
ಉಡುಪಿ, ಏಪ್ರಿಲ್ 15: ಉಡುಪಿ ಜಿಲ್ಲೆಯಲ್ಲಿ ಮುಂಗಾರು ಮುನ್ನೆಚ್ಚರಿಕಾ ಕ್ರಮವಾಗಿ ತುರ್ತು ಪರಿಸ್ಥಿತಿ ಮತ್ತು ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಸಕಾಲಿಕ ತಯಾರಿ ಮಾಡಿಕೊಳ್ಳುವಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಅವರು ಉಡುಪಿ ನಗರಸಭೆಯ ಸಭಾಂಗಣದಲ್ಲಿ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಸೂಚನೆ ನೀಡಿದ್ದಾರೆ.
ಮುಖ್ಯ ಸೂಚನೆಗಳು:
ವಿದ್ಯುತ್ ಲೈನ್ ಹತ್ತಿರವಿರುವ ಅಪಾಯಕಾರಿ ಮರಗಳ ತೆರವು ಮತ್ತು ಹಳೆಯ ತಂತಿ, ಕಂಬಗಳ ಬದಲಾವಣೆಗೆ ಮೆಸ್ಕಾಂಗೆ ಸೂಚನೆ.
ತುರ್ತು ನಿರ್ವಹಣೆಗಾಗಿ ಗುತ್ತಿಗೆ ಆಧಾರದಲ್ಲಿ ಹೆಚ್ಚುವರಿ ಸಿಬ್ಬಂದಿ ನಿಯೋಜನೆ.
ಅರಣ್ಯ ಇಲಾಖೆ ಸಿಬ್ಬಂದಿಗಳು ವಿಶೇಷ ಕಾರ್ಯಾಚರಣೆಗೆ ಸಿದ್ಧರಿರಲಿ.
ಸಣ್ಣ ನೀರಾವರಿ ಇಲಾಖೆ ಮೂಲಕ ರಾಜಕಾಲುವೆ, ತೋಡುಗಳ ಹೂಳು ತೆರವು ಕಾರ್ಯಾಚರಣೆ.
ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗ ನಿಯಂತ್ರಣ ಹಾಗೂ ವಿದ್ಯಾರ್ಥಿಗಳಿಗೆ ಸ್ವಚ್ಛತೆ ಕುರಿತ ಜಾಗೃತಿ ಅಭಿಯಾನಕ್ಕೆ ಆರೋಗ್ಯ ಇಲಾಖೆಗೆ ಸೂಚನೆ.
ರಸ್ತೆ ಬದಿ ಚರಂಡಿ ಸ್ವಚ್ಛತೆ, ಹಲ್ಲುಗಳ ತೆರವು, ಟ್ರಾಫಿಕ್ ಸಿಗ್ನಲ್ ಹಾಗೂ ಬ್ರಿಡ್ಜ್ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಸೂಚನೆ.
ಕಂದಾಯ ಇಲಾಖೆ ಮೂಲಕ ನಷ್ಟಗಳ ತಕ್ಷಣದ ವರದಿ, ಪರಿಹಾರ ಕ್ರಮ.
ತುರ್ತು ಸಂದರ್ಭಕ್ಕೆ ಸಹಾಯವಾಣಿ ಸಂಖ್ಯೆ ಹಾಗೂ ಕಂಟ್ರೋಲ್ ರೂಂ ಸ್ಥಾಪನೆ.
ಸಭೆಯಲ್ಲಿ ಪಾಲ್ಗೊಂಡವರು:
ಈ ಸಭೆಯಲ್ಲಿ ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ, ಸ್ಥಾಯಿ ಸಮಿತಿ ಅಧ್ಯಕ್ಷ ಸುಂದರ ಕಲ್ಮಾಡಿ, ಸಹಾಯಕ ಕಾರ್ಯಪಾಲಕ ಅಭಿಯಂತರ ದುರ್ಗಾ ಪ್ರಸಾದ್ ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗಿಯಾಗಿದ್ದರು.