
ನವದೆಹಲಿ: ದೇಶದೆಲ್ಲೆಡೆ ಹೋಳಿ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಶುಭ ಹಾರೈಸಿದ್ದಾರೆ.
ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, “ಎಲ್ಲರಿಗೂ ಹೋಳಿ ಹಬ್ಬದ ಶುಭಾಶಯಗಳು. ಸಂತೋಷದಿಂದ ತುಂಬಿರುವ ಈ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಹೊಸ ಉತ್ಸಾಹ ತುಂಬಲಿ. ದೇಶದ ಜನರಲ್ಲಿ ಏಕತೆಯ ಬಣ್ಣವನ್ನು ಇನ್ನಷ್ಟು ಹೆಚ್ಚಿಸಲಿ” ಎಂದು ಆಶಯ ವ್ಯಕ್ತಪಡಿಸಿದ್ದಾರೆ.
ಭಾರತದಲ್ಲಿ ಹೋಳಿ ಹಬ್ಬ ಅತ್ಯಂತ ಜನಪ್ರಿಯ ಹಿಂದೂ ಹಬ್ಬಗಳಲ್ಲಿ ಒಂದಾಗಿದ್ದು, ಈ ಹಬ್ಬವು ಸಂಪ್ರದಾಯ, ಆಧುನಿಕತೆ, ಆಕರ್ಷಣೆ ಮತ್ತು ಜನಪ್ರಿಯತೆಯಲ್ಲಿ ವಿಶೇಷ ಸ್ಥಾನ ಪಡೆದಿದೆ.