ಕೊರೊನಾ ಸೋಂಕಿನಿಂದ ಪೀಟರ್ ಮಥಾಯಸ್ ನಿಧನ: ತಹಶೀಲ್ದಾರ್ ಭೇಟಿನೀಡಿ ಸಾಂತ್ವನ

Date:

spot_img

ಉಡುಪಿ: ಕಾಪು ತಾಲೂಕಿನ ಬೆಳ್ಳೆ ಗ್ರಾಮದ ನಿವಾಸಿ ಪೀಟರ್ ಮಥಾಯಸ್ (65) ಅವರು ಕೋವಿಡ್-19 ಪಾಸಿಟಿವ್ ದೃಢಪಟ್ಟ ಬಳಿಕ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಜೂನ್ 2 ರಂದು ನಿಧನರಾದರು.

ಮೃತರು ಕರುಳಿನ ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿದ್ದರು. ಮೇ 29ರಂದು ಉಲ್ಬಣವಾದ ರಕ್ತದೊತ್ತಡಕ್ಕೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಪರೀಕ್ಷೆಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.

ಘಟನೆ ಹಿನ್ನೆಲೆ ಕಾಪು ತಹಶೀಲ್ದಾರ್ ಡಾ. ಪ್ರತಿಭಾ ಆರ್. ಅವರು ಜೂನ್ 3 ರಂದು ಮೃತರ ಮನೆಯವರನ್ನು ಭೇಟಿಯಾಗಿ ಅವರ ಆರೋಗ್ಯ ವಿಚಾರಿಸಿದರು ಹಾಗೂ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಅವರಿಗೇನೂ ಕೋವಿಡ್ ಲಕ್ಷಣಗಳು ಕಂಡುಬಂದಿಲ್ಲವೆಂದು ವೈದ್ಯರು ತಿಳಿಸಿದರು.

ಅಂತ್ಯಕ್ರಿಯೆಯನ್ನು ಜೂನ್ 6ರಂದು ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಿ ನೆರವೇರಿಸಲು ನಿರ್ಧರಿಸಲಾಗಿದೆ. ಈ ಬಗ್ಗೆ ಸಂಬಂಧಿತ ಅಧಿಕಾರಿಗಳು ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ.

ತಾಲೂಕು ವೈದ್ಯಾಧಿಕಾರಿ ಡಾ. ವಾಸುದೇವ್, ಶಿರ್ವ ಸಮುದಾಯ ಆರೋಗ್ಯ ಕೇಂದ್ರದ ಡಾ. ಸುಬ್ರಹ್ಮಣ್ಯ ರಾವ್, ಡಾ. ವೈಷ್ಣವಿ, ಆಶಾ ಕಾರ್ಯಕರ್ತೆ ಯಶೋದ ಹಾಗೂ ಗ್ರಾಮ ಆಡಳಿತಾಧಿಕಾರಿ ಪ್ರದೀಪ್ ಮೊದಲಾದವರು ಮನೆಗೆ ಭೇಟಿ ನೀಡಿ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಡಾ. ಶಿವಪ್ರಸಾದ್ ಶೆಟ್ಟಿಗೆ ಎನ್‌ಸಿಸಿ ತರಬೇತಿಯಲ್ಲಿ ಪ್ರಥಮ ಸ್ಥಾನ

ನಿಟ್ಟೆ ಸಂಸ್ಥೆಯ ಎನ್‌ಸಿಸಿ ಅಧಿಕಾರಿ ಡಾ. ಶಿವಪ್ರಸಾದ್ ಶೆಟ್ಟಿ ಮಹಾರಾಷ್ಟ್ರದ ಕಾಮ್ಟೀ ತರಬೇತಿಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಉಡುಪಿ ಪ್ರವಾಸೋದ್ಯಮ ಮ್ಯಾಸ್ಕಾಟ್ ಸ್ಪರ್ಧೆ: ನಿಟ್ಟೆಯಲ್ಲಿ ಜುಲೈ 25ಕ್ಕೆ ಆಯೋಜನೆ

ಉಡುಪಿ ಪ್ರವಾಸೋದ್ಯಮದ ಅಧಿಕೃತ ಮ್ಯಾಸ್ಕಾಟ್ ವಿನ್ಯಾಸ ಸ್ಪರ್ಧೆ ಜುಲೈ 25ರಂದು ನಿಟ್ಟೆಯಲ್ಲಿ ನಡೆಯಲಿದೆ. ಭಾಗವಹಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಳೆಗಾಲದ ಜ್ವರ, ಸಾಂಕ್ರಾಮಿಕ ರೋಗ ತಡೆಗೆ ರಾಜ್ಯ ಸರ್ಕಾರ ಸನ್ನದ್ಧ

ಮಳೆಗಾಲದಲ್ಲಿ ವೈರಲ್ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.