
ಉಡುಪಿ: ಬ್ರಹ್ಮಾವರದಲ್ಲಿ ಯುವತಿ ಅಕ್ಷತಾ ಪೂಜಾರಿ ಅವರ ಮೇಲೆ ಪೊಲೀಸರು ಹಲ್ಲೆ ನಡೆಸಿ, ಪುನಃ ಅವರ ಮೇಲೆಯೇ ಕರ್ತವ್ಯ ಲೋಪದ ಅಡಿಯಲ್ಲಿ ಸುಳ್ಳು ಕೇಸು ದಾಖಲಿಸಿರುವುದನ್ನು ವಿಶ್ವ ಹಿಂದೂ ಪರಿಷದ್ (ವಿಹಿಂಪ) ಉಡುಪಿ ಜಿಲ್ಲಾ ಕಾರ್ಯದರ್ಶಿ ದಿನೇಶ್ ಮೆಂಡನ್ ಅವರು ತೀವ್ರವಾಗಿ ಖಂಡಿಸಿದ್ದಾರೆ.
ನ್ಯಾಯಾಲಯದ ಜಾರಿ ಆದೇಶವನ್ನು ಕಾರ್ಯಗತಗೊಳಿಸುವ ನೆಪದಲ್ಲಿ ಪೊಲೀಸರು ಯುವತಿ ಅಕ್ಷತಾ ಪೂಜಾರಿ ಅವರ ಮೇಲೆ ಹಲ್ಲೆ ನಡೆಸಿರುವುದು ಎಷ್ಟು ಸರಿ ಎಂದು ಅವರು ಪ್ರಶ್ನಿಸಿದ್ದಾರೆ. ಸಾರ್ವಜನಿಕರಿಗೆ ನ್ಯಾಯ ದೊರಕಿಸಿಕೊಡಬೇಕಾದ ಪೊಲೀಸ್ ಇಲಾಖೆಯೇ ಈ ರೀತಿ ವರ್ತಿಸಿರುವುದು ಇಲಾಖೆಯ ಮೇಲೆ ಸಾರ್ವಜನಿಕರು ನಂಬಿಕೆ ಕಳೆದುಕೊಳ್ಳುವಂತಾಗಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.
ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ, ಕೂಡಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಅವರು ತಪ್ಪಿತಸ್ಥ ಪೊಲೀಸರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ವಿಹಿಂಪ ಉಡುಪಿ ಜಿಲ್ಲಾ ಕಾರ್ಯದರ್ಶಿ ದಿನೇಶ್ ಮೆಂಡನ್ ಅವರು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.



































