“ಮುಖ್ಯ ನ್ಯಾಯಮೂರ್ತಿಗಳ ಮೇಲಿನ ದಾಳಿ ಯತ್ನವನ್ನು ಸಾಮಾಜಿಕ ಜಾಲತಾಣದಲ್ಲಿ ಸಂಭ್ರಮಿಸುತ್ತಿರುವುದು, ಇದು ಬಿಜೆಪಿ ಮನಸ್ಥಿತಿಯ ಪ್ರತಿಫಲನವಾಗಿದೆ” : ಪ್ರದೀಪ್ ಬೇಲಾಡಿ

Date:

spot_img

ಕಾರ್ಕಳ : ದೇಶದ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳ ಮೇಲೆ ಕೋರ್ಟ್ ಕಲಾಪ ನಡೆಯುತ್ತಿರುವ ಸಂದರ್ಭದಲ್ಲಿಯೇ ಶೂ ಎಸೆಯುವ ಪ್ರಯತ್ನ ನಡೆದಿರುವುದು ಖಂಡನೀಯ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ವಕ್ತಾರ ಪ್ರದೀಪ್ ಬೇಲಾಡಿ ತಿಳಿಸಿದ್ದಾರೆ.

ಈ ಘಟನೆಯು ನ್ಯಾಯಾಂಗದ ಮೇಲಿನ ಕೋಮುವಾದಿ ಶಕ್ತಿಗಳ ದಾಳಿಯಾಗಿದೆ, ಸಾರ್ವಬೌಮ ಪ್ರಜಾಪ್ರಭುತ್ವ ರಾಷ್ಟ್ರಕ್ಕೆ ಈ ಘಟನೆಯು ಕಪ್ಪು ಚುಕ್ಕೆಯಾಗಿದೆ. ಭಾರತದ ಮುಖ್ಯ ನ್ಯಾಯಮೂರ್ತಿಗಳ ಮೇಲೆಯೇ ಶೂ ಎಸೆತದ ಘಟನೆಯು ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ತಲೆ ತಗ್ಗಿಸುವಂತೆ ಮಾಡಿದೆ ಎಂದಿದ್ದಾರೆ.

ಮಾನ್ಯ ನ್ಯಾಯಮೂರ್ತಿಗಳ ಮೇಲೆ ಶೂ ಎಸೆಯಲು ಪ್ರಯತ್ನಿಸಿದವನು ವೃತ್ತಿಯಲ್ಲಿ ವಕೀಲನಾಗಿದ್ದು ಆತ ಬಿಜೆಪಿ ಪರವಾಗಿರುವ ಸಂಘಟನೆಗಳ ಸದಸ್ಯನಾಗಿದ್ದಾನೆ ಎಂದು ತಿಳಿದು ಬಂದಿದೆ. ಬಿಜೆಪಿ ಪರವಾಗಿರುವ ವೈಚಾರಿಕತೆಯನ್ನು ಮುಂದಿಟ್ಟುಕೊಂಡು ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಪ್ರಯತ್ನಿಸಲಾಗುತ್ತಿದೆ. ಬಿಜೆಪಿ ಕೇಂದ್ರದಲ್ಲಿ ಆಡಳಿತಕ್ಕೆ ಬಂದಾಗಿನಿಂದಲೂ ಸಾಂವಿಧಾನಿಕ ಸಂಸ್ಥೆಗಳ ಮೇಲೆ ದಾಳಿ ನಡೆಸುತ್ತಿದೆ. ಬಿಜೆಪಿ ಪರವಾಗಿರುವ ಸಂಘಟನೆಗಳ ಅಸಹಿಷ್ಣುತೆ ಮಿತಿ ಮೀರಿದ್ದು ಇದಕ್ಕೆ ಕಡಿವಾಣ ಹಾಕಬೇಕಿರುವ ಕೇಂದ್ರ ಸರ್ಕಾರವೇ ಇದನ್ನು ಪೋಷಿಸುತ್ತಿರುವಂತಿದೆ.

ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳ ಮೇಲೆ ಶೂ ಎಸೆಯಲು ಪ್ರಯತ್ನಿಸಿದ ಘಟನೆಯನ್ನು ವಿರೋದ ಪಕ್ಷಗಳು ಖಂಡಿಸಿವೆ. ಆದರೆ ಆಡಳಿತ ಪಕ್ಷ ಬಿಜೆಪಿಯಾಗಲಿ, ಅದರ ಸಂಸದರು, ಕೇಂದ್ರ ಮಂತ್ರಿಗಳಾಗಲಿ, ಶಾಸಕರಾಗಲಿ ಖಂಡಿಸದೇ ಮೌನವಾಗಿರುವುದರ ಅರ್ಥ ಮೌನಂ ಸಮ್ಮತಿ ಲಕ್ಷಣಂ ಆಗಿದೆಯೇ ಎಂದವರು ಪ್ರಶ್ನೆ ಮಾಡಿದ್ದಾರೆ. ಮರದಿಂದ ಹಣ್ಣು ಬಿದ್ದರೂ ಮಾದ್ಯಮ ಹೇಳಿಕೆ ಬಿಡುಗಡೆ ಮಾಡುವ ಕಾರ್ಕಳ ಶಾಸಕ ಸುನೀಲ್ ಕುಮಾರ್ ಅವರು ಮುಖ್ಯ ನ್ಯಾಯಾದೀಶರ ಮೇಲಿನ ಶೂ ದಾಳಿಯ ಘಟನೆಯನ್ನು ಖಂಡಿಸದೇ ಇರುವುದು ಅವರ ಮನಸ್ಥಿತಿಯನ್ನು ಸೂಚಿಸುತ್ತದೆ. ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ಕಾರ್ಯಕರ್ತರು ಈ ಘಟನೆಯನ್ನು ಸಂಭ್ರಮಿಸುತ್ತಿರುವುದು ಇದು ಬಿಜೆಪಿಯ ಮನಸ್ಥಿತಿಯ ಪ್ರತಿಫಲನವಾಗಿದೆ ಎಂದು ಪ್ರದೀಪ್ ಬೇಲಾಡಿ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕಾರ್ಕಳದಲ್ಲಿ ಯುವತಿಗೆ ಹಲ್ಲೆ, ಜೀವ ಬೆದರಿಕೆ: ಯುವಕನ ವಿರುದ್ಧ ಪ್ರಕರಣ

ಕಾರ್ಕಳದಲ್ಲಿ 19 ವರ್ಷದ ಯುವತಿಗೆ ಹಲ್ಲೆ ಹಾಗೂ ಜೀವ ಬೆದರಿಕೆ ಆರೋಪದಡಿ ಯುವಕನ ವಿರುದ್ಧ ಪ್ರಕರಣ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಗ್ ಬಾಸ್ ಹೊಸ ಸೀಸನ್: 6 ಭಾಷೆಗಳಲ್ಲಿ ಶೋ, ಸೌರವ್ ಗಂಗೂಲಿ ಎಂಟ್ರಿ

ಜಿಯೋಸ್ಟಾರ್‌ನಿಂದ 6 ಭಾಷೆಗಳಲ್ಲಿ ಬಿಗ್ ಬಾಸ್ ಆರಂಭ. ಬಾಂಗ್ಲಾ ಆವೃತ್ತಿಗೆ ಸೌರವ್ ಗಂಗೂಲಿ ನಿರೂಪಕ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಲಾವಣ್ಯಾ ಕೊಲೆ ಪ್ರಕರಣ: ಆರೋಪಿ ಚೇತನ್ ಬಂಧನಕ್ಕೆ ಗಿರೀಶ್ ಧೈರ್ಯ

ಲಾವಣ್ಯಾ ಕೊಲೆ ಪ್ರಕರಣದ ಆರೋಪಿ ಚೇತನ್ ಬಂಧನಕ್ಕೆ ಸ್ಥಳೀಯ ಯುವಕ ಗಿರೀಶ್ ವಹಿಸಿದ ಸಾಹಸಮಯ ಪಾತ್ರದ ಸಂಪೂರ್ಣ ವಿವರ, ಪೂರ್ಣ ಮಾಹಿತಿ ಇಲ್ಲಿದೆ ಓದಿ

ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಆಪ್ತರ ಭೇಟಿಗೆ ಕೋರ್ಟ್ ಸಮ್ಮತಿ

ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ನ್ಯಾಯಾಲಯ ಜೈಲಿನಲ್ಲಿ ಆಪ್ತರ ಭೇಟಿಗೆ ಅನುಮತಿ ನೀಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ