ಶಾಂತಿಯುತ ಬಕ್ರೀದ್‌ಗೆ ಮುನ್ನೆಚ್ಚರಿಕೆ ಕ್ರಮ: ಅನಧಿಕೃತ ಜಾನುವಾರು ವಧೆ ಹಾಗೂ ಸಾಗಾಣಿಕೆಗೆ ಕಡಿವಾಣ – ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ

Date:

spot_img

ಉಡುಪಿ: ಬರುವ ಬಕ್ರೀದ್ ಹಬ್ಬದ ಆಚರಣೆಯ ವೇಳೆ ಜಾನುವಾರುಗಳ ಅನಧಿಕೃತ ವಧೆ ಹಾಗೂ ಸಾಗಾಣಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಉಡುಪಿ ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ. ಬುಧವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಅವರು, ತಾಲೂಕು ಹಾಗೂ ಜಿಲ್ಲಾ ಮಟ್ಟದ ಸಮಿತಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಅನುಮತಿ ಕಡ್ಡಾಯ:
ಅಧಿಕೃತವಾಗಿ ಜಾನುವಾರು ಸಾಗಣೆ ಮಾಡುವವರಿಗೆ ಪಶುಸಂಗೋಪನಾ ಇಲಾಖೆಯ ಅನುಮತಿ ಮತ್ತು ಪೊಲೀಸ್ ಠಾಣೆಗಳ ಅನುಮತಿ ಕಡ್ಡಾಯವಾಗಿರುತ್ತದೆ. ತಪಾಸಣಾ ತಂಡಗಳು ರಚನೆಯಾಗಿದ್ದು, ಇವು ಎಲ್ಲಾ ಪ್ರದೇಶಗಳಲ್ಲಿ ನಿಯಮ ಉಲ್ಲಂಘನೆ ತಡೆಗಟ್ಟಲು ಕಾರ್ಯನಿರ್ವಹಿಸಲಿದೆ.

ಜಾನುವಾರುಗಳ ರಕ್ಷಣೆ ಮತ್ತು ಆರೈಕೆ:
ಅಕ್ರಮ ಸಾಗಣೆ ವೇಳೆ ವಶಪಡಿಸುವ ಜಾನುವಾರುಗಳನ್ನು ಸ್ಥಳೀಯ ಗೋಶಾಲೆಗಳಿಗೆ ಸ್ಥಳಾಂತರಿಸಿ, ಅವರಿಗೆ ಅಗತ್ಯ ಚಿಕಿತ್ಸೆ, ಮೇವು ಮತ್ತು ನೀರಿನ ವ್ಯವಸ್ಥೆ ಕಲ್ಪಿಸಬೇಕೆಂದು ಪಶುಸಂಗೋಪನಾ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.

ಶಾಂತಿಯುತ ಹಬ್ಬಕ್ಕೆ ಕ್ರಮ:
ತಾಲೂಕು ಮಟ್ಟದ ತಹಶೀಲ್ದಾರರು ಶಾಂತಿ ಸಭೆ ನಡೆಸಬೇಕು. ನಗರ ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಗಳಲ್ಲೂ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಪೊಲೀಸ್ ಇಲಾಖೆ 24×7 ತಪಾಸಣಾ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸಲಿದ್ದು, ನಿಯಮ ಉಲ್ಲಂಘನೆಗೆ ಕಡಿವಾಣ ಹಾಕಲಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ತಿಳಿಸಿದರು.

ಸಭೆಯಲ್ಲಿ ಭಾಗವಹಿಸಿದವರು:
ಈ ಸಭೆಯಲ್ಲಿ ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ.ಎಂ.ಸಿ. ರೆಡ್ಡಪ್ಪ, ನಗರಸಭೆ ಆಯುಕ್ತ ಮಹೇಶ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ರೆಡ್ಮಿ ಪ್ರಿಯರಿಗೆ ಭರ್ಜರಿ ಸುದ್ದಿ: ಶೀಘ್ರದಲ್ಲೇ ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಹೊಸ ‘ರೆಡ್ಮಿ ಟರ್ಬೊ 5’

ಭಾರತದಲ್ಲಿ ರೆಡ್ಮಿ ಟರ್ಬೊ 5 ಬಿಡುಗಡೆ ದಿನಾಂಕ ಸೋರಿಕೆ! ಜೂನ್ 16 ರಂದು ಅನಾವರಣಗೊಳ್ಳಲಿರುವ ಹೊಸ ಸ್ಮಾರ್ಟ್‌ಫೋನ್‌ನ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ಆಕ್ರಮಣಶೀಲತೆಗೆ ಒಳಗಾದ ಮುಗ್ಧ ಮಕ್ಕಳ ಅಂತರರಾಷ್ಟ್ರೀಯ ದಿನ

ಜೂನ್ 4 ರಂದು ಆಚರಿಸಲಾಗುವ ಆಕ್ರಮಣಶೀಲತೆಗೆ ಒಳಗಾದ ಮುಗ್ಧ ಮಕ್ಕಳ ಅಂತರರಾಷ್ಟ್ರೀಯ ದಿನದ ಮಹತ್ವ, ಇತಿಹಾಸ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆಯ ಕುರಿತಾದ ಮಾಹಿತಿ.

ಹಲಸಿನ ಹಣ್ಣು ತಿಂದ ಮೇಲೆ ಬೀಜ ಬಿಸಾಡ್ತೀರಾ? ತಡಿರಿ… ಅದರಲ್ಲಿದೆ ‘ಬಾದಾಮಿ’ಗಿಂತಲೂ ಹೆಚ್ಚಿನ ಶಕ್ತಿ

ಹಲಸಿನ ಹಣ್ಣಿನ ಬೀಜಗಳನ್ನು ಬಿಸಾಡುವ ಮುನ್ನ ಈ ಲೇಖನ ಓದಿ. ಇದರಲ್ಲಿರುವ ಪೋಷಕಾಂಶಗಳು ಮತ್ತು ಆರೋಗ್ಯದ ಲಾಭಗಳ ವಿವರ ಇಲ್ಲಿದೆ.

ಪೆರ್ಣಂಕಿಲ ದೇವಸ್ಥಾನದ ವ್ಯವಸ್ಥಾಪಕ ಸುರೇಶ್ ತಂತ್ರಿ ನಿಧನ

ಪೆರ್ಣಂಕಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪಕ ಸುರೇಶ್ ತಂತ್ರಿಯವರು ದೈವಾಧೀನರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ