
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಪ್ರಯಾಗ್‌ರಾಜ್‌ನ ಮಹಾ ಕುಂಭಮೇಳಕ್ಕೆ ಭೇಟಿ ನೀಡಿ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಲಿದ್ದಾರೆ. ಪ್ರಧಾನಿ ಬೆಳಗ್ಗೆ 10:05ಕ್ಕೆ ಪ್ರಯಾಗ್‌ರಾಜ್ ವಿಮಾನ ನಿಲ್ದಾಣಕ್ಕೆ ಆಗಮಿಸುವ ನಿರೀಕ್ಷೆಯಿದ್ದು, ಅಲ್ಲಿಂದ 10:10ಕ್ಕೆ ಡಿಪಿಎಸ್ ಹೆಲಿಪ್ಯಾಡ್‌ಗೆ ತೆರಳಲಿದ್ದಾರೆ.
ಬೆಳಗ್ಗೆ 10:45ಕ್ಕೆ ಏರಿಯಲ್ ಘಾಟ್‌ಗೆ ಭೇಟಿ ನೀಡುವ ಅವರು, 10:50ಕ್ಕೆ ದೋಣಿಯ ಮೂಲಕ ಮಹಾ ಕುಂಭ ಸ್ಥಳಕ್ಕೆ ಪ್ರಯಾಣಿಸಲಿದ್ದಾರೆ. ನಂತರ 11:00ರಿಂದ 11:30ರ ನಡುವೆ ಪ್ರಧಾನ ಮಂತ್ರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಲಿದ್ದಾರೆ. ಮಹಾ ಕುಂಭದ ಈ ವಿಶೇಷ ಕ್ಷಣದೊಂದಿಗೆ ಪ್ರಧಾನಿ ಹಿಂದೂ ಸಂಸ್ಕೃತಿ ಹಾಗೂ ಪರಂಪರೆಯ ಮಹತ್ವವನ್ನು ಮತ್ತೊಮ್ಮೆ ಪ್ರತಿಪಾದಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.