
ನವದೆಹಲಿ: ದೇಶದ 13 ವಿಮಾನ ನಿಲ್ದಾಣಗಳನ್ನು ಖಾಸಗಿ ಸಹಭಾಗಿತ್ವದಲ್ಲಿ (PPP) ಖಾಸಗೀಕರಣಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
2026ರ ಅಂತ್ಯದೊಳಗೆ ಈ ಯೋಜನೆಯನ್ನು ಪೂರ್ಣವಾಗಿ ಜಾರಿಗೊಳಿಸಲಾಗುವುದು ಎಂದು ಅವರು ಹೇಳಿದ್ದಾರೆ. ಸರ್ಕಾರಿ ಆಸ್ತಿಗಳ ವಿಲೇವಾರಿಯಿಂದ ಐದು ವರ್ಷಗಳಲ್ಲಿ ₹10 ಲಕ್ಷ ಕೋಟಿ ಆದಾಯ ಸಂಗ್ರಹಿಸಲು ಗುರಿ ಇಡಲಾಗಿದೆ.
ಈ ಪ್ರಕ್ರಿಯೆಯಡಿ, ಏಳು ಸಣ್ಣ ವಿಮಾನ ನಿಲ್ದಾಣಗಳನ್ನು ಆರು ದೊಡ್ಡ ವಿಮಾನ ನಿಲ್ದಾಣಗಳೊಂದಿಗೆ ಸಂಯೋಜಿಸಿ ಖಾಸಗೀಕರಣಕ್ಕೆ ಮುಂದಾಗಿದೆ ಎಂದು ಸಚಿವೆ ಮಾಹಿತಿ ನೀಡಿದ್ದಾರೆ.