ಪ್ರಯಾಗ್ ರಾಜ್: ಕುಂಭಮೇಳಕ್ಕೆ ಹೋಗುತ್ತಿದ್ದ ಕಾರು-ಬಸ್ ಢಿಕ್ಕಿಯಲ್ಲಿ 10 ಜನರು ಮೃತ

Date:

spot_img

ಪ್ರಯಾಗ್ ರಾಜ್: ಕುಂಭಮೇಳಕ್ಕೆ ಭಕ್ತಾದಿಗಳನ್ನು ಕರೆದೊಯ್ಯುತ್ತಿದ್ದ ಕಾರೊಂದು ಬಸ್ಸಿಗೆ ಢಿಕ್ಕಿ ಹೊಡೆದ ಪರಿಣಾಮ ಕನಿಷ್ಠ 10 ಜನರು ಮೃತಪಟ್ಟಿದ್ದಾರೆ. ಈ ಘಟನೆ ಶುಕ್ರವಾರ ತಡರಾತ್ರಿ ಪ್ರಯಾಗ್ ರಾಜ್-ಮಿರ್ಝಾಪುರ್ ಹೆದ್ದಾರಿಯಲ್ಲಿ ಮೇಜಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಛತ್ತೀಸ್‌ಗಢದಿಂದ ಕುಂಭಮೇಳಕ್ಕೆ ಹೋಗುತ್ತಿದ್ದ ಭಕ್ತಾದಿಗಳನ್ನು ಕರೆದೊಯ್ಯುತ್ತಿದ್ದ ಕಾರು ಹಠಾತ್ ಬಸ್ಸಿಗೆ ಢಿಕ್ಕಿ ಹೊಡೆದು ಅಪಘಾತಕ್ಕೀಡಾಗಿದೆ. ಘಟನೆಯಲ್ಲಿ ಸಾವನ್ನಪ್ಪಿದವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ವರೂಪ್ ರಾಣಿ ವೈದ್ಯಕೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಯಮುನಾನಗರ ಉಪ ಪೊಲೀಸ್ ಆಯುಕ್ತ ವಿವೇಕ್ ಚಂದ್ರ ಯಾದವ್ ತಿಳಿಸಿದ್ದಾರೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಘಟನೆಗೆ ಸಂತಾಪ ಸೂಚಿದರು. ಅಲ್ಲದೆ, ಗಾಯಾಳುಗಳಿಗೆ ತಕ್ಷಣ ಚಿಕಿತ್ಸೆ ಒದಗಿಸುವಂತೆ ಮತ್ತು ಪರಿಹಾರ ಕಾರ್ಯಗಳನ್ನು ವೇಗಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಈ ಅಪಘಾತ ರಸ್ತೆ ಸುರಕ್ಷತೆ ಕುರಿತು ಮತ್ತೊಮ್ಮೆ ಪ್ರಶ್ನೆಗಳನ್ನು ಎಬ್ಬಿಸಿದೆ. ಪೊಲೀಸರು ಘಟನೆಯ ಕಾರಣಗಳನ್ನು ತನಿಖೆ ಮಾಡುತ್ತಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.