ಮಾರಿಷಸ್ ರಾಷ್ಟ್ರೀಯ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಪ್ರಧಾನಿ ಮೋದಿ !

Date:

spot_img

ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಅಧಿಕೃತ ಭೇಟಿಗಾಗಿ ಮಾರಿಷಸ್‌ಗೆ ಆಗಮಿಸಿದ್ದಾರೆ. ಪೋರ್ಟ್ ಲೂಯಿಸ್ ವಿಮಾನ ನಿಲ್ದಾಣದಲ್ಲಿ ಮಾರಿಷಸ್ ಪ್ರಧಾನಿ ನವೀನ್ ರಾಮಗೂಲಂ ಅವರ ಜೊತೆಗೆ ಅವರ ಪತ್ನಿ ಸೇರಿದಂತೆ ಉನ್ನತ ಅಧಿಕಾರಿಗಳು ಮತ್ತು 200ಕ್ಕೂ ಹೆಚ್ಚು ಜನರು ಮೋದಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು.

ದ್ವೀಪ ರಾಷ್ಟ್ರದ ರಾಷ್ಟ್ರೀಯ ದಿನಾಚರಣೆ
ಇಂದು ನಡೆಯುವ ಮಾರಿಷಸ್‌ನ ರಾಷ್ಟ್ರೀಯ ದಿನಾಚರಣೆಯಲ್ಲಿ ಮೋದಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಈ ವೇಳೆ ಉಭಯ ದೇಶಗಳ ನಡುವೆ ಆರ್ಥಿಕ ಸಂಬಂಧ ಬಲಪಡಿಸಲು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗುವುದು ಎಂದು ಮೂಲಗಳು ತಿಳಿಸಿವೆ.

ಭಾರತೀಯ ಸೇನಾ ಪಡೆಗಳ ವಿಶೇಷ ಪ್ರದರ್ಶನ
ಪ್ರಧಾನಿ ಮೋದಿ ಅವರ ಈ ಭೇಟಿಯ ವೇಳೆ, ಭಾರತೀಯ ನೌಕಾಪಡೆಯ ಯುದ್ಧನೌಕೆ, ಭಾರತೀಯ ವಾಯುಪಡೆಯ ‘ಆಕಾಶ ಗಂಗಾ’ ಡೈವಿಂಗ್ ತಂಡ ಮತ್ತು ಸಶಸ್ತ್ರ ಪಡೆಗಳ ತುಕಡಿ ಮಾರಿಷಸ್‌ನಲ್ಲಿ ನಡೆಯುವ ಸಂಭ್ರಮಾಚರಣೆಯಲ್ಲಿ ಭಾಗವಹಿಸಲಿವೆ.

ನಾಯಕರು ಮತ್ತು ಭಾರತೀಯ ಸಮುದಾಯದ ಜೊತೆ ಸಂವಾದ
ಮಾರಿಷಸ್‌ನ ರಾಷ್ಟ್ರಪತಿ, ಗಣ್ಯರು ಹಾಗೂ ರಾಜಕೀಯ ಮುಖಂಡರನ್ನು ಮೋದಿ ಭೇಟಿ ಮಾಡಲಿದ್ದಾರೆ. ಈ ಭೇಟಿಯ ಬಳಿಕ ಭಾರತೀಯ ಸಮುದಾಯದೊಂದಿಗೆ ಮೋದಿ ಸಂವಾದ ನಡೆಸುವ ಸಾಧ್ಯತೆಯಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ವಿಪ್ರ ಸ್ವಉದ್ಯಮ ಯೋಜನೆ: 2 ಲಕ್ಷ ಸಾಲಕ್ಕೆ ಅರ್ಜಿ ಆಹ್ವಾನ!

ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಸ್ವಉದ್ಯೋಗಕ್ಕೆ ಬಡ್ಡಿ ರಹಿತ/ಕಡಿಮೆ ಬಡ್ಡಿಯಲ್ಲಿ ಸಾಲ ಸೌಲಭ್ಯ. ಅರ್ಜಿ ಸಲ್ಲಿಸಲು 31-08-2026 ಕೊನೆ ದಿನ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬೆಂಗಳೂರು ಇಡಿ ದಾಳಿ: ಐಸಿಸ್ ಫಂಡಿಂಗ್ ಆರೋಪದ ಮೇಲೆ 8 ಕಡೆ ಶೋಧ

ಬೆಂಗಳೂರಿನಲ್ಲಿ ಐಸಿಸ್ ಉಗ್ರ ಸಂಘಟನೆಗೆ ಹಣಕಾಸು ನೆರವು ನೀಡಿದ ಆರೋಪದ ಮೇಲೆ ಇಡಿ ಅಧಿಕಾರಿಗಳು 8 ಕಡೆ ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕರ್ನೂಲು ಬಳಿ ಭೀಕರ ಕಾರು ಅಪಘಾತ: ರವಿಚಂದ್ರ ಶೆಟ್ಟಿ ದುರ್ಮರಣ

ಆಂಧ್ರದ ಕರ್ನೂಲು ಬಳಿ ನಡೆದ ಕಾರು ಅಪಘಾತದಲ್ಲಿ ಮಂಗಳೂರಿನ ರವಿಚಂದ್ರ ಶೆಟ್ಟಿ ನಿಧನರಾಗಿದ್ದಾರೆ. ಮೂವರಿಗೆ ಗಾಯಗಳಾಗಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.