್ದ ವ್ಯಕ್ತಿಯೊಬ್ಬರಿಗೆ ಕರ್ನಾಟಕ ಹೈಕೋರ್ಟ್ ₹5 ಲಕ್ಷ ಠೇವಣಿ ಇರಿಸುವಂತೆ ಸೂಚಿಸಿದೆ.

ಪ್ರತಿಮೆ ನಿರ್ಮಾಣಕ್ಕೆ ನಿಮ್ಮ ವೈಯಕ್ತಿಕ ಕಾಣಿಕೆ ಏನು?

ಉಡುಪಿಯ ಉದಯ ಶೆಟ್ಟಿ ಮುನಿಯಾಲು ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಬ್ರು ಹಾಗೂ ನ್ಯಾಯಮೂರ್ತಿ ಸಿ.ಎಮ್. ಜೋಶಿ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಆದೇಶ ನೀಡಿದೆ. ಪ್ರತಿಮೆ ನಿರ್ಮಾಣದಿಂದ ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುತ್ತದೆ ಎಂಬ ಅರ್ಜಿದಾರರ ವಾದಕ್ಕೆ, ನ್ಯಾಯಪೀಠವು, “ಜನರ ಭಾವನೆಗಳಿಗೆ ಧಕ್ಕೆಯಾಗುತ್ತದೆ ಎಂದು ವಾದಿಸುತ್ತಿದ್ದೀರಿ. ಹಾಗಾದರೆ ಪ್ರತಿಮೆ ನಿರ್ಮಾಣಕ್ಕೆ ನಿಮ್ಮ ವೈಯಕ್ತಿಕ ಕಾಣಿಕೆ ಏನು?” ಎಂದು ಪ್ರಶ್ನಿಸಿತು.

muniyalu1

ನ್ಯಾಯಪೀಠದ ಪ್ರಶ್ನೆಗೆ ಅರ್ಜಿದಾರರ ವಕೀಲರು ₹5 ಲಕ್ಷ ಠೇವಣಿ ಇಡುವುದಾಗಿ ಸಮ್ಮತಿ ಸೂಚಿಸಿದರು. ಇದನ್ನು ದಾಖಲಿಸಿಕೊಂಡ ನ್ಯಾಯಪೀಠ, ಈ ಮೊತ್ತವನ್ನು 2 ವಾರಗಳಲ್ಲಿ ಹೈಕೋರ್ಟ್ ರಿಜಿಸ್ಟ್ರಾರ್‌ ಬಳಿ ಠೇವಣಿ ಇಡಬೇಕು ಎಂದು ಸೂಚಿಸಿ, ಅರ್ಜಿ ವಿಚಾರಣೆಯನ್ನು ಮುಂದೂಡಿತು.

ಪರಶುರಾಮನನ್ನು ಕರಾವಳಿ ಪ್ರದೇಶದ ಸೃಷ್ಟಿಕರ್ತ ಎಂದು ನಂಬಲಾಗಿದ್ದು, ಈ ಪ್ರಕರಣ ರಾಜ್ಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಉಡುಪಿ ಪ್ರವಾಸೋದ್ಯಮ ಮ್ಯಾಸ್ಕಾಟ್ ಸ್ಪರ್ಧೆ: ನಿಟ್ಟೆಯಲ್ಲಿ ಜುಲೈ 25ಕ್ಕೆ ಆಯೋಜನೆ

ಉಡುಪಿ ಪ್ರವಾಸೋದ್ಯಮದ ಅಧಿಕೃತ ಮ್ಯಾಸ್ಕಾಟ್ ವಿನ್ಯಾಸ ಸ್ಪರ್ಧೆ ಜುಲೈ 25ರಂದು ನಿಟ್ಟೆಯಲ್ಲಿ ನಡೆಯಲಿದೆ. ಭಾಗವಹಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಳೆಗಾಲದ ಜ್ವರ, ಸಾಂಕ್ರಾಮಿಕ ರೋಗ ತಡೆಗೆ ರಾಜ್ಯ ಸರ್ಕಾರ ಸನ್ನದ್ಧ

ಮಳೆಗಾಲದಲ್ಲಿ ವೈರಲ್ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಖರ್ಗೆ ವಾಗ್ದಾಳಿ: ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ತೀವ್ರ ಆಕ್ರೋಶ

ನೀಟ್ ಅಕ್ರಮ ಹಾಗೂ ಮಂದಿರದ ಟ್ರಸ್ಟ್ ವಿಚಾರವಾಗಿ ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.